ಬಾಗಲಕೋಟೆ | ಬಾಕಿ ಕಬ್ಬು ಬಿಲ್ ಪಾವತಿ ವಿಳಂಬ; ಕಾರ್ಖಾನೆ ಮಾಲಿಕರ ಮನೆಗೆ ಮುತ್ತಿಗೆ ಎಚ್ಚರಿಕೆ

Date:

ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್ಲನ್ನು ಪಾವತಿ ಮಾಡದಿದ್ದರೆ ಕಾರ್ಖಾನೆಗಳ ಮಾಲಿಕರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ರೈತರು ಎಚ್ಚರಿಕೆ ನೀಡಿದರು.

ಅಧಿಕಾರಿಗಳ ಗಮನ ಸೆಳೆಯಲು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಿಂದ ಆಗಮಿಸಿದ್ದ ನೂರಾರು ಕಬ್ಬು ಬೆಳೆಗಾರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ರೈತ ಯುವ ಮುಖಂಡ ಯಲ್ಲಪ್ಪ ಹೆಗಡೆ ಮಾತನಾಡಿ, “ಪ್ರಸಕ್ತ ಹಂಗಾಮಿನಲ್ಲಿ ಬಾಗಲಕೋಟೆ ಜಿಲ್ಲೆಯ ಹದಿಮೂರು ಸಕ್ಕರೆ ಕಾರ್ಖಾನೆಗಳು ಸಾವಿರದ ನಲವತ್ತು ಕೋಟಿ ರೂ ಕಬ್ಬಿನ ಬಾಕಿ ಉಳಿಸಿಕೊಂಡಿವೆ. ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ರೈತರಿಗೆ 24 ಗಂಟೆಯಲ್ಲಿ ಬಿಲ್ ಪಾವತಿ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು” ಎಂದು ಆಗ್ರಹಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ಮುಖಂಡ ಮುತ್ತಪ್ಪ ಕೋಮಾರ ಮಾತನಾಡಿ, “ಸಕ್ಕರೆ ಕಾರ್ಖಾನೆಗಳಲ್ಲಿ ಇರುವ ಸಕ್ಕರೆಯನ್ನು ಮುಟ್ಟುಗೋಲು ಹಾಕಿಕೊಂಡು ಬಾಕಿ ಬಿಲ್ ಪಾವ ತಿಸಲು ಜಿಲ್ಲಾಡಳಿತ ಮುಂದಾಗಬೇಕೆಂದು” ಒತ್ತಾಯಿಸಿದರು.

ಇದನ್ನೂ ಓದಿ: ಬಾಗಲಕೋಟೆ | ಸಾಹಿತಿಗಳು ಸ್ವಾವಲಂಬಿಗಳಾಗಬೇಕು: ಶ್ರೀಧರ ಬಳಿಗಾರ

ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ ಎಂ ರೈತರಿಗೆ ಭರವಸೆ ನೀಡಿದರು. ಜಿಲ್ಲಾಧಿಕಾರಿ ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂತೆಗೆದುಕೊಂಡರು.

ಈ ವೇಳೆ ರೈತ ಮುಖಂಡರಾದ ಇರಪ್ಪ ಹಂಚಿನಾಳ, ನಾಗೇಶ ಗೊಳಶೆಟ್ಟಿ, ಬಸವರಾಜ, ಮುತ್ತಪ್ಪ ಹಿರೇಕುಂಬಿ, ಸಿದ್ದನಗೌಡ ಪಾಟೀಲ, ತಿಪ್ಪಣ್ಣ ಮೇಟಿ ಸೇರಿದಂತೆ ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...