ಬಾಗಲಕೋಟೆ | ವಿವಿ ಮುಚ್ಚುವ ನಿರ್ಧಾರ ಕೈಬಿಡಲು ಎಸ್‌ಐಒ ಮನವಿ

Date:

2023-24ರಲ್ಲಿ ಸ್ಥಾಪಿಸಲಾದ ರಾಜ್ಯದ ಹೊಸ 10 ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯವನ್ನು ರಾಜ್ಯ ಸರ್ಕಾರ ಮುಚ್ಚುವ ಚಿಂತನೆಯಲ್ಲಿದೆ. ಅದರಲ್ಲಿ ಬಾಗಲಕೋಟೆ ವಿವಿಯು ಒಂದಾಗಿದ್ದು, ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಸ್ಟೂಡೆಂಟ್‌ ಇಸ್ಲಾಮಿಕ್‌ ಆರ್ಗನೈಜೇಶನ್‌ ಆಫ್‌ ಇಂಡಿಯಾ (ಎಸ್‌ಐಒ) ಸರ್ಕಾರಕ್ಕೆ ಮನವಿ ಮಾಡಿತು.

ಸರಿಸುಮಾರು 73 ಸಂಯೋಜಿತ ಕಾಲೇಜುಗಳು ಮತ್ತು ಅಂದಾಜು 30 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಬಾಗಲಕೋಟೆ ವಿಶ್ವವಿದ್ಯಾಲಯವನ್ನು ಬಂದ್ ಮಾಡದೆ, ವಿದ್ಯಾರ್ಥಿಗಳ ಕಲಿಕೆಗೆ ಪೂರಕ ವಾತಾವರಣವನ್ನು ಕಲ್ಪಿಸಿ, ವಿವಿಯನ್ನು ಸದೃಢಗೊಳಿಸಲು ಅಗತ್ಯ ಅನುದಾನವನ್ನು ನೀಡಬೇಕು ಎಂದು ಸಂಘಟನೆಯ ಮುಖಂಡರು ಆಗ್ರಹಿಸಿದರು.

ಹುನಗುಂದ ಶಾಸಕ ವಿಜಯಾನಂದ ಎಸ್‌ ಕಾಶಪ್ಪನವರ ಗೃಹ ಕಚೇರಿಗೆ ಭೇಟಿ ನೀಡಿ, 2014-15ರ ರಾಜ್ಯ ವಾರ್ಷಿಕ ಬಜೆಟ್‌ನಲ್ಲಿ ಘೋಷಣೆಯಾದ ಬಾಗಲಕೋಟೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಅಗತ್ಯ ಅನುದಾನ ನೀಡಬೇಕು ಮತ್ತು ತಕ್ಷಣವೇ ವೈದ್ಯಕೀಯ ಕಾಲೇಜನ್ನು ಕಾರ್ಯಾರಂಭ ಮಾಡಬೇಕು. ಈ ಎರಡು ಶೈಕ್ಷಣಿಕ ಸಂಬಂಧಿ ವಿಷಯಗಳ ಕುರಿತು ಸರ್ಕಾರ ಮಟ್ಟದಲ್ಲಿ ಧ್ವನಿಯೆತ್ತಿ, ಜಿಲ್ಲೆಯ ಜನರ ಬೇಡಿಕೆಯನ್ನು ಸಾಕಾರಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಒತ್ತಾಯ ಮಾಡಬೇಕೆಂದು ವಿನಂತಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಹಿಂದುಳಿದ ಪ್ರದೇಶಗಳ ಕಲಾವಿದರನ್ನು ಮುನ್ನೆಲೆಗೆ ತರಬೇಕು: ಬಸವರಾಜ ಹೊರಟ್ಟಿ

ಈ ವೇಳೆ ಎಸ್‌ಐಒ ಜಿಲ್ಲಾಧ್ಯಕ್ಷ ಮೊಹಮ್ಮದ್ ಪೀರ್ ಲಟಗೇರಿ, ಸ್ಥಾನೀಯ ಅಧ್ಯಕ್ಷ ಆಸಿಫ್ ಹುಣಚಗಿ ಹಾಗೂ ಕಾರ್ಯದರ್ಶಿ ಉಸ್ಮಾನ್ ಗನಿ ಶಿವನಗುತ್ತಿ ಮತ್ತು ನಹೀಮ್ ರಾಂಪುರ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...