ಬಾಗಲಕೋಟೆ | ಸಾರ್ವಜನಿಕ ಸೌಲಭ್ಯಕ್ಕೆ ಮೀಸಲಿಟ್ಟ ಜಾಗಗಳ ಅತಿಕ್ರಮಣ ತೆರವಿಗೆ ಕರವೇ ಮನವಿ

Date:

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ಉದ್ಯಾನ ಹಾಗೂ ಸಾರ್ವಜನಿಕ ಸೌಲಭ್ಯಕ್ಕಾಗಿ ಮೀಸಲಿಟ್ಟ ಜಾಗಗಳು ಕೆಲ ಪ್ರಭಾವಿಗಳ ಪಾಲಾಗುತ್ತಿದ್ದು, ಕೂಡಲೇ ಅತಿಕ್ರಮಣ ತೆರವುಗೊಳಿಸಿ ಸಾರ್ವಜನಿಕ ಆಸ್ತಿ ರಕ್ಷಣೆಗೆ ಪಟ್ಟಣ ಪಂಚಾಯಿತಿ ಮುಂದಾಗಬೇಕು ಎಂದು ಕರವೇ ಕಾರ್ಯಕರ್ತರು ಪಟ್ಟಣ ಪಂಚಾಯತ್‌ ಎದುರು ಪ್ರತಿಭಟನೆ ಮಾಡಿ ಬಳಿಕ ಪಂಚಾಯತಿ ಮುಖ್ಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, “ನಾಗರಿಕ ಸೌಲಭ್ಯ ಹಾಗೂ ಉದ್ಯಾನವನ ಜಾಗಗಳು ಪ್ರಭಾವಿಗಳ ಪಾಲಾಗಿವೆ. ಬಡಾವಣೆಯನ್ನು ಎನ್‌ಎ ಮಾಡುವಾಗ ಅಲ್ಲಿನ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸಲು ಕೆಲ ಜಾಗಗಳನ್ನು ಮೀಸಲಿಡಲಾಗುತ್ತದೆ. ಆದರೆ, ಸಾರ್ವಜನಿಕ ಆಸ್ತಿಯನ್ನು ಕೆಲವರು ಕಬಳಿಸಿದ್ದಾರೆ. ಭೂಮಾಫಿಯಾಗೆ ಕೆಲ ಅಧಿಕಾರಿಗಳು ಬೆಂಬಲವಾಗಿ ನಿಂತಂತೆ ಕಾಣುತ್ತಿದೆ” ಎಂದು ಆರೋಪಿಸಿದರು.

“ಯಾರದೇ ಪ್ರಭಾವಕ್ಕೂ ಒಳಗಾಗದೆ ಅತಿಕ್ರಮಣ ಮಾಡಿದ ಸಾರ್ವಜನಿಕ ಆಸ್ತಿಯನ್ನು ತೆರವುಗೊಳಿಸಬೇಕು. ಒಂದು ವೇಳೆ 15 ದಿನದಲ್ಲಿ ಕಾರ್ಯಾಚರಣೆ ನಡೆಸದಿದ್ದರೆ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ದಿವ್ಯಾಂಗರ ಪ್ರತಿಭೆಗಳಿಗೆ ಪ್ರೋತ್ಸಾಹವಿದ್ದಲ್ಲಿ ಉತ್ತಮ ಸಾಧನೆ ಸಾಧ್ಯ – ಬಿಷಪ್ ಜೆರಾಲ್ಡ್ ಲೋಬೊ

ಹುನಗುಂದ ಮತಕ್ಷೇತ್ರದ ಕರವೇ ಅಧ್ಯಕ್ಷ ರಂಝಾನ್‌ ನದಾಫ್, ಇಳಕಲ್ ಘಟಕದ ಅಧ್ಯಕ್ಷ ಮಹಾಂತೇಶ ವಂಕಲ ಕುಂಟಿ, ಹುನಗುಂದ ಘಟಕದ ರೋಹಿತ ಬಾರಕೇರ, ಕಾರ್ಮಿಕ ಘಟಕದ ಅಧ್ಯಕ್ಷ ಸೈಯದ್ ಬೇಪಾರಿ, ಸಂಗು ಗ್ವಾತಗಿ, ಅಶೋಕ ಪೂಜಾರಿ, ಬಸವರಾಜ ಅಂಬಿಗೇರ, ಚಂದ್ರು ಹಳ್ಳಿ, ಶರಣಪ್ಪ ಹುಗ್ಗೆನ್ನವರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...