ಬಾಗಲಕೋಟೆ | ನವೆಂಬರ್‌ನಲ್ಲಿ ಚಾಲುಕ್ಯ ಉತ್ಸವ ಆಯೋಜನೆ: ಸಚಿವ ಆರ್‌ ಬಿ ತಿಮ್ಮಾಪೂರ

Date:

ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಬಿಂಬಿಸುವ ಚಾಲುಕ್ಯ ಉತ್ಸವವನ್ನು ಇದೇ ನವೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದರು.

ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಚಾಲುಕ್ಯ ಉತ್ಸವ ಕಾರ್ಯಕ್ರಮ ಆಯೋಜನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಜಿಲ್ಲೆಯ ಐತಿಹಾಸಿಕ ನಗರಗಳಾದ ಬಾದಾಮಿ, ಪಟ್ಟದಕಲ್ಲ ಹಾಗೂ ಐಹೊಳೆಯಲ್ಲಿ ತಲಾ ಒಂದು ದಿನ ಸೇರಿ ಒಟ್ಟು ಮೂರು ದಿನಗಳ ಕಾಲ ಉತ್ಸವ ನಡೆಯಲಿದ್ದು, ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳು ಗೊತ್ತುಪಡಿಸಿದ ದಿನಾಂಕಗಳಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ರೂಪುರೇಷೆಗಳನ್ನು ಹಾಕಿಕೊಳ್ಳಲು ತಿಳಿಸಿದ ಅವರು‌, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲು ಸೂಚಿಸಿದರು. “ಉತ್ಸವದಲ್ಲಿ ನಾಡಿನ ಕಲೆ, ಸಂಸ್ಕೃತಿಯನ್ನು ಬಿಂಬಿಸುವಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ಸ್ಥಳೀಯ ಕಲಾವಿದರಿಗೆ ಶೇ.50 ಹಾಗೂ ಬೇರೆ ರಾಜ್ಯ, ರಾಷ್ಟ್ರದ ಕಲಾವಿದ-ರಿಗೆ ತಲಾ ಶೇ.50 ರಷ್ಟು ಅವಕಾಶ ಕಲ್ಪಿಸುವ ರೀತಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತವಿರುವ ಚಾಲುಕ್ಯರ ಐತಿಹಾಸಿಕ ಪರಂಪರೆ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಮೆಲಕು ಹಾಕುವ ಈ ಮೂರು ದಿನಗಳ ಸಂಗೀತ ನೃತ್ಯೋತ್ಸವದಲ್ಲಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದ ಕಲಾವಿದರು, ಸಂಗೀತಗಾರರು, ನೃತ್ಯ ತಂಡಗಳನ್ನು ಆಹ್ವಾನಿಸುವುದಲ್ಲದೇ ಚಾಲುಕ್ಯರ ನಾಡಿನ ಐತಿಹಾಸಿಕ ಪರಂಪರೆ ಕುರಿತ ವಿಚಾರಗೋಷ್ಠಿ, ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸಲು ಸೂಚಿಸಿದರು. ಅಲ್ಲದೇ ಮೂರು ಕಡೆಗಳಲ್ಲಿ ಪ್ರತ್ಯೇಕ ಕಾರ್ಯಕ್ರಮಗಳನ್ನು ರೂಪಿಸಲು ಅಧಿಕಾರಿಗಳಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...