ಬಾಗಲಕೋಟೆ | ನನ್ನ ಮೇಲೆ ಹಲ್ಲೆ ಮಾಡಿದವರಿಗೆ ಜನರು ಪಾಠ ಕಲಿಸುತ್ತಾರೆ: ರೈತ ಮುಖಂಡ ಯಲ್ಲಪ್ಪ ಹೆಗಡೆ

Date:

ಅಗಸ್ಟ್‌ 28ರಂದು ನನ್ನನ್ನು ಕೊಲೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದರು, ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಒತ್ಥಾಯಿಸಿ ರೈತ ಸಂಘಟನೆಗಳು, ಕಾರ್ಮಿಕರು, ಪ್ರಜ್ಞಾವಂತ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ. ನನ್ನ ಬೆಂಬಲಕ್ಕೆ ನಿಂತಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ರೈತ ಹೋರಾಟಗಾರ ಯಲ್ಲಪ್ಪ ಹೆಗಡೆ ಹೇಳಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಯಲ್ಲಪ್ಪ ಹೆಗಡೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. 5 ಕೋಟಿ ರೂಪಾಯಿ ಪರಿಹಾರ ಕೋರಿ ಲೀಗಲ್ ನೋಟಿಸ್ ಕಳಿಸಿದ್ದರು. ನಿರಾಣಿ ಅವರಿಗೆ ಪರಿಹಾರ ನೀಡಲು ಯಲ್ಲಪ್ಪ ಅವರು ಭಿಕ್ಷಾಟನೆ ಮೂಲಕ ಹಣ ಸಂಗ್ರಹಿಸುತ್ತಿದ್ದರು. ಈ ವೇಳೆ, ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆರೋಗ್ಯ ಚೇತರಿಕೆಯಾದ ಬಳಿಕ ಯಲ್ಲಪ್ಪ ಅವರು ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

“ನನ್ನ ಮೇಲೆ ಹಲ್ಲೆ ನಡೆದ ತಕ್ಷಣ, ಬಾಗಲಕೋಟೆ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಹಲವರು ಪ್ರತಿಭಟನೆ ನಡೆಸಿದ್ದಾರೆ. ಮುಧೋಳದ ವಕೀಲರ ಸಂಘದ ಹಿರಿಯ ನಾಯ್ಯವಾದಿಗಳು, ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಎಲ್ಲ ಸಹೋದರ ನ್ಯಾಯವಾದಿಗಳು ಪ್ರತಿಭಟಿಸಿದ್ದಾರೆ. ನನಗೆ ಮುಧೋಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಬಾಗಲಕೋಟೆಯಲ್ಲಿ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯರಿಗ ವೈದ್ಯರಿಗೂ ಕೃತಜ್ಞನಾಗಿದ್ಧೇನೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾಣ ಬೆದರಿಕೆ, ಆಸೆ-ಆಮಿಷಗಳಿಗೆ ಹಾಗೂ ಇವರ ಪ್ರಭಾವಕ್ಕೆ ನಾನು ಯಾವತ್ತೂ ಅಂಜುವುದಿಲ್ಲ. ನನ್ನ ಸಾಮಾಜಿಕ ಚಿಂತನೆಗಳನ್ನು, ಭ್ರಷ್ಟರ ವಿರುದ್ಧ ಹೋರಾಟವನ್ನು ಮುಂದುವರಿಸಿಕೊಂಡು ಹೋಗುತ್ತೇನೆ” ಎಂದಿದ್ದಾರೆ.

“ನನ್ನ ಕೊಲೆ ಮಾಡಲು ಸಂಚು ರೂಪಿಸಿದ ಪ್ರಮುಖ ಆರೋಪಿಗಳು ರಾಜಾರೋಷವಾಗಿ ಹುಟ್ಟು ಹಬ್ಬ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಅವರನ್ನು ವಿಚಾರಣೆ ಮಾಡಲಾಗಿದೆಯೇ? ತನಿಖೆಯು ಸರಿಯಾದ ಮಾರ್ಗದಲ್ಲಿ ನಡೆಯುತ್ತಿದೆಯೇ? ಸಾರ್ವಜನಿಕರು ಎಲ್ಲವನ್ನೂ ಗಮನಿಸುತ್ತಿದ್ದಾರೆ. ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ಧರ್ಮಂತಿ, ಸಿದ್ದಪ್ಪ ಬಳಗಾನೂರ, ಹಣಮಂತ ಶಿಂಧೆ, ಪರಶುರಾಮ ಮಂಟೂರ, ಯಮನಪ್ಪ ಯಳ್ಳಿಗುತ್ತಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...