ಬಾಗಲಕೋಟೆ | ಜಿಲ್ಲೆಗೆ ಕೀರ್ತಿ ತಂದ ಬೀಳಗಿ ಮೊರಾರ್ಜಿ ವಸತಿ ಶಾಲೆ

Date:

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂವಹನ ಮಾಡುವಂತಹ ಹ್ಯಾಮ್ ಸ್ಟೇಷನ್ ಹೊಂದುವ ಮೂಲಕ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜಿಲ್ಲೆಗೆ ಕೀರ್ತಿ ತಂದಿದೆ. ರಾಜ್ಯದ ಮೂರನೆಯ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲೇ ಪ್ರಥಮ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಇಂಟರ್ನೆಟ್ ಅಥವಾ ಸೆಲ್ ಫೋನ್ಗಳಿಲ್ಲದೆ ಜನರು ನಗರ, ಪಟ್ಟಣ, ಪ್ರಪಂಚದಾದ್ಯಂತ ಅಥವಾ ಬಾಹ್ಯಾಕಾಶಕ್ಕೆ ಮಾತನಾಡಲು ಹ್ಯಾಮ್ ಬಳಸುತ್ತಾರೆ. ಇದು ಮೋಜಿನ, ಸಾಮಾಜಿಕ, ಶೈಕ್ಷಣಿಕ ಮತ್ತು ಅಗತ್ಯವಿರುವ ಸಮಯದಲ್ಲಿ ಜೀವಸೆಲೆಯಾಗಬಹುದು. ಕೇಂದ್ರ ಸರ್ಕಾರದ ಅಡಿಯಲ್ಲಿ ನಡೆಸುವ ಹ್ಯಾಮ್ ಸಂಸ್ಥೆ ವತಿಯಿಂದ ರಾಷ್ಟ್ರಮಟ್ಟದ ಹ್ಯಾಮ್ ಪರೀಕ್ಷೆ ನಡೆಸುತ್ತಾರೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಲೈಸೆನ್ಸ್ ನೀಡಲಾಗುತ್ತದೆ.

WhatsApp Image 2025 02 20 at 5.15.33 PM

ಮೊರಾರ್ಜಿ ದೇಸಾಯಿ ವಸತಿ ಹ್ಯಾಮ್ ಸ್ಟೇಷನ್‌ನಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹ್ಯಾಮ್ ಲೈಸೆನ್ಸ್ ಹೊಂದಿದವರ ಜತೆಗೆ ನಿರರ್ಗಳವಾಗಿ ಮಾತನಾಡಲು ಅನುಕೂಲವಾಗಿದೆ. ಮೊಬೈಲ್ ನೆಟ್ವರ್ಕ್ ನಿಂತಾಗ ನೈಸರ್ಗಿಕ ಅಪಘಾತಗಳು ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಹ್ಯಾಮ್ ಲೈಸೆನ್ಸ್ ಪಡೆದವರ ನೆರವು ಪಡೆದು ಅಪಾಯಗಳಿಂದ ತಪ್ಪಿಸಿಕೊಳ್ಳಬಹುದು. ನಿತ್ಯ ಶಾಲಾ ಆವರಣದಲ್ಲಿ ಹ್ಯಾಮ್ ಬಳಕೆ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೃಹತ್ ಜಾತ್ರೆ, ಕುಂಭಮೇಳ, ದೊಡ್ಡ ಪ್ರಮಾಣದ ಶುಭ, ಸಮಾರಂಭದಲ್ಲಿ ಸೇರುವ ಜನದಟ್ಟಣೆ ಪ್ರದೇಶಗಳಲ್ಲಿ ಹ್ಯಾಮ್ ಮಾಧ್ಯಮದ ಬಳಕೆ ಸಹಕಾರಿಯಾಗುತ್ತದೆ. ತುರ್ತು ಪರಿಸ್ಥಿತಿ, ಭೂಕಂಪ, ಭೂಕುಸಿತ, ಕಾಡ್ಗಿಚ್ಚು, ಸುನಾಮಿ, ಚಂಡ ಮಾರುತ, ವಾಯುಭಾರ ಕುಸಿತ ಸೇರಿದಂತೆ ಕರಾವಳಿ ತೀರದಲ್ಲಿ ಮೀನುಗಾರರಿಗೆ ಜನವಸತಿಗಳಲ್ಲಿ ಬಳಕೆಯಾಗುತ್ತದೆ. ಈ ಸಂದರ್ಭದಲ್ಲಿ ಸಂದೇಶ ರವಾನಿಸಲು ಉಪಯುಕ್ತವಾದ ಸಂವಹನ ಮಾಧ್ಯಮ ಇದಾಗಿದೆ.

ಈ ಸುದ್ದಿ ಓದಿದ್ದೀರಾ?: ರನ್ನ ವೈಭವ: ಸಾಂಸ್ಕೃತಿಕ ಮಹಾ ಉತ್ಸವಕ್ಕೆ ಸಜ್ಜಾದ ಬಾಗಲಕೋಟೆ

ಈ ಕುರಿತು ಈದಿನ ಡಾಟ್ ಕಾಂ ಜೊತೆ ಪ್ರತಿಕ್ರಿಯಿಸಿದ ಮೊರಾರ್ಜಿ ವಸತಿ ಶಾಲೆಯ ವಿಜ್ಞಾನ ಶಿಕ್ಷಕ ಕೃಷ್ಣ ಜೋಶಿ ಮಾತನಾಡಿ, ರಾಜ್ಯದ 20 ವಸತಿ ಶಾಲೆಗಳಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಮಕ್ಕಳಲ್ಲಿ ಭಾಷಾ ಕೌಶಲ್ಯ ಹೆಚ್ಚಿಸುವುದು ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕೋಡ್ ವರ್ಡ್ ಬಳಕೆ ಮಾಡಿ ಸಂವಹನ ಮಾಡುವಂತಹ ಅವಕಾಶ ಮಕ್ಕಳಿಗೆ ಸಿಗುತ್ತದೆ. ಶಾಲಾ ಮಟ್ಟದಲ್ಲಿ ಮಕ್ಕಳಿಗೆ ತಂತ್ರಜ್ಞಾನದ ಬೆಳವಣಿಗೆಗೆ ಸೂಚಿಸುವುದಕ್ಕೆ ಅತ್ಯುತ್ತಮ ಸಾಧನ ಇದಾಗಿದೆ” ಎಂದು ಮಾಹಿತಿ ನೀಡಿದರು.

WhatsApp Image 2025 02 20 at 5.15.31 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...