ಬಾಗಲಕೋಟೆ | ವಕ್ಫ್‌ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ

Date:

ಈ ದೇಶ ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿದೆ. ಸರ್ವರಿಗೂ ಸಮನಾಗಿರುವ ಕಾನೂನು ಜಾರಿಯಲ್ಲಿದೆ. ಇಂತಹ ದೇಶದಲ್ಲಿ ಕೋಮು ದ್ವೇಷ ಹರಡುವ ನಿಟ್ಟಿನಲ್ಲಿ ರಾಜಕೀಯ ನಾಯಕರು ವಕ್ಫ್ ಕಾಯ್ದೆ ತಿದ್ದುಪಡಿ ಮಾಡಿ ತಮ್ಮ ಸ್ವಾರ್ಥ ಮೆರೆಯಲು ಹೊರಟಿದ್ದಾರೆ. ಇದರ ವಿರುದ್ಧ ದೇಶದ ಎಲ್ಲಾ ಸಮುದಾಯದ ಜನ ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಉಸ್ಮಾನ್ ಗನಿ ಹುಮ್ನಾಬಾದ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಅಂಜುಮನ್ ಇಸ್ಲಾಂ ಕಮಿಟಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ಈ ದೇಶದ ಸಂಪತ್ತನ್ನು ಬಂಡವಾಳಗಾರರಿಗೆ ಮಾರಾಟ ಮಾಡಿದ್ದಾರೆ. ರೈಲ್ವೆ, ಏರ್ ಇಂಡಿಯಾ, ಬಿ ಎಸ್ ಎನ್ ಎಲ್ ಸೇರಿದಂತೆ ದೇಶದ ಶ್ರಮಿಕರು ಬೆಳೆಸಿದಂತ ಸರ್ಕಾರೀ ಸಂಸ್ಥೆಗಳನ್ನು ಮಾರಾಟ ಮಾಡಿ ದುಡಿಯುವ ಜನಗಳ ಬದುಕನ್ನು ಅದೋಗತಿಗೆ ದೂಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 05 25 at 6.42.12 PM

“ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಜಾತಿ ಬೇಧ ಇಲ್ಲದೆ ಹೋರಾಟ ಮಾಡಿದ್ದಾರೆ. ಆದರೆ ಬಿಜೆಪಿ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಸಲುವಾಗಿ ಎನ್ ಆರ್ ಐ, ಎನ್ ಪಿ ಆರ್, ಸಿ ಎ ಎ ತಂದು ಒಡೆದು ಆಳುವ ನೀಚ ಮನಸ್ಥಿಗೆ ಇಳಿದಿದೆ ಇದರ ವಿರುದ್ಧ ಬಲಿಷ್ಠ ಜನಾಂದೋಲ ಬೆಳಸಬೇಕು” ಎಂದರು.

ಇದೇ ವೇಳೆ ಇಳಕಲ್ ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ಮಾಡಿ ಅದೇ ಮಾರ್ಗವಾಗಿ ತಹಶೀಲ್ದಾರ್ ಕಚೇರಿಗೆ ಮೇರವಣಿಗೆ ಮುಖಾಂತರ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ: ಬಾಗಲಕೋಟೆ | ಮುಧೋಳ ಗ್ರಾಮೀಣ ಠಾಣೆ ಮಂಜೂರಿಗೆ ಮನವಿ

ಪ್ರತಿಭಟನೆಯಲ್ಲಿ ಜನಾಬ್ ತಾಜುದ್ದೀನ್ ಹುಮ್ನಾಬಾದ್, ಜನಾಬ್ ಸಾಯೇದ್ ಬಾಹುದ್ದಿನ್ ಕಾಜಿ, ಇಳಕಲ್‌ನ ಜಮಾತ್-ಎ-ಇಸ್ಲಾಮಿ ಹಿಂದ್ ಅಧ್ಯಕ್ಷ ಜನಾಬ್ ಹುಸೈನ್ ಭಾಷಾ ಸುಲಿಬಾವಿ, ಮೊಹಮ್ಮದ್ ಸಿರಾಜ ಹುಣಚಗಿ, ಮೊಹಮ್ಮದ್ ಗೌಸ್ ಗಡಾದ, ಮುರ್ತುಜಾ ಕಾಕ್ಬಾಲ್ ಲಾಲ್ ಸಾಬ್ ಭಂಡಾರಿ, ರಫೀಕ್ ಬಾಲ್ಗನೂರ, ಯೂಸುಫ್ ಭಗವಾನ್, ಸಾಧಂ ಮಾಕಾನದಾರ್ ಹಾಗೂ ಅಬ್ದುಲ್ ಗಫರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...