ಬಾಗಲಕೋಟೆ | ಕುರಿ/ದನಗಾಹಿಗಳ ರಕ್ಷಣೆಗೆ ಕಾಯ್ದೆ ರೂಪಿಸಲು ಮನವಿ

Date:

ಸ್ಥಳೀಯ ಪ್ರದೇಶಕ್ಕನುಗುಣವಾಗಿ ಆರಣ್ಯದಂಚಿನಲ್ಲಿ ಕುರಿ/ದನ ಮೇಯಿಸಲು ಅವಕಾಶ ಮಾಡಿಕೊಡುವ ಮೂಲಕ ಅರಣ್ಯಾಧಿಕಾರಿಗಳಿಂದ ಕುರಿ/ದನಗಾಹಿಗಳ ಮೇಲಾಗುವ ದೌರ್ಜನ್ಯಕ್ಕೆ ಕಡಿವಾಣ ಹಾಕಬೇಕು ಎಂದು ಕುರಿಗಾಹಿಗಳು ಶಾಸಕ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಬಿ.ಟಿ ಪಾಟೀಲ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬಾಗಲಕೋಟೆಯ ಜಿಲ್ಲೆಯ ಬೀಳಗಿಯಲ್ಲಿ ಶಾಸಕರನ್ನು ಭೇಟಿ ಮಾಡಿದ ಯಲ್ಲಪ್ಪ ಹೆಗಡೆ ಮತ್ತು ಸಂಗಡಿಗರು, “ಕರ್ನಾಟಕ ರಾಜ್ಯಾದ್ಯಂತ ರೈತ ಸಮುದಾಯ, ಶೋಷಿತ ಸಮುದಾಯ ಹಾಗೂ ಹಿಂದುಳಿದ ವರ್ಗದವರು, ಕುರಿಗಾರಿಕೆ ಹಾಗೂ ಪಶುಸಂಗೋಪನೆ ಮಾಡುತ್ತ, ಬದುಕು ದೂಡುತ್ತಿದ್ದಾರೆ. ಬೆಟ್ಟ-ಗುಡ್ಡಗಳನ್ನು ಒಳಗೊಂಡತೆ ಎಲ್ಲಡೆ ಸುತ್ತುತ್ತಾ ಕುರಿಗಾರಿಕೆ ಹಾಗೂ ಪಶುಪಾಲನೆ ಮಾಡುತ್ತಿದ್ದಾರೆ. ಆದರೆ, ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

“ಕೊಲೆ, ಅತ್ಯಾಚಾರ ಲಂಚದ ಬೇಡಿಕೆ, ಜೀವ ಬೆದರಿಕೆ ಹಾಕುವ ಹಲವಾರು ಘಟನೆಗಳು ನಡೆದಿದ್ದು, ಅಸಂಖ್ಯಾತ ಪ್ರಕರಣಗಳು ಬೆಳಕಿಗೆ ಬರುವುದಿಲ್ಲ. ರಾಜ್ಯ ಸರ್ಕಾರವು 2024-25ನೇ ಸಾಲಿನ ಬಜೆಟ್‌ನಲ್ಲಿ ಸಂಚಾರಿ ಕುರುಬರಿಗೆ ಸಂಬಂಧಿಸಿದಂತೆ ದೌರ್ಜನ್ಯ ತಡೆ ಕಾಯ್ದೆ ರೂಪಿಸಲು ಪ್ರಸ್ತಾಪಿಸಿರುವುದು ಸ್ವಾಗತಾರ್ಹ. ಕೇವಲ ಸಂಚಾರಿ ಕುರಿಗಾರರಿಗೆ ಮಾತ್ರ ಅನ್ವಯಿಸದೆ, ಕುರಿಗಾರಿಕೆ ಹಾಗೂ ಪಶುಸಂಗೋಪನೆ ಮೇಲೆ ಜೀವನ ಕಟ್ಟಿಕೊಂಡಂತಹ ಕುರಿಗಾರರು ಹಾಗೂ ಪಶುಪಾಲಕರಿಗೂ ಈ ಕಾಯ್ದೆ ವಿಸ್ತರಿಸಬೇಕು. ಅದಕ್ಕಾಗಿ, ಕರ್ನಾಟಕ ರಾಜ್ಯ ಕುರಿಗಾರರ ಮತ್ತು ಪಶುಪಾಲಕರ (ರಕ್ಷಣೆ ಮತ್ತು ದೌರ್ಜನ್ಯ ತಡೆ) ಕಾಯ್ದೆ 2024ನ್ನು ರಚಿಸಲು ಸರ್ಕಾರದ ಗಮನ ಸೆಳೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...