ಬಾಗಲಕೋಟೆ | ರ‍್ಯಾಗಿಂಗ್‌ ಕಾಟಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ಬಲಿ

Date:

ಕಾಲೇಜಿನಲ್ಲಿ ನಡೆಯುವ ರ‍್ಯಾಗಿಂಗ್‌ಗೆ ಬೇಸತ್ತು ವಿದ್ಯಾರ್ಥಿಯೊಬ್ಬರು ಡೆತ್‌ನೋಟ್‌ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿರುವ ಭಂಡಾರಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂಜಲಿ ಅವರು ಡೆತ್‌ನೋಟ್‌ನಲ್ಲಿ ಮೂವರು ವಿದ್ಯಾರ್ಥಿಗಳ ಹೆಸರು ಮತ್ತು ಮೊಬೈಲ್‌ ಸಂಖ್ಯೆಯನ್ನು ಬರೆದಿದ್ದು, ಆ ಮೂವರೇ ತಮ್ಮ ಸಾವಿಗೆ ಕಾರಣವೆಂದು ಹೇಳಿದ್ದಾರೆ.

“ವರ್ಷಾ, ಪ್ರದೀಪ್ ಮತ್ತು ಮತ್ತೊಬ್ಬ ವಿದ್ಯಾರ್ಥಿ ನನ್ನ ಬದುಕಿನಲ್ಲಿ ಸಾಕಷ್ಟು ಪರಿಣಾಮ ಬೀರಿದ್ದಾರೆ. ನನ್ನನ್ನು ಮಾನಸೀಕವಾಗಿ ಕುಗ್ಗಿಸಿದ್ದಾರೆ. ನನ್ನ ಬದುಕಿಗೆ ಮಾರಕವಾಗಿದ್ದಾರೆ. ಇವರೇ ನನ್ನ ಸಾವಿಗೆ ಕಾರಣ. ಅವರನ್ನು ಸುಮ್ಮನೆ ಬಿಡಬಾರದು” ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...