ಬಾಗಲಕೋಟೆ | ಕಳೆದ ಮೂರು ತಿಂಗಳಿಂದ ಸಿಗದ ಸಂಬಳ; ವಾಟರ್‌ಮನ್‌ಗಳ ಧರಣಿ

Date:

ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ ಇವರು ಕೆಲಸ ಮಾಡುತ್ತಿದ್ದಾರೆ. ಆದರೆ, ಎಲ್ಲ ಕಡೆ ರಾಜ್ಯೋತ್ಸ ಸಡಗರದ ನಡುವೆ, ಇವರು ತಮ್ಮ ಸಂಬಳಕ್ಕಾಗಿ ಒತ್ತಾಯಿಸಿ ಪ್ರತಿಭಟನೆಗಿಳಿದಿದ್ದರು. ಕಳೆದ ಮೂರ್ನಾಲ್ಕು ತಿಂಗಳಿಂದ ಈ ಕಾರ್ಮಿಕರಿಗೆ ವೇತನ ನೀಡಲಾಗಿಲ್ಲ.

ಇದರಿಂದ ಕುಟುಂಬವನ್ನು ನಿರ್ವಹಣೆ ಮಾಡಲಾಗದೆ ಈ ಬಡ ಕಾರ್ಮಿಕರು ಕಂಗಾಲಾಗಿದ್ದಾರೆ. ಎಷ್ಟು ಸಾರಿ ಅಧಿಕಾರಿಗಳಿಗೆ ತಿಳಿಸಿದರೂ ಇವರಿಗೆ ಸ್ಪಂದನೆ ನೀಡಿಲ್ಲ. ಇದರಿಂದ ಇಂದು ಈ ಕಾರ್ಮಿಕರು ನೀರು ಸರಬರಾಜು ಮಾಡುವ ಘಟಕದ ಎದುರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ನವನಗರಕ್ಕೆ ನೀರು ಸರಬರಾಜು ಆಗದಂತೆ ವಾಲ್ವ್ ಬಂದ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು.

ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ನವನಗರದ ಅಭಿವೃದ್ದಿ ಮೂಲಭೂತ ಸೌಲಭ್ಯ ಕಲ್ಪಿಸುವ ಹೊಣೆ ಹೊತ್ತಿರುವ ಪ್ರಾಧಿಕಾರ. ಇದರ ಅಡಿಯಲ್ಲಿ ಈ ಎಲ್ಲ ಕಾರ್ಮಿಕರು ವಾಟರ್ ಮನ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 20-25 ವರ್ಷಗಳಿಂದ ಕೆಲಸ ಮಾಡುತ್ತಿರುವ ಈ ಕಾರ್ಮಿಕರಿಗೆ ಮೇಲಿಂದ ಮೇಲೆ ವೇತನ ವಿಳಂಭ ಧೋರಣೆ ನಡೆಯುತ್ತಲೇ ಇದೆ. ಇದೀಗ ಕಳೆದ ಮೂರ್ನಾಲ್ಕು ತಿಂಗಳಿಂದ ವೇತನವೇ ಆಗಿಲ್ಲ. ಇದರಿಂದ ನ.01ರಂದು ಎಲ್ಲರೂ ಒಟ್ಟಾಗಿ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ವಿರುದ್ದ ಆಕ್ರೋಶ ಗೊಂಡಿದ್ದು, ಕೂಡಲೇ ನಮ್ಮ ಬಾಕಿ ವೇತನ ನೀಡಬೇಕು ಇಲ್ಲದಿದ್ದರೆ ಮುಂದೆ ಉಗ್ರ ಹೋರಾಟ ಮಾಡೋದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿದ ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರ ಮುಖ್ಯ ಇಂಜಿನಿಯರ್, ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದಲ್ಲಿ ಈಗ ಹಣದ ಕೊರತೆಯಿದೆ. ಪ್ರಾಧಿಕಾರದಲ್ಲಿದ್ದ ಕಾರ್ಪಸ್ ಪಂಡ್ ಕೂಡ ಮರಳಿ ಸರ್ಕಾರ ಪಡೆದುಕೊಂಡಿದೆ. ಈ ಹಿನ್ನೆಲೆ ವೇತನ ಕೊಡೋದಕ್ಕೆ ಆಗಿಲ್ಲ ಕಾರ್ಮಿಕರು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಕಾರ್ಪಸ್ ಪಂಡ್ ಮರಳಿ ಬರುವ ವಿಶ್ವಾಸವಿದೆ. ಅದು ಬಂದರೆ ಕಾರ್ಮಿಕರ ವೇತನ ನೀಡೋದರ ಜೊತೆಗೆ ಎಲ್ಲ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...