ಬಾಗಲಕೋಟೆ | ಕುರಿಗಾಹಿ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ

Date:

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆಯನ್ನು ಖಂಡಿಸಿ ರಾಜ್ಯ ಕುರಿಗಾರರು ಮತ್ತು ಪಶುಪಾಲಕರ ಹಿತರಕ್ಷಣಾ ಸಮಿತಿ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಕೊಲೆ ಮಾಡಿರುವ ಮೂವರು ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ರಾಜ್ಯಾದ್ಯಂತ ರೈತ ಸಮುದಾಯ ಹಾಗೂ ಹಿಂದುಳಿದ ವರ್ಗದವರು ಕುರಿಗಾರಿಕೆ ಮತ್ತು ಪಶುಸಂಗೋಪನೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿ ನಿಭಾಯಿಸುತ್ತಾರೆ. ಅಂತಹ ಕುಟುಂಬಗಳಿಗೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದರು.

“ಕುರಿಗಾಹಿಗಳು ಬೆಟ್ಟ ಗುಡ್ಡಗಳಲ್ಲಿ ಸಂಚರಿಸುತ್ತಾರೆ. ಹೊಲಗಳಲ್ಲಿಯೇ ತಿಂಗಳಗಟ್ಟಲೆ ವಾಸ್ತವ್ಯ ಮಾಡುತ್ತಾರೆ. ಅಂತಹವರ ರಕ್ಷಣೆಗೆ ಸರ್ಕಾರ ಹಿತರಕ್ಷಣಾ ಕಾಯ್ದೆ ಜಾರಿಗೆ ತರಬೇಕು. ಶರಣಪ್ಪ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಬೇಕು” ಎಂದು ಮನವಿ ಮಾಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 13 at 11.54.45 AM 2

ಯಲ್ಲಪ್ಪ ಹೆಗಡೆ ಮಾತನಾಡಿ, “ಕುರಿ ಕಾಯುವವರಿಗೆ ಭದ್ರತೆ, ರಕ್ಷಣೆ ಇಲ್ಲವಾಗಿದೆ. ಒಂದೇ ಸಮುದಾಯದವರು ಕುರಿ, ದನ ಕಾಯುವುದಿಲ್ಲ, ಕುರಿ ಕಾಯುವವರ ರಕ್ಷಣೆಗೆ ಸರ್ಕಾರ ಮುಂದಾಗಬೇಕು. ಕುರಿಗಾಹಿಗಳ ಹಿತರಕ್ಷಣಾ ಕಾಯಿದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಈ ಹಿಂದೆ ಬಜೆಟ್‌ನಲ್ಲಿ ಭರವಸೆ ನೀಡಿದ್ದರು. ಈಗ ಮರೆತಿದ್ದಾರೆ. ಕೂಡಲೇ ಜಾರಿಗೊಳಿಸಬೇಕು” ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

ಇದನ್ನೂ ಓದಿ: ಬಾಗಲಕೋಟೆ | ನೀರಿಗಾಗಿ ಜನರ ಪರದಾಟ; ಶಾಶ್ವತ ಪರಿಹಾರಕ್ಕೆ ವೆಲ್ಫೇರ್‌ ಪಾರ್ಟಿ ಮನವಿ

ಈ ಸಂದರ್ಭದಲ್ಲಿ ರಾಜ್ಯ ಕುರಿಗಾರರ ಮತ್ತು ಪಶು ಪಾಲಕರ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರಶುರಾಮ ಮಂಟೂರ, ಅಧ್ಯಕ್ಷ ಸಿದ್ದಪ್ಪ ಬಳಗಾನೂರ, ಮಲ್ಲು ವಡಗೇರ, ಶಿವಲಿಂಗ ಪೂಜಾರಿ, ಬಸವರಾಜ ತೆಲಗಿ, ಶಿವು ಕುರಿ, ರಾಮು, ಶಿವರಾಜ ರಾಕುಂಪಿ, ರಾಜಭಕ್ಷಿ, ಕಾಸಿಮ ಗೋಳಸಂಗಿ, ಇಮಾಮ್ ಹುಸೇನ್, ಶಿವಕುಮಾರ ಪೂಜಾರಿ, ನಿಂಗಪ್ಪ ಜೋಗಿ, ವಿಠಲ ದಂದರಿಂಗಿ ಶೇಖರ್ ಕಾಂಬಳೆ ರಾಜು ಮಣ್ಣಿಕೆರೆ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...