ಬಾಗಲಕೋಟೆ | ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯ

Date:

ಅರಣ್ಯ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಬಡ ಕುಟುಂಬಗಳನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸದೆ ಅಂತಹ ರೈತರಿಗೆ ಹಕ್ಕುಪತ್ರಗಳನ್ನು ನೀಡುವ ಕೆಲಸವಾಗಬೇಕು ಎಂದು ರಾಜ್ಯ ಭೂ ಸಂರಕ್ಷಣಾ ಸಮಿತಿ ಬಾಗಲಕೋಟೆ ಜಿಲ್ಲಾ ಘಟಕದ ಸಲಹಾ ಸಮಿತಿ ಅಧ್ಯಕ್ಷ ರಾಜು ಮನ್ನಿಕೇರಿ ಒತ್ತಾಯಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿರುವ ದಬ್ಬಾಳಿಕೆ ನಿಲ್ಲಿಸಬೇಕು. ರಾಜ್ಯದಲ್ಲಿ ಬಡವರು, ಕೂಲಿಕಾರ್ಮಿಕರು, ರೈತರು, ಮಧ್ಯಮ ವರ್ಗದವರು ನೂರಾರು ವರ್ಷಗಳಿಂದ ಸರ್ಕಾರಿ ಜಮೀನಿನಲ್ಲಿ ವಾಸ ಮಾಡುತ್ತಿದ್ದಾರೆ” ಎಂದು ಹೇಳಿದರು.

ಆದರೆ ಪ್ರಧಾನಿ ಇಂದಿರಾ ಗಾಂಧಿ ಆದೇಶದಂತೆ ʼಉಳುವವನೇ ಭೂಮಿಯ ಒಡೆಯʼ ಎಂದು ಆದೇಶ ಬಂದ ಸಂದರ್ಭದಲ್ಲಿ ಬಹುತೇಕರು ಅನಕ್ಷರಸ್ತರಾಗಿದ್ದರು. ಆದರೆ ನಂತರದಲ್ಲಿ ಆಯಾ ಜಿಲ್ಲಾಡಳಿತಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಅರ್ಜಿ ಸಲ್ಲಿಸಿದ್ದು, ಅವುಗಳನ್ನು ಪುರಸ್ಕರಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಂದಾಯ ಸಚಿವ ಕೃಷ್ಣ ಭೈರೇಗೌಡ ಈ ಹಿಂದೆ, ʼಬಗ‌ರ್ ಹುಕುಂ ಅಡಿ ಕೃಷಿ ಮಾಡಿಕೊಂಡಿರುವ ರೈತರ ಜಮೀನು ಹಾಗೂ ಭೂಮಿ ಅವರವರ ಹೆಸರಿಗೆ ಮಾಡಲು ಅಕ್ರಮ ಸಕ್ರಮ ಯೋಜನೆಯಡಿ ಅಧಿಕಾರ ಇದೆʼಯೆಂದು ತಿಳಿಸಿದ್ದರು. ಆದರೆ, ಇದು ಈವರೆಗೆ ಈಡೇರಿಲ್ಲ. ಹೀಗಾಗಿ ಶೀಘ್ರದಲ್ಲೇ ರಾಜ್ಯದ ವಿವಿಧ ಭಾಗದಿಂದ ಸಮಿತಿ ಪದಾಧಿಕಾರಿಗಳು ಒಗ್ಗೂಡಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜನಸ್ಪಂದನ ಕಾರ್ಯಕ್ರಮ; ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ರಾಜ್ಯ ಭೂ ಸಂರಕ್ಷಣಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಪಾತ್ರೋಟಿ ಮಾತನಾಡಿ, “ಜಿಲ್ಲೆಯಲ್ಲಿ 8 ರಿಂದ 10 ಸಾವಿರ ಎಕರೆ ಅರಣ್ಯ ಭೂಮಿಯಲ್ಲಿರುವುದನ್ನು ಉಳಮೆ ಮಾಡಿಕೊಂಡು ಬಡ ಕುಟುಂಬಗಳು ಜೀವನ ಸಾಗಿಸುತ್ತಿದ್ದು, ಈಗ ಅರಣ್ಯ ಇಲಾಖೆಯವರು ಬಡ ಕುಟುಂಬಗಳ ಮೇಲೆ ದಬ್ಬಾಳಿಕೆ ಮಾಡುತ್ತ ಅಲ್ಲಿಂದ ಓಡಿಸಲು ಪ್ರಯತ್ನ ಮಾಡುತ್ತಿದ್ದಾರೆ. ಹಲವಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬಂದಿರುವ ರೈತ ಕುಟುಂಬಗಳಿಗೆ ಅವಕಾಶ ಮಾಡಿಕೊಡುವ ಮೂಲಕ ಹಕ್ಕುಪತ್ರ ನೀಡಬೇಕು” ಎಂದು ಆಗ್ರಹಿಸಿದರು.

ಸಮಿತಿ ಮುಖಂಡರಾದ ರಾಜು ಸಂಗಮ, ಗುರುನಾಥ ಮ್ಯಾಗೇರಿ, ಆರ್ ಎಚ್ ಗೌಡರ, ವೈ ವೈ ತಿಮ್ಮಾಪುರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...