ಬಾಗಲಕೋಟೆ | ಮನೆಯ ಮುಂದಿಟ್ಟಿದ್ದ ದೀಪದಿಂದ ಸಿಲಿಂಡರ್ ಸ್ಫೋಟ; ಎಂಟು ಮಂದಿಗೆ ಗಾಯ

Date:

ದೀಪಾವಳಿ ಹಬ್ಬದ ಹಿನ್ನೆಲೆ ಮನೆ ಮುಂದಿನ ಬ್ಯಾರೆಲ್ ಮೇಲಿಟ್ಟಿದ್ದ ದೀಪವೊಂದು ಹೊತ್ತಿಕೊಂಡು ಪಕ್ಕದಲ್ಲಿ ವ್ಯಾಪಿಸಿದ್ದರಿಂದ ಅಂದಾಜು ನಾಲ್ಕೈದು ಸಿಲಿಂಡರ್‌ಗಳು ಸ್ಫೋಟಗೊಂಡು ಎಂಟು ಮಂದಿ ಗಾಯಗೊಂಡಿದ್ದು, 7 ಬೈಕ್ ಗಳು ಸೇರಿದಂತೆ ಮನೆಯಲ್ಲಿನ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಜಿಲ್ಲೆಯ ಗದ್ದನಕೆರೆ ಕ್ರಾಸಿನಲ್ಲಿ ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಕಲ್ಮೇಶ ಧರಿಯಪ್ಪ ಲೋಕಣ್ಣ ಬಾರ (30), ಸಚಿನ್ ಪ್ರಕಾಶ್ ಮೇರಿ (28), ಗಣೇಶ್(26), ದಾಪು ದೇವಿ (28), ಡಿಂಪಲ್ ಪಟೇಲ್ (1), ಸ್ನೇಹ (22), ಐಶ್ವರ್ಯ (13), ಶೃತಿ (23) ಗಾಯಗೊಂಡಿದ್ದಾರೆ. ಇಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿನಿ ಸ್ನೇಹ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಾದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 10 20 at 5.37.58 PM

ಗದ್ದನಕೆರೆ ಕ್ರಾಸಿನಲ್ಲಿರುವ ರಾಜೇಂದ್ರ ಪ್ರಸಾದ ತಪಶೆಟ್ಟಿ ಮನೆ ಮುಂದಿನ ಬ್ಯಾರೆಲ್ ಮೇಲೆ ದೀಪಾವಳಿ ಹಬ್ಬಕ್ಕೆ ದೀಪ ಹಚ್ಚಿ ಇಟ್ಟಿದ್ದಾರೆ. ಬ್ಯಾರೆಲ್ ಒಳಗೆ ಬೋರ್ ವೆಲ್ ತೋಡುವ ಕೆಲಸಕ್ಕೆ ಬಳಸುವ ದ್ರವ ಪದಾರ್ಥ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ದೀಪ ಆರಂಭದಲ್ಲಿ ಈ ಬ್ಯಾರೆಲ್ಗೆ ತಗುಲಿದೆ. ಬಳಿಕ ಅಧಿಕಗೊಂಡು ಪಕ್ಕದಲ್ಲಿಟ್ಟಿದ್ದ ಸಿಲಿಂಡರಿಗೆ ವ್ಯಾಪಿಸಿದೆ. ಆಗ ನಾಲ್ಕೈದು ಸಿಲೆಂಡರ್ ಏಕಕಾಲಕ್ಕೆ ಸ್ಫೋಟಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಬಾಗಿಲಲ್ಲಿ ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ; ಹೊತ್ತಿ ಉರಿದ ಮನೆ

ಘಟನೆಯಲ್ಲಿ ತಪಶೆಟ್ಟಿ ಮನೆ ಮೇಲೆ ವಾಸವಿದ್ದವರು ಹಾಗೂ ನೋಡಲು ಬಂದವರು ಸೇರಿ ಒಟ್ಟು ಎಂಟು ಜನರಿಗೆ ಗಾಯಗಳಾಗಿವೆ. ಮನೆಯ ಮುಂದಿದ್ದ ಏಳು ಬೈಕುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮನೆಯೊಳಗೆ ಇಟ್ಟಿದ್ದ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ಆದರೆ, ಯಾವುದೇ ಜೀವ ಹಾನಿ ಸಂಭವಿಸಿಲ್ಲದಿರುವುದು ಸಮಾಧಾನಕರ.

ಸ್ಥಳಕ್ಕೆ ಭೇಟಿ ನೀಡಿದ ಸಚಿವ ಆರ್ ಬಿ ತಿಮ್ಮಾಪುರ ಹಾಗೂ ಶಾಸಕ ಜೆ ಟಿ ಪಾಟೀಲ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಸಚಿವರು ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಸೂಕ್ತ ಪರಿಹಾರ ಸೇರಿದಂತೆ ಸರ್ಕಾರದಿಂದ ಎಷ್ಟು ಸಾಧ್ಯವೊ ಅಷ್ಟು ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...