ಬಾಗಲಕೋಟೆ | ಆರ್‌ ಬಿ ತಿಮ್ಮಾಪುರ ವಿರುದ್ಧ ಹಗರಣ ಆರೋಪ; ಬಿಜೆಪಿ ವಿರುದ್ಧ ಪ್ರತಿಭಟನೆ

Date:

ಅಬಕಾರಿ ಖಾತೆ ಸಚಿವ ಆರ್‌ ಬಿ ತಿಮ್ಮಾಪುರ ವಿರುದ್ಧ ಬಿಜೆಪಿ ಷಡ್ಯಂತ್ರ ರಚಿಸಿ ಹಗರಣದ ಆರೋಪ ಮಾಡಲಾಗಿದೆ ಎಂದು ಸಚಿವ ತಿಮ್ಮಾಪುರ ಅವರ ಬೆಂಬಲಿಗರು ಬಾಗಲಕೋಟೆ ನಗರದಲ್ಲಿ ಪ್ರತಿಭಟನೆ ಮಾಡಿದರು.

ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ಸಚಿವರ ಬೆಂಬಲಿಗರು ನವನಗರದ ತಹಶೀಲ್ದಾರ್ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನೆ ಮೆರವಣಿಗೆ ತೆರಳಿದರು, ವೈನ್ ಮರ್ಚೆಂಟ್ಸ್‌ ಅಸೋಸಿಯೇಷನ್ ಅಧ್ಯಕ್ಷ ಗುರುಸ್ವಾಮಿ, ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗಡೆ ವಿರುದ್ಧ ಘೋಷಣೆ ಕೂಗಿ ಭಾವಚಿತ್ರ ದಹಿಸಿದರು. ಇಬ್ಬರು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಆಗ್ರಹಿಸಿದರು.

ಆರ್ ಬಿ ತಿಮ್ಮಾಪುರ ಅಭಿಮಾನಿ ಬಳಗದ ಅಧ್ಯಕ್ಷ ಶಿವಾನಂದ ಓದು ಪುಡಿ ಮಾತನಾಡಿ, “ವೈನ್ ಮರ್ಚೆಂಟ್ಸ್ ಅಸೋಸಿಯೇಷನ್‌ನಲ್ಲಿ ಗುರುಸ್ವಾಮಿ, ಗೋವಿಂದರಾಜ್ ಅವ್ಯವಹಾರ ನಡೆಸಿದ್ದಾರೆ. ತಮಗೆ ಬೇಕಾದ ಅಧಿಕಾರಿಗಳಿಗೆ ಹುದ್ದೆ ಕೊಡಿಸುವ ದುರುದ್ದೇಶದಿಂದ ಷಡ್ಯಂತ್ರ ಮಾಡಿದ್ದಾರೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸದ ಕಾರಣ ಸಚಿವರ ವಿರುದ್ಧ ಹಗರಣದ ಆರೋಪ ಮಾಡಿದ್ದಾರೆ. ಸಂಘಟನೆಯನ್ನು ಸೂಪರ್ ಸೀಡ್ ಮಾಡಿ, ಇಬ್ಬರ ವಿರುದ್ಧ ದೂರು ದಾಖಲಿಸಿ ಬಂಧಿಸಬೇಕು. ಅವರ ಮಧ್ಯದ ಲೈಸೆನ್ಸ್ ರದ್ದುಗೊಳಿಸಬೇಕು. ತಿಮ್ಮಾಪುರ ಅವರ ಮುಗ್ಧ ರಾಜಕಾರಣಿ, 40 ವರ್ಷಗಳ ರಾಜಕೀಯ ಜೀವನದಲ್ಲಿ ದುಡ್ಡು ಮಾಡಿದವರಲ್ಲ. ಕೆಲವು ಮೂರ್ಖರು ಅವರ ಹೆಸರು ಕೆಡಿಸಲು ಷಡ್ಯಂತ್ರ ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರಕ್ಷಿತಾ ಈ ಟಿ ಮಾತನಾಡಿ, “ಆರ್ ಬಿ ತಿಮ್ಮಾಪುರ ಅವರು ಹೋರಾಟದಿಂದ ಮೇಲೇ ಬಂದವರು, ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೆ ವಿಷಯ ಗೊತ್ತಿಲ್ಲ. ಹಿಂದುಳಿದ ವರ್ಗಗಳ ಸಚಿವರಿಗೆ ತೊಂದರೆ ಕೊಟ್ಟರೆ ಮಹಿಳೆಯರು ದಿಲ್ಲಿಗೆ ಬಂದು ಪ್ರತಿಭಟಿಸಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈಲ್ವೆ ನಿಲ್ದಾಣದಲ್ಲಿ ವಿಶೇಷ ಚೇತನರಿಗೆ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಮನವಿ

“ನಮ್ಮ ಸರ್ಕಾರದ ಗ್ಯಾರಂಟಿ ಯಶಸ್ಸು ನೋಡಿ ಬಿಜೆಪಿಯವರು ಕಂಗಲಾಗಿದ್ದಾರೆ. ಸರ್ಕಾರಕ್ಕೆ ಕಿರಿಕಿರಿ ಉಂಟುಮಾಡಲು ಸಚಿವರು ಆರೋಪ ಮಾಡುತ್ತಿದ್ದಾರೆ. ದಲಿತ ನಾಯಕರೆಂಬ ಕಾರಣಕ್ಕೆ ಸಚಿವರಿಗೆ ಕಿರುಕುಳ ನೀಡಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ರಾಜು ಮನ್ನಿಕೆರಿ, ಮುಖಂಡ ಗೋವಿಂದ ಕವಲಗಿ, ರಾಜು ಮೇಲಿನ ಕೇರಿ, ಅರ್ಜುನ್ ಹೊಸಮನಿ, ಮುಧೋಳ್ ಬಿಳಿಗಿ ಹುನಗುಂದ ಸೇರದಂತೆ ಜಿಲ್ಲೆಯ ನಾನಾ ಭಾಗಗಳ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...