ಬಾಗಲಕೋಟೆ | ಘಟಪ್ರಭಾ ಪ್ರವಾಹ; ಶಾಶ್ವತ ಸೂರು, ಪರಿಹಾರಕ್ಕಾಗಿ ಸಂತ್ರಸ್ತರ ಆಗ್ರಹ

Date:

ಘಟಪ್ರಭಾ ಪ್ರವಾಹದಲ್ಲಿ ಮನೆ‌, ಮಠ ಕಳೆದುಕೊಂಡು ಸಂತ್ರಸ್ತರು ಶಾಶ್ವತ ಸೂರು ಹಾಗೂ ಸೂಕ್ತ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕಬ್ಬು ಬೆಳೆಗಾರರ ಒಕ್ಕೂಟ ಹಾಗೂ ನೆರೆ ಸಂತ್ರಸ್ತರ ಹಿತರಕ್ಷಣಾ ಸಮಿತಿಯಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ‌ ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ‌ ರಾಯಣ್ಣ ವೃತ್ತದಿಂದ ಎತ್ತಿನ ಚಕ್ಕಡಿ ಹಾಗೂ ಟ್ರ್ಯಾಕ್ಟರ್ ಸಮೇತ ಪ್ರತಿಭಟನಾ ಮೆರವಣಿಗೆ ಹೊರಟ ರೈತರು ರಾಣಾ‌ ಪ್ರತಾಪ ಸಿಂಗ್ ವೃತ್ತದಲ್ಲಿ ಜಮಖಂಡಿ-ಧಾರವಾಡ ರಾಜ್ಯ ಹೆದ್ದಾರಿ ಸಂಚಾರ ತಡೆದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

“ಘಟಪ್ರಭಾ ನದಿಯ ಪ್ರವಾಹದಿಂದ ಮುಧೋಳ ತಾಲೂಕಿನ ನದಿತೀರದ ಎಲ್ಲ ಹಳ್ಳಿಗಳು ಹಾಗೂ ಕಂದಾಯ ಜಮೀನುಗಳು ಸತತವಾಗಿ 4 ವರ್ಷ ಪ್ರವಾಹದಿಂದ ಮುಳುಗಡೆಯಾಗುತ್ತ ಬಂದಿವೆ. ಜಿಲ್ಲೆಯಲ್ಲಿ ಹಾಗೂ ತಾಲೂಕಿನಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಬ್ಯಾರೇಜ್‌ಗಳಿಂದ ಘಟಪ್ರಭಾ ನದಿಯ ನೀರು ಹೊಲಗದ್ದೆಗಳಿಗೆ ನುಗ್ಗಿ‌ ಬೆಳೆಹಾನಿಯಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಬೆಳೆಹಾನಿಯಾದರೆ ಸರ್ಕಾರ‌ ಮಾತ್ರ ಪರಿಹಾರ ನೀಡದೆ ರೈತರ ಹೊಟ್ಟೆಮೇಲೆ‌ ಹೊಡೆಯುವ ಕೆಲಸ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಘಟಪ್ರಭಾ ಸಂತ್ರಸ್ತರು

“ಪ್ರವಾಹದಿಂದ ಹಾನಿಯಾಗಿರುವ ಬೆಳೆಗೆ ಸೂಕ್ತ ಪರಿಹಾರ ಒದಗಿಸಬೇಕು. ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ₹5 ಲಕ್ಷ ಪರಿಹಾರ ನೀಡಬೇಕು” ಎಂದು ಇದೇ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಉಪ ವಿಭಾಗಾಧಿಕಾರಿ‌ ಮಾತಿಗೂ ಜಗ್ಗದ ಪ್ರತಿಭಟನಾಕಾರರು: ಪ್ರತಿಭಟನೆ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಸಂತ್ರಸ್ತರ ಸಮಸ್ಯೆ ಆಲಿಸಿ ಮನವೊಲಿಕೆಗೆ ಮುಂದಾದರು. ಎಸಿ ಮಾತಿಗೆ ಕ್ಯಾರೆ ಎನ್ನದ‌‌ ಪ್ರತಿಭಟನಾಕಾರರು, ಸ್ಥಳಕ್ಕೆ ಜಿಲ್ಲಾಧಿಕಾ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ಘಟಪ್ರಭಾ ಸಂತ್ರಸ್ತರು 1

ಮುಧೋಳ ತಾಲೂಕಿನ ತಹಶೀಲ್ದಾರ್‌ ವಿನೋದ ಅತ್ತಳ್ಳಿ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “20 ಹಳ್ಳಿಗಳು ಹಾನಿಗೊಳಗಾಗಿದ್ದು, ಸೂಕ್ತ ಪರಿಹಾರ ಒದಗಿಸುವ ಪ್ರಯತ್ನ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರು ಸಮೀಕ್ಷೆ ಮಾಡಲು ಸೂಚಿಸಿದ್ದಾರೆ. ಆದಷ್ಟು ಬೇಗ ಶೀಘ್ರ ಕ್ರಮ ಕೈಗೊಳ್ಳಲಾಗುವುದು” ಎಂದು ಮಾಹಿತಿ ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತೀರ್ಥಹಳ್ಳಿ ತಾಲೂಕಿನ ಹಲವು ಅರಣ್ಯ ಅಧಿಕಾರಿಗಳ ವರ್ಗಾವಣೆ

ಈ ಸಂದರ್ಭದಲ್ಲಿ ರೈತ ಮುಖಂಡರಾದ ದುಂಡಪ್ಪ ಯರಗಟ್ಟಿ, ಬಸವಂತ ಕಾಂಬಳೆ, ಮುತ್ತಪ್ಪ ಕೋಮಾವಾರ, ರಾಜೇಂದ್ರ ಚಂದನಚೋರ, ಮಹೇಶ ಪಾಟೀಲ, ಮುತ್ತು ಹೊಸಕೋಟೆ, ಪರಸು ನಿಗಡೆ, ಸದಾಶಿವ ಕುಂಚನೂರ್, ಶಿವಪ್ಪ ಚೌದರಿ, ಸದಾಶಿವ ತೆಲಿ, ನಾಗೇಶ ಸೊರಗಾವಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...