ಬಾಗಲಕೋಟೆ | ಕ್ಷೀರ ಭಾಗ್ಯದ ಹಾಲಿಗೆ ಕನ್ನ; 127 ಮುಖ್ಯ ಶಿಕ್ಷಕರಿಗೆ ನೋಟಿಸ್

Date:

ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಹಾಲು ಕೊಡಲು ಶಾಲೆಗಳಿಗೆ ವಿತರಿಸಲಾಗುವ ಹಾಲಿನ ಪುಡಿಯನ್ನು ಕದ್ದು ಮಾರಾಟ ಮಾಡುತ್ತಿದ್ದ ಜಾಲವನ್ನು ಬಾಗಲಕೋಟೆ ಪೊಲೀಸರು ಬೇಧಿಸಿದ್ದಾರೆ. ಜಿಲ್ಲೆಯ 127 ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ.

ಜಿಲ್ಲೆಯಲ್ಲಿ ಕ್ಷೀರ ಭಾಗ್ಯ ಯೋಜನೆಯಡಿ ಶಾಲೆಗಳಿಗೆ ಬರುವ ಹಾಲಿನ ಪುಡಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಮಕ್ಕಳ ಹಾಲಿಗೆ ಕನ್ನ ಹಾಕಲಾಗುತ್ತಿದೆ ಎಂಬ ಆರೋಪ ಈ ಹಿಂದೆಯಿಂದಲೇ ಕೇಳಿಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದಲ್ಲಿ ದಾಳಿ ನಡೆಸಿದ್ದ ಪೊಲೀಸರು ಟನ್‌ ಗಟ್ಟಲೆ ಹಾಲಿನ ಪ್ಯಾಕೆಟ್‌ಗಳನ್ನು ಜಪ್ತಿ ಮಾಡಿದ್ದರು. ಆ ಪ್ರಕರಣದಲ್ಲಿ ಇದೀಗ, 127 ಶಾಲೆಗಳ ಮುಖ್ಯ ಶಿಕ್ಷಕರಿಸಿಗೆ ಪೊಲೀಸರು ನೋಟಿಸ್‌ ಕೊಟ್ಟಿದ್ದಾರೆ.

ಸೂಳಿಕೇರಿಯಲ್ಲಿ ದಾಳಿ ನಡೆಸಿದ್ದ ಪೊಲೀಸರು ಸುಮಾರು 18.14 ಲಕ್ಷ ರೂ. ಮೌಲ್ಯದ ಹಾಲಿನ ಪುಡಿ ಪ್ಯಾಕೆಟ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಪಾಕೇಟ್‌ಗಳನ್ನು ಜಪ್ತಿ ಮಾಡಿದ್ದರು. ಇದರಲ್ಲಿ, ಬರೋಬ್ಬರಿ 4,475 ಕೆಜಿ ಹಾಲಿನ ಪುಡಿ ಪಾಕೇಟ್‌ಗಳಿದ್ದವು. ದಾಳಿ ವೇಳೆ ಆರೋಪಿ ಸಿದ್ದಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯನ್ನು ವಿಚಾರಣೆ ಒಳಪಡಿಸಿದಾಗ, ಆತ ಯಾವೆಲ್ಲ ಶಾಲೆಗಳಿಂದ ಹಾಲಿನ ಪ್ಯಾಕೆಟ್‌ ಬರೆದಿದ್ದನೆಂಬುದರ ಬಗ್ಗೆ ಮಾಹಿತಿ ನೀಡಿದ್ದಾನೆ. ಅಲ್ಲದೆ, ಹಾಲಿನ ಪ್ಯಾಕೆಟ್‌ಗಳನ್ನು ಮಹಾರಾಷ್ಟ್ರ ಸಾಗಿಸುತ್ತಿದ್ದುದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ವರದಿ ಓದಿದ್ದೀರಾ?: ಕೊಲೆಗೆ ಸುಪಾರಿ ಆರೋಪ; ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಆತನ ಹೇಳಿಕೆ ಪಡೆದ ಪೊಲೀಸರು ಬಾಗಲಕೋಟೆ, ಬಾದಾಮಿ ಹಾಗೂ ಹುನಗುಂದ ತಾಲೂಕಿನ 127 ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ನೋಟಿಸ್ ಕೊಟ್ಟಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಪೈಕಿ ಕೇವಲ 27 ಮಂದಿ ಮಾತ್ರವೇ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಲಾಗಿದೆ.

ಮಕ್ಕಳಿಗೆ ನೀಡಬೇಕಿದ್ದ ಹಾಲಿನ ಪ್ಯಾಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುಲಾಗುತ್ತಿದೆ. ಶಿಕ್ಷಕರ ಸಹಕಾರವಿಲ್ಲದೆ ಇದು ನಡೆಯಲು ಸಾಧ್ಯವಿಲ್ಲ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಮತ್ತು ಸ್ಥಳೀಯರು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...