ಬಾಗಲಕೋಟೆ | ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಪ್ರತಿಭಟನೆ

Date:

ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ ಸೇರಿದಂತೆ ವಿವಿಧ ರೈಲು ಸೇವೆ ವಿಸ್ತರಣೆಗೆ ಒತ್ತಾಯಿಸಿ ಬಾಗಲಕೋಟೆ ರೈಲ್ವೆ ನಿಲ್ದಾಣದ ಮುಂದೆ ರಾಜ್ಯ ರೈಲು ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕುತ್ಬುದ್ದಿನ್ ಕಾಜಿಯವರ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.

ಬಾಗಲಕೋಟೆಯಿಂದ ಲೋಕಾಪೂರಕ್ಕೆ ಪ್ಯಾಸೆಂಜರ್ ರೈಲು ಬಿಡಬೇಕು, ಲೋಕಾಪೂರದಿಂದ ಧಾರವಾಡಕ್ಕೆ ನೂತನ ರೈಲು ಮಾರ್ಗ ನಿರ್ಮಿಸಬೇಕು, ಬೆಂಗಳೂರು ಸೂಪರ್ ಫಾಸ್ಟ್ ಎಕ್ಸಪ್ರೆಸ್ ರೈಲನ್ನು ಬಾಗಲಕೋಟೆ ವಿಜಯಪುರ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕು, ಸೋಲಾಪುರ ಹುಬ್ಬಳ್ಳಿ ಇಂಟರ್ ಸಿಟಿ ರೈಲನ್ನು ವಾಸ್ಕೋಡಿಗಾಮಾವರೆಗೆ ವಿಸ್ತರಿಸಬೇಕು, ಹಜರತ್ ನಿಜಾಮುದ್ದೀನ್, ಮೈಸೂರು-ಶಿರಡಿ ಹಾಗೂ ಯಶವಂತಪುರ-ಬಿಕಾನೇರ ರೈಲುಗಳನ್ನು ಪ್ರತಿದಿನ ಸಂಚರಿಸುವಂತೆ ಮಾಡಬೇಕು ಹಾಗೂ ಬಾಗಲಕೋಟೆ ರೈಲು ನಿಲ್ದಾಣದಲ್ಲಿ ರೈಲುಗಳ ನಿರ್ವಹಣೆ ಕಾರ್ಯವನ್ನು ಪ್ರಾರಂಭಿಸಬೇಕೆಂದು ಒತ್ತಾಯಿಸಿ ಕುತ್ಬುದ್ದಿನ್ ಕಾಜಿ ಮತ್ತು ಶ್ರೀನಿವಾಸ ಬಳ್ಳಾರಿಯವರು ಬಾಗಲಕೋಟೆ ರೈಲು ನಿಲ್ದಾಣದ ಮುಂದೆ ಉರುಳು ಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

WhatsApp Image 2025 11 29 at 11.54.29 AM

ಈ ಸಂದರ್ಭದಲ್ಲಿ ಮಾತನಾಡಿದ ಕುತ್ಬುದ್ದಿನ್ ಕಾಜಿ, “ಬಾಗಲಕೋಟೆಯಿಂದ ಲೋಕಾಪೂರ ಮಾರ್ಗದಲ್ಲಿ ರೈಲುಗಳ ಓಡಾಟವಿಲ್ಲದೇ ನಿಲ್ದಾಣಗಳು ಹಾಳಾಗುತ್ತಿದ್ದು, ಅಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ. ಆದ್ದರಿಂದ ಬಾಗಲಕೋಟೆ ಲೋಕಾಪೂರ ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಬಿಡಬೇಕು. ಬಾಗಲಕೋಟೆ ಕುಡಚಿ ಕಾಮಗಾರಿಗೆ ವೇಗ ನೀಡಬೇಕು. ಜತೆಗೆ ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ನಿರ್ಮಿಸಲೇಬೇಕು. ಇಲ್ಲವಾದರೆ, ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಕಬ್ಬು ಬೆಳೆಗಾರ ಜೊತೆಗಿನ ಸಂಧಾನ ಯಶಸ್ವಿ, ಪ್ರತಿ ಟನ್‌ ಕಬ್ಬಿಗೆ 3,300 ರೂ. ನಿಗದಿ

ಶ್ರೀನಿವಾಸ ಬಳ್ಳಾರಿ ಮಾತನಾಡಿ, “ಬಾಗಲಕೋಟೆಯಿಂದ ವಿವಿಧ ನಗರಗಳಿಗೆ ಹೆಚ್ಚಿನ ರೈಲುಗಳನ್ನು ಬಿಡಬೇಕೆಂದು ಪ್ರತಿಭಟನೆ ಮಾಡುತ್ತಿದ್ದೇವೆ. ಬಾಗಲಕೋಟೆ ರೈಲು ನಿಲ್ದಾಣದಲ್ಲಿ ರೈಲುಗಳ ಓಡಾಟ ಹೆಚ್ಚಾದರೆ ಇಲ್ಲಿನ ವಿದ್ಯಾರ್ಥಿಗಳಿಗೆ, ವ್ಯಾಪಾರಿಗಳಿಗೆ, ನೌಕರಸ್ಥರಿಗೆ ಬಹಳ ಅನುಕೂಲವಾಗತ್ತೆ ಮತ್ತು ಬಾಗಲಕೋಟೆ ನಗರವು ಇನ್ನಷ್ಟು ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತದೆ. ಬಾಗಲಕೋಟೆ-ಕುಡಚಿ ಮಾರ್ಗಕ್ಕೆ ಈಗಾಗಲೇ ಭೂಮಿ ನೀಡಿದಂತಹ ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗ ಕೊಡಬೇಕು ಮತ್ತು ಲೋಕಾಪೂರದಿಂದ ಧಾರವಾಡ ನೂತನ ರೈಲು ಮಾರ್ಗ ನಿರ್ಮಿಸಬೇಕು” ಎಂದು ಒತ್ತಾಯಿಸಿ ರೈಲ್ವೆ ಅಧಿಕಾರಿಗಳಿಗೆ ಮನವಿ ನೀಡಿದರು.

ಪ್ರತಿಭಟನೆಯಲ್ಲಿ ಬಾಗಲಕೋಟೆ ವಾಣಿಜ್ಯೋದ್ಯಮಿ ಸಂಘದ ಅಧ್ಯಕ್ಷ ರವಿ ಕುಮಟಗಿ, ರಾಮದುರ್ಗ ರೈಲು ಹೋರಾಟ ಸಮಿತಿ ಮುಖಂಡ ಎಂ ಕೆ ಯಾದವಾಡ, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಸೇರಿದಂತೆ ಬಾಗಲಕೋಟೆ ಲೋಕಾಪೂರ, ಸವದತ್ತಿ, ರಾಮದುರ್ಗದ ರೈಲು ಹೋರಾಟ ಕ್ರಿಯಾ ಸಮಿತಿಯ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...