ಬಾಗಲಕೋಟೆ | ಹಿಡಕಲ್ ಜಲಾಶಯದಿಂದ ನೀರು ಹರಿಸಲು ರೈತರ ಒತ್ತಾಯ

Date:

ಘಟಪ್ರಭಾ ನದಿಗೆ ಹಿಡಕಲ್ ಜಲಾಶಯದಿಂದ ತುರ್ತಾಗಿ ನೀರು ಹರಿಸಲು ಕ್ರಮ ಜರುಗಿಸಲು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುದೋಳ ತಹಸೀಲ್ದಾರ ಕಛೇರಿ ಮುಂಭಾಗ ರೈತರು ಪ್ರತಿಭಟನೆ ನಡೆಸಿ ತಹಸೀಲ್ದಾರರಗೆ ಮನವಿ ಸಲ್ಲಿಸಿದರು.

ಘಟಪ್ರಭಾ ನದಿಯು ಮುಧೋಳ ತಾಲೂಕಿನ ವ್ಯಾಪ್ತಿಯಲ್ಲಿ 20ರಿಂದ 25ದಿನಗಳಲ್ಲಿ ನೀರು ಖಾಲಿಯಾಗಿರುತ್ತದೆ. ಇದರಿಂದ ಮುಧೋಳ ಪಟ್ಟಣ ಒಳಗೊಂಡಂತೆ 30ಹಳ್ಳಿಗಳ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾಗಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಚಟುವಟಿಕೆಗಳಿಗೂ ನೀರು ಇಲ್ಲದ ಕಾರಣ ಇತರೆ ಬೆಳೆಗಳು ಸಂಪೂರ್ಣ ಒಣಗುತ್ತಿವೆ.

ಇದಕ್ಕಾಗಿ ಡಿಸೆಂಬರ್ 11ರ ಸಲಹಾ ಮಂಡಳಿ ಸಭೆಯ ನಿರ್ಣಯದಂತೆ, ಪ್ರತೀ ತಿಂಗಳು  ಎರಡು ಟಿಎಮ್‌ಸಿ ನೀರು ಬೀಡುಗಡೆ ಆಗಬೇಕಾಗಿತ್ತು. ಆದರೆ, ಜನವರಿ ತಿಂಗಳ ನೀರು ಬಿಟ್ಟಿರುವುದಿಲ್ಲ ಆದ್ದರಿಂದ 29, ಜನವರಿ 2024ರಂದು ತಾಲೂಕು ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಕೊಟ್ಟಿದ್ದೇವೆ. ಆದರೆ, ಇಲ್ಲಿಯವರೆಗೂ ಘಟಪ್ರಭಾ ನದಿಗೆ ನೀರು ಬಂದಿಲ್ಲ ಎಂದು ರೈತರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಣ ಪ್ರಸಕ್ತ ವರ್ಷವೂ ಹಿಡಕಲ್ ಜಲಾಶಯದಲ್ಲಿ ಈವರೆಗೆ ದಿನಾಂಕ 08/02/2024ರಂದು 31 ಟಿಎಂಸಿ ನೀರು ಸಂಗ್ರಹವಿದೆ ನಮ್ಮ ಜಿಲ್ಲೆಗೆ ಪ್ರತೀ ತಿಂಗಳು 2 ಟಿಎಂಸಿ ನೀರು ಬರಬೇಕಾದಂತಹ ಘಟಪ್ರಭಾ ನದಿಗೆ ನೀರು ಬಂದಿಲ್ಲ. ಕೂಡಲೇ ಘಟಪ್ರಭಾ ನದಿಗೆ ಎರಡು ಟಿಎಂಸಿ ನೀರನ್ನು ಹರಿಸಬೇಕೆಂದು ರೈತರು ಆಗ್ರಹಿಸಿದರು.

ಇಲ್ಲದೇ ಇದ್ದರೆ ತಹಸೀಲ್ದಾರ್ ಕಚೇರಿ, ತಾಲೂಕಾ ಆಡಳಿತ ಭವನ ಮುಧೋಳದಲ್ಲಿ ಈಗಿನಿಂದಲೇ ಆಮರಣ ಸತ್ಯಾಗ್ರಹವನ್ನು ಮಾಡುತ್ತೇವೆ ಎಂದು ಎಚ್ಚರಿಸಿ, ದಯವಿಟ್ಟು ತುರ್ತುಕ್ರಮ ಕೈಗೊಂಡು ನೀರು ಬಿಡುಗಡೆಗೆ ಕ್ರಮ ವಹಿಸಬೇಕೆಂದು ರೈತರು ಮನವಿಯಲ್ಲಿ ಒತ್ತಾಯಿಸಿದರು.

ಈ ಪ್ರತಿಭಟನೆಯಲ್ಲಿ ರೈತ ಮುಖಂಡರು ವೆಂಕಪ್ಪ ನಾಯಕ್, ಪಿ.ಎಲ್. ಹೂಗಾರ, ಎಮ್.ಎಸ್. ಹಳೆಮನಿ, ಎಮ್‌.ಬಿ. ಮುರಗೋಳ ಹಾಗೂ ರೈತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...