ಬಾಗಲಕೋಟೆ | ಎಸ್ಐಟಿ ತನಿಖೆಗೆ ಸಂಪೂರ್ಣ ಅಧಿಕಾರ ನೀಡುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

Date:

“ಧರ್ಮಸ್ಥಳದ ವ್ಯಾಪ್ತಿ ಪ್ರದೇಶದಲ್ಲಿ ಸೌಜನ್ಯ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ದುರ್ಘಟನೆಯ ನಂತರ, ಪೂರ್ವದಲ್ಲಿ ಹಲವಾರು ಅಮಾಯಕ ಮಹಿಳೆಯರ ಅತ್ಯಾಚಾರ, ಕೊಲೆ ಹಾಗೂ ಪುರುಷರ ಕೊಲೆ ಪ್ರಕರಣಗಳು ನಡೆದಿವೆ’ ಎಂಬ ಆರೋಪವು ಕೇಳಿ ಬಂದಿದ್ದು, ಎಸ್ಐಟಿ ತನಿಖೆಗೆ ಸಂಪೂರ್ಣ ಅಧಿಕಾರ ಮತ್ತು ಸಹಕಾರ ನೀಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಹೇಳಿದರು.

 ಬಾಗಲಕೋಟೆ ಪಟ್ಟಣದ ಜಿಲ್ಲಾಡಳಿತ ಭವನದ ಎದುರಿಗೆ (ಹೆಚ್ ಶಿವರಾಮೇಗೌಡ) ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸೌಜನ್ಯ ಪ್ರಕರಣ ದ ಕುರಿತು ಎಸ್ಐಟಿ  ತನಿಖೆಗೆ ಸಂಪೂರ್ಣ ಅಧಿಕಾರ ನೀಡುವಂತೆ ಒತ್ತಾಯಿಸಿ ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕರ್ನಾಟಕದ ಧರ್ಮಸ್ಥಳ ಕ್ಷೇತ್ರವು ಅಸಂಖ್ಯಾತ ಭಕ್ತರು ಆರಾಧಿಸುವ, ಪೂಜಿಸುವ ಧಾರ್ಮಿಕ ಸುಕ್ಷೇತ್ರ ಹಾಗೂ ಪ್ರವಾಸಿಗರನ್ನು ಸೆಳೆಯುವ ಅತ್ಯಂತ ಸುಂದರವಾದ ನಿಸರ್ಗ ಪ್ರದೇಶವಾಗಿದೆ. ಇಂತಹ ಪ್ರದೇಶದಲ್ಲಿ ‘ಸೌಜನ್ಯ ಎಂಬ ಬಾಲಕಿಯ ಅತ್ಯಾಚಾರ ಮತ್ತು ಕೊಲೆಯ ದುರ್ಘಟನೆಯ ನಂತರ ಅದಕ್ಕೂ ಪೂರ್ವದಲ್ಲಿ ಹಲವಾರು ಅಮಾಯಕ ಮಹಿಳೆಯರ ಅತ್ಯಾಚಾರ ಮತ್ತು ಕೊಲೆ ಹಾಗೂ ಪುರುಷರ ಕೊಲೆ ಪ್ರಕರಣಗಳು ನಡೆದಿವೆ’ ಎಂಬ ಆರೋಪವು ಕೇಳಿ ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“1994 ರಿಂದ 2014 ರವರೆಗೆ ಸದರಿ ಪುಣ್ಯಕ್ಷೇತ್ರದ ಸ್ವಚ್ಛತಾ ಕಾರ್ಯನಿರ್ವಹಿಸುತ್ತಿದ್ದೆ’ ಎಂದು ಹೇಳಿಕೊಳ್ಳುತ್ತಿರುವ ವ್ಯಕ್ತಿಯು ‘ತಾನು ಕಾರ್ಯನಿರ್ವಹಿಸಿದ ಅವಧಿಯಲ್ಲಿ ನೂರಾರು ಶವಗಳನ್ನು ಗ್ರಾಮ ವ್ಯಾಪ್ತಿಯಲ್ಲಿ ಹೂತು ಹಾಕಿದ್ದೇನೆ. ಸರಕಾರ ಮತ್ತು ನ್ಯಾಯಾಂಗ ನನಗೆ ರಕ್ಷಣೆ ನೀಡಿದರೆ ಸಂಬಂಧಪಟ್ಟ ಇಲಾಖೆಯ ಸಮಕ್ಷಮ ಶವಗಳನ್ನು ಹೂತಿಟ್ಟ ಜಾಗಗಳನ್ನು ತೋರಿಸುತ್ತೇನೆ’ ಎಂದು ಗೌರವಾನ್ವಿತ ನ್ಯಾಯಾಧೀಶರ ಸಮ್ಮುಖದಲ್ಲಿ ಕಲಂ 164 ರ ಅಡಿ ಸಾಕ್ಷಿ ದೂರುದಾರನಾಗಿ ಹೇಳಿಕೆ ನೀಡಿದ್ದಾರೆ” ಎಂದು ಹೇಳಿದರು.

