ಬಾಗಲಕೋಟೆ | ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯ

Date:

“ಕುರಿಗಾಹಿಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು. ಕುರಿ ಮೇಯಿಸಿ ಅರಣ್ಯ ಸಂಪತ್ತು ರಕ್ಷಣೆ ಮಾಡುವ ಕುರಿಗಾಹಿಗಳಿಗಾಗಿ ಮುಂಬರುವ ಅಧಿವೇಶನದಲ್ಲಿ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು” ಎಂದು ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ಸದಸ್ಯರು ಆಗ್ರಹಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಕಾಯ್ದೆ ಹೋರಾಟ ಸಮಿತಿ ವತಿಯಿಂದ ಕುರಿಗಾಹಿಗಳಿಗೆ ತೊಂದರೆ ನೀಡುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿ ಡಾ.ಅಂಬೇಡ್ಕರ್ ವೃತ್ತದಿಂದ ತಹಸೀಲ್ದಾ‌ರ್ ಕಚೇರಿವರೆಗೆ ಕುರಿಗಳ ಸಹಿತ ತಹಸೀಲ್ದಾರ್‌ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರೈತ ಯುವ ಮುಖಂಡ ಡಾ. ಯಲ್ಲಪ್ಪ ಹೆಗಡೆ ಮಾತನಾಡಿ, “ತಾಲೂಕಿನ ಅರಣ್ಯದ ಅಂಚಿನಲ್ಲಿ ಕುರಿ ಮೇಯಿಸಲು ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಅವಕಾಶ ನೀಡದೆ ದೌರ್ಜನ್ಯ ಎಸುಗುತ್ತಿದ್ದಾರೆ. ಕುರಿಗಾಹಿಗಳು ವ್ಯಾಪಾರಸ್ಥರು ಮರ ಕಡಿದು ಮಾರಾಟ ಮಾಡುವವರು ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದ ಗಡಿ ಭಾಗದಲ್ಲಿ ಯುದ್ಧದ ಮುನ್ಸೂಚನೆ ನೀಡುವಂತಹವರು, ಅರಣ್ಯ ದೊಂದಿಗೆ, ಗುಡ್ಡಗಾಡಿನಲ್ಲಿ ಬದುಕುವ ಕುರಿಗಾಹಿಗಳು ಅರಣ್ಯ ಸಂಪತ್ತಿನ ರಕ್ಷಕರು. ಅರಣ್ಯದ ಆಗುಹೋಗುಗಳ ಬಗ್ಗೆ ನಿಗಾ ವಹಿಸುವ ನಮ್ಮ ಕುರಿಗಾಯಿಗಳಿಗೆ ತೊಂದರೆ ನೀಡುತ್ತಿರುವ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡು, ಈ ಹಿಂದಿನಂತೆಯೆ ಅರಣ್ಯ ಅಂಚಿನಲ್ಲಿ ಕುರಿಮೇಯಿಸೋಕೆ ತೊಂದರೆ ನೀಡಬಾರದು” ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ಬಳಿಕ ತಹಸೀಲ್ದಾರ್‌ವಿನೋದ ಹತ್ತಳ್ಳ ಅವರು ಕುರಿಗಾಹಿಗಳು ಅರಣ್ಯ ಅಧಿಕಾರಿ ಮತ್ತು ಪಶುವೈದ್ಯಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಿ ಮಾತನಾಡಿ, ಅರಣ್ಯ ರಕ್ಷಣೆ ನಮ್ಮೆಲ್ಲರ ಹೊಣೆ. ಅರಣ್ಯ ಇಲಾಖೆ ಹಾಗೂ ಕುರಿಗಾಹಿಗಳು ನಡುವೆ ಸಹಭಾಗಿತ್ವದಿಂದ ಇರಬೇಕು. ಕುರಿಗಾಹಿಗಳು ಅರಣ್ಯ ರಕ್ಷಣೆ ಜೊತೆಗೆ ತಮ್ಮ ಜೀವನೋಪಾಯ ಸಂರಕ್ಷಣೆ ಮಾಡಿಕೊಳ್ಳಬೇಕು. ಮೂರು ದಿನದ ವರೆಗೆ ಅರಣ್ಯ ಅಧಿಕಾರಿಗಳು ಕಾಲಾವಕಾಶ ಕೇಳಿದ್ದಾರೆ. ತಮ್ಮ ಸಮಸ್ಯೆಗೆ ಪರಿಹಾರ ನೀಡುತ್ತೇವೆ” ಎಂದು ಭರವಸೆ ನೀಡಿದರು.

ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ, ಹಾಲುಮತ ಸಮಾಜದ ರಾಜ್ಯ ಕಾರ್ಯದರ್ಶಿ ಸುವರ್ಣ ನಾಗರಾಳ, ಹೋರಾಟಗಾರರಾದ ಸಿದ್ದಪ್ಪ ಬಳಗಾನೂರ,ಬಿ ಎಸ್ ಗೋನಾಳ, ಪರಶುರಾಮ ಮಂ ಟೂರ, ಭರಮಪ್ಪಗುಳಬಾಳ, ಸಿದ್ದಪ್ಪಪೂಜಾರಿ,ಶೇಖರ ಪಂಡರಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...