ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ; ಉಸ್ತುವಾರಿ ಸಚಿವರೊಂದಿಗೆ ಹಕ್ಕೊತ್ತಾಯ ಸಭೆ

Date:

ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ ಮಾಡುತ್ತಿರಿ ಎಂಬ ವಿಷಯದ ಬಗ್ಗೆ ನಮಗೆ ಗೊಂದಲವಿದೆ ಎಂದ ರೈತ ಮುಖಂಡ ಮುತ್ತಪ್ಪ ಕೋಮಾರ ಸಚಿವರ ಗಮನ ಸೆಳೆದರು.

ಬಾಗಲಕೋಟೆ ಜಿಲ್ಲೆಯ ಮುಧೋಳ್‌ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡಿದ್ದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನರಾರಂಭದ ಕುರಿತು ಹಕ್ಕೊತ್ತಾಯ ಸಭೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರೊಟ್ಟಿಗೆ ನಡೆದ ರೈತ ಮತ್ತು ಕಾರ್ಮಿಕರ ಮುಖಂಡರ ಸಭೆಯಲ್ಲಿ ಮಾತನಾಡಿದರು.

ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಮಾತನಾಡಿ, “ನಾನು ಕಾರ್ಖಾನೆ ಪ್ರಾರಂಭಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಹಲವಾರು ಕಾನೂನು ಅಡೆ-ತಡೆಗಳನ್ನು ಬಗೆಹರಿಸಿದ್ದೇನೆ. ಜುಲೈ 4ರಂದು ಸಚಿವ ಸಂಪುಟ ಸಭೆ ಇದೆ. ಈ ಸಚಿವ ಸಂಪುಟ ಸಭೆಯಲ್ಲಿ ಕಾರ್ಖಾನೆಯನ್ನು ಲೀಸ್ ಕೊಡುವುದು ಹಾಗೂ ಕಾರ್ಖಾನೆಯ ಪ್ರಾರಂಭಕ್ಕೆ 40 ಕೋಟಿ ರೂಪಾಯಿ ಬ್ಯಾಂಕ್ ಗ್ಯಾರಂಟಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಸಚಿವ ಸಂಪುಟ ಸಭೆ ನಂತರ ಕಾರ್ಖಾನೆಯ ಪ್ರಾರಂಭದ ಬಗ್ಗೆ ಮತ್ತೆ ಎಲ್ಲ ಮುಖಂಡರು ಸಭೆ ಮಾಡಲಾಗುವುದು” ಎಂದು ಸಭೆಯಲ್ಲಿ ತಿಳಿಸಿದರು.

ಈ ಸಭೆಯಲ್ಲಿ ರೈತ ಮತ್ತು ಕಾರ್ಮಿಕರ ಮುಖಂಡರ ಜೊತೆಗೆ ಭಾಗವಹಿಸಿದ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರೂ ಕೂಡ ಕಾರ್ಖಾನೆಯ ಪ್ರಾರಂಭದ ಬಗ್ಗೆ ಸಚಿವರು ಗಟ್ಟಿ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಳಿಕ ಎಲ್ಲ ಮುಖಂಡರಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ʼಸಚಿವ ಸಂಪುಟ ಸಭೆಯ ನಂತರ ಎಲ್ಲರೂ ಸಭೆ ಸೇರೋಣʼ ಎಂದು ಹೇಳುವ ಮೂಲಕ ಸಭೆಯು ಮುಕ್ತಾಯವಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರಿ ಕಾನೂನು ಮಹಾವಿದ್ಯಾಲಯ ನಿರ್ಮಿಸಿ, ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಿ: ಎಸ್ಎಫ್ಐ ಆಗ್ರಹ

ಈ ಸಂದರ್ಭದಲ್ಲಿ ಮುತ್ತಪ್ಪ ಕೋಮಾರ, ಶುಭಾಷ ಶಿರುಬುರ, ಯುವ ವಕೀಲ ಡಾ. ಯಲ್ಲಪ್ಪ ಹೆಗಡೆ, ಈರಪ್ಪ ಹಂಚಿನಾಳ, ರಾಜು ಯಡಹಳ್ಳಿ, ಪ್ರಕಾಶ ಚಿತ್ತರಗಿ, ಗೋವಿಂದಪ್ಪ ಮೆಟಗುಡ್ಡ, ಬಸಪ್ಪ ಸಂಗನ್ನವರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...