ಬಾಗಲಕೋಟೆ | ರನ್ನ ವೈಭವಕ್ಕೆ ಒಂದು ಕೋಟಿ ಅನುದಾನ: ಸಚಿವ ತಿಮ್ಮಾಪೂರ

Date:

ಫೆಬ್ರವರಿ 22ರಿಂದ 23ವರೆಗೆ ನಡೆಯಲಿರುವ ರನ್ನ ವೈಭವದ ಹಿನ್ನಲೆಯಲ್ಲಿ ನಗರವನ್ನು ಶೃಂಗರಿಸಲು ಒಂದು ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಭವನದಲ್ಲಿ ರನ್ನ ವೈಭವದ ಲೋಗೋ, ಪ್ರಚಾರದ ಪೋಸ್ಟ್‌ ಹಾಗೂ ಆಡಿಯೋ ಬಿಡುಗಡೆ ಮಾಡಿ ಮಾತನಾಡಿದರು.

“ಮುಧೋಳ ನಗರದ ರಸ್ತೆ, ವೃತ್ತಗಳಿಗೆ ದೀಪಾಲಂಕಾರ ಮಾಡುವುದರ ಜತೆಗೆ ₹25 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ವೈಭವದಲ್ಲಿ ಕಾಯಾಕ್ರಮಗಳ ಗ್ರಾಮೀಣ ಕ್ರೀಡೆಗಳಿಗೂ ಹೆಚ್ಚಿನ ಮಹತ್ವ ಕೊಡಲಾಗುತ್ತಿದೆ. ಈ ಭಾಗದ ಮಲ್ಲಕಂಬ, ಕುಸ್ತಿ, ಕಬಡ್ಡಿ ಸೇರಿದಂತೆ ಹಲವು ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರನ್ನ ವೈಭವವನ್ನು ರಾಜ್ಯಮಟ್ಟದ ಕಾರ್ಯಕ್ರಮವನ್ನಾಗಿ ರೂಪಿಸಲು ಬೆಂಗಳೂರಿನಿಂದ ಮುಧೋಳಕ್ಕೆ ಆಗಮಿಸಿದ ರನ್ನರಥ, ಜಿಲ್ಲಾದ್ಯಂತ ಹಾಗೂ ಪ್ರಮುಖ ಮುಧೋಳದ ಪ್ರತಿ ಹಳ್ಳಿಗಳಿಗೂ ಸಂಚರಿಸಲಿದೆ. ಫೆಬ್ರವರಿ 22ರಂದು ರನ್ನರಥ ರನ್ನಬೆಳಗಲ್ಲಿ ಹಾಗೂ ಫೆಬ್ರವರಿ 23 ಮತ್ತು 24ರಂದು ಸಾಂಸ್ಕೃತಿ ಮುಧೋಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ವೈಭವ ಕೇವಲ ಮುಧೋಳ ನಗರಕ್ಕೆ ಸೀಮಿತವಾಗದೆ ನಾಡಹಬ್ಬವಾಗಬೇಕೆಂಬುದು ನಮ್ಮ ಆಶಯವಾಗಿದ್ದು, ಈ ನಾಡಹಬ್ಬ ಜಾತ್ರೆಯಲ್ಲಿ ಎಲ್ಲರೂ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತೀರ್ಥಹಳ್ಳಿ | ಖ್ಯಾತ ನಾಟಿ ವೈದ್ಯ ಎಂ ಬಿ ಶಿವಣ್ಣಗೌಡ ನಿಧನ

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಸುನಂದಾ ಜಿಲ್ಲಾಧಿಕಾರಿ ಜಾನಕಿ ಕೆ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಶೀಲ್ದಾರ್ ಮಹಾದೇವ ಸನಮುಡಿ, ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್ ಬಿ ಆರ್, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ರನ್ನ ಪ್ರತಿಷ್ಠಾನದ ಸದಸ್ಯರಾದ ಸಂಗಮೇಶ ಕಲ್ಯಾಣಿ, ಸಿದ್ದು ಕಾಳಗಿ, ಎಸ್ ಎಸ್ ಹೊಸಕೋಟಿ, ಸರಗಣಾಚಾರಿ ಉದಪುಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...