ಬಾಗಲಕೋಟೆ | ಕೋಮು ಕಾರ್ಯಕರ್ತರಿಗೆ ಬಂದೂಕು ತರಬೇತಿ: ಶ್ರೀರಾಮಸೇನೆಯ 27 ಮಂದಿ ವಿರುದ್ಧ ಎಫ್‌ಐಆರ್

Date:

ಭಾರತದಲ್ಲಿ ಹಿಂದುತ್ವವಾದಿ, ಕೋಮುವಾದಿ ಭಯೋತ್ಪಾದಕತೆ ಹೆಚ್ಚುತ್ತಿದೆ. ಕೋಮು ದ್ವೇಷವನ್ನು ಹರಡಲಾಗುತ್ತಿದೆ. ಇಂತಹ ಸಮಯದಲ್ಲಿ, ಹಿಂದುತ್ವ ಕೋಮುವಾದಿ ಸಂಘಟನೆ ಶ್ರೀರಾಮ ಸೇನೆಯು ತನ್ನ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡುತ್ತಿದೆ. ಬಾಗಲಕೋಟೆಯಲ್ಲಿ 186 ಹಿಂದುತ್ವವಾದಿ ಕಾರ್ಯಕರ್ತರಿಗೆ ಆರು ದಿನಗಳ ಬಂದೂಕು ಬಳಸುವ ಬಗ್ಗೆ ತರಬೇತಿ ನೀಡಿದೆ. ಗನ್ ತರಬೇತಿ ನೀಡಿದ್ದ ಆರೋಪದ ಮೇಲೆ ಶ್ರೀರಾಮಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಸೇರಿದಂತೆ 27 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

2024ರ ಡಿಸೆಂಬರ್ 9ರಿಂದ ಆರು ದಿನಗಳ ಕಾಲ ಗಂಗಾಧರ ಕುಲಕರ್ಣಿ ನೇತೃತ್ವದಲ್ಲಿ ಹಿಂದುತ್ವವಾದಿ ಕಾರ್ಯಕರ್ತರಿಗೆ ಬಂದೂಕು ತರಬೇತಿ ನೀಡಲಾಗಿತ್ತು. ತರಬೇತಿ ನೀಡುತ್ತಿರುವ ಕೆಲಸ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ತರಬೇತಿಯನ್ನು ಸಮರ್ಥಿಸಿಕೊಂಡಿದ್ದ ಕುಲಕರ್ಣಿ,  “ಏರ್‌ಗನ್ ಮೂಲಕ ಸ್ವ-ರಕ್ಷಣೆ ತರಬೇತಿ ನೀಡಿದ್ದೇವೆ. ಪ್ರತಿವರ್ಷ ಆಯ್ದ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತದೆ. ಮುಂದಿನ ಸವಾಲು ಎದುರಿಸಲು ಯುವಕರನ್ನು ಸಜ್ಜು ಮಾಡಿದ್ದೇವೆ. ಸ್ವ-ಸುರಕ್ಷೆಗಾಗಿ ವಿವಿಧ ರಕ್ಷಾ ತರಬೇತಿ ನೀಡಲಾಗಿದೆ” ಎಂದು ಹೇಳಿಕೊಂಡಿದ್ದರು.

ಆದಾಗ್ಯೂ, ಸಂಘಟನೆಯೊಂದು ತನ್ನ ಕಾರ್ಯಕರ್ತರಿಗೆ ಬಂದೂರು ತರಬೇತಿ ನೀಡುವುದು ಕಾನೂನು ಬಾಹಿರ. ಮಾತ್ರವಲ್ಲದೆ, ಹಿಂಸಾಚಾರ, ಹಿಂಸೆ, ಭಯೋತ್ಪಾದನೆಗಾಗಿ ನಡೆಸುವ ಸಂಚು, ತಂತ್ರವೆಂದು ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೀಗ, ಶ್ರೀರಾಮ ಸೇನೆಯ 27 ಮಂದಿ ಕಾರ್ಯಕರ್ತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಸದ್ಯ, ದೇಶಾದ್ಯಂತ ಕೋಮು ಹಿಂಸಾಚಾರಗಳು ಹೆಚ್ಚುತ್ತಿವೆ. ಪ್ರಧಾನಿ ಮೋದಿಯೂ ಸೇರಿದಂತೆ ಹಲವಾರು ಬಲಪಂಥೀಯರ ರಾಷ್ಟ್ರ ನಾಯಕರು ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ, ದ್ವೇಷ ಪೂರಿತ ಭಾಷಣಗಳನ್ನು ಮಾಡುತ್ತಿದ್ದಾರೆ. ಹಲ್ಲೆ, ದಾಳಿಗಳ ಬಗ್ಗೆಯೂ ಕೆಲವು ಹಿಂದುತ್ವವಾದಿ ಮುಖಂಡರು ಬಹಿರಂಗವಾಗಿಯೇ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾದ ಬಳಿಕ ಕೆಲವು ಹಿಂದುತ್ವವಾದಿಗಳು ತಮ್ಮ ಮುಂದಿನ ಗುರಿ ಕಾಶಿ, ಮಥುರಾ, ಸಂಭಲ್, ಶ್ರೀರಂಗಪಟ್ಟಣದಲ್ಲಿರುವ ಮಸೀದಿಗಳು ಎಂದು ಹೇಳಿಕೊಂಡಿದ್ದಾರೆ. ಇದೇ ವೇಳೆ, ಬಂದೂಕು ತರಬೇತಿಗಳು ನಡೆಯುತ್ತಿರುವುದು ಕಳವಳ, ಆಘಾತ ಹುಟ್ಟುಹಾಕಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...