ಬಾಗಲಕೋಟೆ | ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ: ಸಿಎಂ ಸಿದ್ದರಾಮಯ್ಯ

Date:

ಶರಣ ಎಂದರೆ ಜಾತಿ-ವರ್ಗ ಇಲ್ಲದ್ದು. ಶರಣ ಮೇಳ ಎಂದರೆ ಜಾತಿಯಿಂದ ಮುಕ್ತರಾದ ಮನುಷ್ಯರ ಮೇಳ. ಬಸವಾದಿ ಶರಣರು 12ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮಾಡಿದರು. ನಮ್ಮ ಚಲನೆ ರಹಿತ ಜಾತಿ ವ್ಯವಸ್ಥೆಯ ಸಾಮಾಜಿಕ ವ್ಯವಸ್ಥೆಯನ್ನು ಪಟ್ಟಭದ್ರ ಹಿತಾಸಕ್ತಿಗಳು ರೂಪಿಸಿದರು. ಇದನ್ನು ಮಾಡಿದ್ದು ದೇವರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲಿಂಗಾಯತ ಧರ್ಮ ಸಂಸ್ಥಾಪನಾ ದಿನದ ಅಂಗವಾಗಿ ಕೂಡಲಸಂಗಮದಲ್ಲಿ ಆಯೋಜಿಸಿದ್ದ 37ನೇ ಶರಣ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಾದಿ ಶರಣರ ಆಶಯದ ಜಾತಿ ರಹಿತ ಸಮಾಜ ನಿರ್ಮಾಣ ಶರಣರಿಂದ ಸಾಧ್ಯ. ಬಹು ಸಂಖ್ಯಾತರನ್ನು  ಶಿಕ್ಷಣದಿಂದ ದೂರ ಇಡಲು ಅಸಮಾನತೆಯಿಂದ ಕೂಡಿದ ಚಾತುವರ್ಣ ವ್ಯವಸ್ಥೆಯನ್ನು ಮಾಡಿದರು. ಬಸವಾದಿ ಶರಣರ ವಚನ ಚಳವಳಿ ತಾರತಮ್ಯದಿಂದ ಕೂಡಿದ ಕರ್ಮ ಸಿದ್ಧಾಂತವನ್ನು, ಮೌಢ್ಯವನ್ನು ತೊಡೆದು ಹಾಕಿತು. ಹಣೆ ಬರಹ ಮತ್ತು ಕರ್ಮ ಸಿದ್ಧಾಂತವನ್ನು, ಹಿಂದಿನ ಜನ್ಮ-ಮುಂದಿನ ಜನ್ಮ ಎನ್ನುವುದನ್ನು  ಬಸವಣ್ಣನವರು ಸಂಪೂರ್ಣ ತಿರಸ್ಕರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಾದಿ ಶರಣರು ಪ್ರತಿಪಾದಿಸಿದರು. ಧರ್ಮ ತಾರತಮ್ಯ ಮಾಡಬೇಡಿ, ಮನುಷ್ಯ ಮನುಷ್ಯನನ್ನು ದ್ವೇಷಿಸುವುದನ್ನು ಬಸವಾದಿ ಶರಣರು ವಿರೋಧಿಸಿದ್ದರು. ಈ ಕಾರಣಕ್ಕೇ ಇವ ನಮ್ಮವ, ಇವ ನಮ್ಮವ ಎನ್ನುವ ಉದಾತ್ತವಾದ ಮೌಲ್ಯವನ್ನು 800 ವರ್ಷಗಳ ಹಿಂದೆಯೇ ಹೇಳಿದರು. ಹೀಗಾಗಿ ಜಾತಿ ವ್ಯವಸ್ಥೆಯನ್ನು ಶರಣರೇ ಹೋಗಲಾಡಿಸಬೇಕು ಎಂದು ಹೇಳಿದರು.

ಜಾತಿ ಕಾರಣಕ್ಕೆ ಹಿಂದುಳಿದಿರುವ ಸಮುದಾಯಗಳಿಗೆ ಆರ್ಥಿಕ ಶಕ್ತಿ ನೀಡಬೇಕು. ಜಾತಿ, ವರ್ಗ, ಅಂತಸ್ತನ್ನು ಸೋಕಿಸಿಕೊಳ್ಳದೆ ಇರುವವರು ಮಾತ್ರ ನಿಜ ಶರಣರು. ಪಟ್ಟಭದ್ರ ಹಿತಾಸಕ್ತಿಗಳು ಇರುವುದು ಬಹಳ ಕಡಿಮೆ ಜನ. ಆದರೆ, ಇವರು ಸ್ಟ್ರಾಂಗ್ ಇದ್ದಾರೆ. ಶೋಷಣೆಗೆ, ದೌರ್ಜನ್ಯಕ್ಕೆ ಒಳಗಾದವರು ಬಹುಸಂಖ್ಯಾತರು. ಇವರು ಒಗ್ಗಟ್ಟಾಗಬೇಕು ಎಂದು ಕರೆಕೊಟ್ಟರು.

ಈ ಕಾರ್ಯಕ್ರಮದಲ್ಲಿ ಬಸವಧರ್ಮ ಪೀಠದ ಪೀಠಾಧ್ಯಕ್ಷೆ ಡಾ. ಮಾತೆ ಗಂಗಾದೇವಿ, ಉಪಾಧ್ಯಕ್ಷ ಮಹದೇಶ್ವರ ಸ್ವಾಮೀಜಿ, ಬಸವಯೋಗಿ ಸ್ವಾಮೀಜಿ, ಶಾಸಕ ವಿಜಯಾನಂದ ಕಾಶಪ್ಪನವರ್, ಸಚಿವ ಬೈರತಿ ಸುರೇಶ್, ಶಾಸಕ ಎಂ.ನರೇಂದ್ರ ಸ್ವಾಮಿ, ಎಚ್.ವೈ. ಮೇಠಿ, ರಾಘವೇಂದ್ರ ಹಿಟ್ನಾಳ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...