“ದೇಶದ ಜನತೆಯ ಮನಸ್ಸಿನಲ್ಲಿ ಅನೇಕ ಊಹಾಪೋಹಗಳಿಗೆ ಎಡೆ ಮಾಡಿಕೊಟ್ಟಂತಿದೆ. ಆ ವ್ಯಕ್ತಿ ಹಲವಾರು ವರ್ಷಗಳ ಕಾಲ ಸ್ವಚ್ಛತಾ ಕಾರ್ಮಿಕನಾಗಿ ಕಾರ್ಯ ನಿರ್ವಹಿಸಿದ್ದಾನೆ. ಸದರಿ ಸಾಕ್ಷಿ ದೂರುದಾರ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ, ಕಲಂ 164 ರ ಅಡಿ ಗೌರವಾನ್ವಿತ ನ್ಯಾಯಾಧೀಶರ ಸಮ್ಮುಖದಲ್ಲಿ ಹೇಳಿಕೆ ನೀಡಿ, ಬಹುತೇಕ ಒಂದು ತಿಂಗಳಾದರೂ ಇವತ್ತಿನವರೆಗೆ ಸಾಕ್ಷಿ ದೂರುದಾರನನ್ನು ಕರೆದುಕೊಂಡು ಶವಗಳನ್ನು ಹೂತಿಟ್ಟ ಜಾಗಗಳನ್ನು ಪರಿಶೀಲನೆ ಅಥವಾ ಪಂಚನಾಮೆ ಮಾಡುತ್ತಿಲ್ಲ. ಈ ನಡೆ ನೋಡಿದರೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ಇಲಾಖೆಯ ಕಾರ್ಯವೈಖರಿ ಬಗ್ಗೆ ದಟ್ಟ ಅನುಮಾನಕ್ಕೆ ಎಡೆ ಮಾಡಿಕೊಟ್ಟಂತಿದೆ. ಈ ಎಲ್ಲ ಆಘಾತಕಾರಿ ಬೆಳವಣಿಗೆ ಗಳನ್ನು ಕಂಡು ರಾಜ್ಯದ ಜನತೆಯ ಆಕ್ರೋಶ ಇಮ್ಮಡಿಯಾಗುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಎಲ್ಲವನ್ನು ಮನಗಂಡ ರಾಜ್ಯ ಸರಕಾರ ಅತ್ತ ಕಡೆ ಪ್ರಭಾವಿಗಳಿಗೂ ನೋವಾಗದಂತೆ ಇತ್ತ ಜನತೆಯ ಆಕ್ರೋಶಕ್ಕೂ ತಾತ್ಕಾಲಿಕ ಮುಲಾಮು ಸವರಿದಂತೆ ರಾಜಕೀಯ ಜಾಣ್ಮೆ  ಪ್ರದರ್ಶಿಸುತ್ತಿದೆ. ಸಂಪೂರ್ಣ ಸ್ವಾತಂತ್ರ್ಯವಿಲ್ಲದಂತಹ, ಮಾನ್ಯ ನ್ಯಾಯಾಲಯಕ್ಕೆ ವರದಿ ಸಲ್ಲಿಸುವ, ಅಧಿಕಾರವಿಲ್ಲದಂತಹ ವಿಶೇಷ ತನಿಖಾ ತಂಡ(ಎಸ್.ಐ.ಟಿ.) ರಚಿಸುವ ಮೂಲಕ ತೋರಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಗಳ ತನಿಖೆಗೆ ಎಸ್.ಐ.ಟಿ. ರಚನೆ: ಡಿವೈಎಫ್ಐ ಸ್ವಾಗತ

“ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್.ಐ.ಟಿ.) ಯು ಯಾವುದೇ ಪ್ರಭಾವಕ್ಕೂ ಒಳಗಾಗದೆ ಪಾರದರ್ಶಕ ತನಿಖೆ ನಡೆಸಿ  ನಿಜವಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಬಸವರಾಜ ಧರ್ಮಂತಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳಾದ ಸಂಜೀವ ಡಿಗ್ಗಿ, ಪರಶುರಾಮ ಬುಳ್ಳಾಪೂರ, ಸಂತೋಷ ಚಿನಿವಾಲ, ಗಣೇಶ ನಾಯಕ, ತಿಮ್ಮಣ್ಣ ಕುರುಬರ, ಸಂತೋಷ ಚಿನಿವಾಲ, ರವಿ ಅಂಬಿಗೇರ, ಸ್ಪಂದನ ಮಾಚಾ, ಶರಣು ಗಾಣಿಗೇರ, ಮಲ್ಲು ಅಂಗಡಿ, ಮಂಜುಳಾ ಅಂಗಡಿ, ಶಾಂತಾ ಬಾವಿಕಟ್ಟಿ, ಕಸ್ತೂರಿಬಾಯಿ ಮೆಹರವಾಡೆ, ಶಬಾನಾ ಲಿಂಗಸೂರ, ಈಶ್ವರ ದೊಡಮನಿ, ಆನಂದ ಹಳ್ಳದಮನಿ, ಸಾದಿಕ್ ತಾಳಿಕೋಟಿ, ಅಬ್ದುಲ್ ಗಬ್ಬೂರ, ಪರಶುರಾಮ ಭಜಂತ್ರಿ, ಪರಶುರಾಮ ಕಲಾದಗಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...