ಬಾಗಲಕೋಟೆ | ಕಾಂಗ್ರೆಸ್ ಸರ್ಕಾರ ಬಡಜನತೆಯ ಕಲ್ಯಾಣಕ್ಕೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ: ಶಾಸಕ ಎಚ್ ವೈ ಮೇಟಿ

Date:

ಕಾಂಗ್ರೆಸ್ ಸರ್ಕಾರ ಬಡ ಜನತೆಯ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಶಾಸಕ ಎಚ್ ವೈ ಮೇಟಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಪಾರ್ವತಿ -ಪರಮೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಸ್ಥಳೀಯ ಪಟ್ಟಣ ಪಂಚಾಯಿತಿ 2024 -25ನೇ ಸಾಲಿನ ಎಸ್‌ಎಫ್‌ಸಿ, ಎಸ್‌ಎಸ್‌ಟಿಎಸ್‌ಪಿ ಸ್ಥಳೀಯ ನಿಧಿ ಹಾಗೂ ಮುಕ್ತನಿಧಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ಬುದ್ಧಿಮಾಂದ್ಯ ಮತ್ತು ವಿಕಲಚೇತನರ ಆರೈಕೆದಾರರ ಪೋಷಣ ಭತ್ಯೆಯ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಹಿಳೆಯರು ಸ್ವಾಲಂಬಿ ಬದುಕು ಕಟ್ಟಿಕೊಂಡು ಆರ್ಥಿಕವಾಗಿ ಸಬಲರಾಗುವುದರ ಜತೆಗೆ ಉತ್ತಮ ಬದುಕು ರೂಪಿಸಿಕೊಳ್ಳಬೇಕು. ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಧುಗಿರಿ | ಸುಧಾ ಓದುಗರು ಸಮಾಜವನ್ನು ಒಗ್ಗೂಡಿಸುತ್ತಿದ್ದಾರೆ : ಜಿ. ವಿ. ಆನಂದಮೂರ್ತಿ

ಪಟ್ಟಣ ಪಂಚಾಯಿತಿ ಅಧ್ಯಕ್ಷ ರಮೇಶ್ ಜಮಖಂಡಿ, ಮುಖ್ಯ ಅಧಿಕಾರಿ ಎಫ್ಎನ್ ಹುಲ್ಲಿಕೆರಿ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ, ಪಟ್ಟಣ ಪಂಚಾಯಿತಿ ಸದಸ್ಯರಾದ ರಾಜು ಕಂಬಳಾವತಿ, ದೇವಿ ಪ್ರಸಾದ್ ನಿಂಬಲಗುಂದಿ, ಗುರುಲಿಂಗಪ್ಪ ಪಾಟೀಲ, ಚಂದು ಕುರಿ, ಲಕ್ಷ್ಮಣ ಮದರ, ಮಂಜುಳಾ ಮುರಾಳ, ಮುಖಂಡರಾದ ಹುಚ್ಚಪ್ಪ ಸಿಂಹಾಸನ, ಶಂಕರಲಿಂಗಪ್ಪ ಮಂಕಣಿ, ರಮೇಶ್ ಲಮಾಣಿ, ಸಿದ್ದು ಹೊಸಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...