ಬಾಗಲಕೋಟೆ | ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ; ಆರೋಪ

Date:

ರಾಜ್ಯ ಸರ್ಕಾರ ಜಾತಿಗಣತಿಯಲ್ಲಿ ನೇಕಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲೆಯ ಇಳಕಲ್ ನೇಕಾರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇಳಕಲ್ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ತಮ್ಮ ಸಮುದಾಯವನ್ನು ಸರಿಯಾಗಿ ಗುರುತಿಸದೆ ಹಾಗೂ ಗಣತಿಯಲ್ಲಿ ʼನೇಕಾರʼ ಎಂಬುದನ್ನು ಸ್ಪಷ್ಟವಾಗಿ ಪ್ರತ್ಯೇಕವಾಗಿ ಉಲ್ಲೇಖಿಸದೆ ನಿರ್ಲಕ್ಷ್ಯ ವಹಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೇಕಾರ ಮುಖಂಡ ಲಕ್ಷ್ಮಣ ಗುರಮ್ ಮಾತನಾಡಿ, “ರಾಜ್ಯದಲ್ಲಿ 29 ನೇಕಾರ ಸಮುದಾಯಗಳಿವೆ. ಇವೆಲ್ಲವನ್ನೂ ಸರಿಯಾಗಿ ಗುರುತಿಸಿ ಸಮರ್ಪಕವಾಗಿ ಸರ್ವೇ ಮಾಡಬೇಕಾಗಿತ್ತು. ಆದರೆ ಜಾತಿಗಣತಿಯ ಕಾಲಮ್‌ನಲ್ಲಿ ನೇಕಾರ ಎಂಬ ಗುರುತು ಕಾಣಿಸುತ್ತಿಲ್ಲ. ಇದು ನಮ್ಮ ಸಮುದಾಯದ ಮೇಲೆ ದೊಡ್ಡ ಅನ್ಯಾಯವಾಗಿದೆ. ಸರ್ಕಾರ ಈಗಲಾದರೂ ಸಮುದಾಯದ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಪಂಚಮಸಾಲಿ ಸಮಾಜದ ಹಿಡಿತಕ್ಕೆ ಎರಡು ಗುಂಪುಗಳ ನಡುವೆ ಸಂಘರ್ಷ

ಮತ್ತೊಬ್ಬ ಮುಖಂಡ ಸತೀಶ್ ಸಪ್ಪರದ ಮಾತನಾಡಿ, “ಸರ್ಕಾರ ರೈತ ಹಾಗೂ ನೇಕಾರರನ್ನು ಎರಡು ಕಣ್ಣುಗಳೆಂದು ವರ್ಣಿಸುತ್ತಿದೆ. ಆದರೆ ಜಾತಿಗಣತಿಯಲ್ಲಿ ನೇಕಾರ ಸಮುದಾಯವನ್ನು ಮರೆತಿರುವುದು ಶೋಕಾಜನಕ. ರಾಜ್ಯದಲ್ಲಿ 60 ರಿಂದ 70 ಲಕ್ಷ ನೇಕಾರ ಸಮುದಾಯದವರು ಇದ್ದರೂ ಅವರಿಗೆ ನ್ಯಾಯ ಸಿಗದಂತಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ವಿವಿಧ ನೇಕಾರ ಸಮುದಾಯಗಳ ಮುಖಂಡರು, ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...