ಬಾಗಲಕೋಟೆ | ನಾನಾ ಬೇಡಿಕೆ ಈಡೇರಿಕೆಗೆ ಕಿಸಾನ್‌ ಸಂಘ ಒತ್ತಾಯ

Date:

ಸಮಪರ್ಕ ರಸಗೊಬ್ಬರ ಪೂರೈಕೆ, ಜಿಎಸ್ ಬಿಸಿ, ಕೆಬಿಜೆಎನ್‌ಎಲ್ ಹಾಗೂ ಎಮ್ಎಲ್‌ಬಿಸಿ, ಕಾಲುವೆಗಳಿಂದ ನೀರು ಹರಿಸುವುದು, ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಉತ್ತರ ಪ್ರಾಂತ, ಬಾಗಲಕೋಟೆ ಜಿಲ್ಲಾ ಘಟಕ ಹಾಗೂ ಬೀಳಗಿ ತಾಲೂಕು ಘಟಕ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

ತಹಶೀಲ್ದಾರ್‌ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಮಾತನಾಡಿದ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರೂಪಾಕ್ಷಯ್ಯ ಹಿರೇಮಠ, ”ರೈತರು ಈಗಾಗಲೇ ಹಲವು ಬೆಳೆಗಳನ್ನು ಬೆಳೆದಿದ್ದು, ಫಸಲುಗಳಿಗೆ ಯೂರಿಯಾ ರಸಗೊಬ್ಬರದ ಅಗತ್ಯವಿದೆ. ಸಾಕಷ್ಟು ಸಂಗ್ರಹವಿದ್ದರೂ ಕೂಡ ಪೂರೈಕೆದಾರರು ಕೊರತೆ ಇದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಕೆಲ ವ್ಯಾಪಾರಸ್ಥರು ತಮಗೆ ಬೇಕಾದವರಿಗೆ ಹೆಚ್ಚಿನ ದರದಲ್ಲಿ ರಸಗೊಬ್ಬರ ಪೂರೈಕೆ ಮಾಡುತ್ತಿದ್ದು, ಅಂಥವರ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಉತ್ತರ ಪ್ರಾಂತ ಕಾರ್ಯಕಾರಿಣಿ ಸದಸ್ಯ ಸುಬ್ಬರಾಯಗೌಡ ಪಾಟೀಲ ಮಾತನಾಡಿ, “ಬಾಗಲಕೋಟೆ ಸಭೆಯಲ್ಲಿ ಕೃಷ್ಣ, ಘಟಪ್ರಭೆ, ಮಲಪ್ರಭಾ ನದಿಗಳು ತುಂಬ ಹರಿಯುತ್ತಿವೆ. ನರಿಗಳ ನೀರನ್ನು ಕಾಲುವೆಗಳಿಗೆ ಹರಿಸಿ ರೈತರ ಬೆಳೆಗಳ ಸಂರಕ್ಷಣೆಗೆ ಡಿಸಿ ನೇತೃತ್ವದಲ್ಲಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಇಲಾಖೆಯ ಅಧಿ ಕಾರಿಗಳ ಸಭೆ ಕರೆದು ಶಾಶ್ವತ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ

ಜಿಲ್ಲಾ ಉಪಾಧ್ಯಕ್ಷ ಎಂ.ವೈ.ವಡವಾಣಿ ಮಾತನಾಡಿ, “ಒಂದು ವಾರದಲ್ಲಿ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.

ತಾಲೂಕು ಅಧ್ಯಕ್ಷ ಮಲ್ಲಪ್ಪ ಗಾಣಿಗೇರ, ಮದುದಾಪುರ, ಸರ್ಜರ ಜೈನಾಪೂರ, ಹನುಮಂತ ದೊರೆಗೊಳ, ರಮೇಶ ಸಾರವಾಡ, ಲಕ್ಷ್ಮಣ ಸವನಾಳ, ವಿಶ್ವಲ ಬಿರುದಾರ. ಅಂದಾನಯ್ಯ ವಿಭೂತಿ, ಮನ್ಸೂರರಬ ಮುಜಾವರ, ಲಕ್ಷ್ಮಣ ತಳವಾರ, ಪಕೀರಪ್ಪ ಕವಳ್ಳಿ ನಿಂಗಪ್ಪ ಅನಗವಾಡಿ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...