ಬಾಗಲಕೋಟೆ | ತಹಶೀಲ್ದಾರ್ ನಿರ್ಲಕ್ಷ್ಯದಿಂದ ಉರೂಸ್‌ಗೆ ತೊಂದರೆ: ಎಸ್‌ಡಿಪಿಐ ಆರೋಪ

Date:

ದರ್ಗಾ ಕಮಿಟಿಯ ಆಡಳಿತಾಧಿಕಾರಿಯೂ ಆಗಿರುವ ಬಾಗಲಕೋಟೆ ತಾಲೂಕು ತಹಶೀಲ್ದಾರ್ ಸತೀಶ ಕೂಡಲಗಿ ಅವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿಯಿಂದಾಗಿ ಉರೂಸ್ ಆಚರಣೆ ವೇಳೆ ವಿದ್ಯುತ್ ಸೇರಿದಂತೆ ಮೂಲ ಸೌಕರ್ಯಗಳಿಲ್ಲದೆ ವ್ಯಾಪಾರಿಗಳು ಹಾಗೂ ಭಕ್ತರು ಪರದಾಡುವಂತಾಯಿತು ಎಂದು ಸೋಶಿಯಲ್‌ ಡೆಮಾಕ್ರಮಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ)ದ ರಾಜ್ಯ ಕಾರ್ಯದರ್ಶಿ ರಂಜಾನ್ ಕಡಿವಾಲ ಆರೋಪಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಈ ಹಿಂದೆ ಶಾಸಕ ವಿಜಯಾನಂದ ಕಾಶಪ್ಪನವರು ಸಮರ್ಪಕವಾಗಿ ಉರೂಸ್ ನಡೆಸಲು ಅವಕಾಶ ನೀಡದ ದುಷ್ಟಶಕ್ತಿಯನ್ನು ಮಟ್ಟ ಹಾಕುವೆ ಎಂದಿದ್ದರು. ಈ ವರ್ಷ ಕತ್ತಲೆಯಲ್ಲಿ ಉರೂಸ್ ನಡೆಯುವಂತಾಗಿದೆ. ಆಚರಣೆಗೆ ವಿದ್ಯುತ್ ಪೂರೈಕೆ ದುಷ್ಟಶಕ್ತಿ ಯಾವುದು ಎಂದು ಶಾಸಕರು ಸ್ಪಷ್ಟ ಪಡಿಸಬೇಕು. ಉರೂಸ್ ಆಚರಣೆಯ ಮೇಲ್ವಿಚಾರಣೆ ಮಾಡದೇ ಅವ್ಯವಸ್ಥೆಗೆ ಶಾಸಕರೂ ಪರೋಕ್ಷವಾಗಿ ಕಾರಣರಾಗಿದ್ದಾರೆ” ಟೀಕಿಸಿದರು.

“ಉರೂಸ್ ಸಂದರ್ಭದಲ್ಲಿ ಅಂಗಡಿಗಳ ಬಾಡಿಗೆ ಹಾಗೂ ಮೂಲಸೌಕಭ್ಯ ಒದಗಿಸಲು ತಾಲೂಕು ಆಡಳಿತ ಟೆಂಡರ್ ಕರೆದು ಬಳಿಕ ಏಕಾಏಕಿ ರದ್ದುಪಡಿಸಿತು. ದರ್ಗಾ ಕಮಿಟಿಯ ಸಲಹಾ ಸಮಿತಿ ಸದಸ್ಯರಿಗೂ ಟೆಂಡರ್‌ನಲ್ಲಿ ಭಾಗವಹಿಸಲು ಅವಕಾಶ ನೀಡಿ ನಿಯಮ ಉಲ್ಲಂಘನೆ ಮಾಡಿತ್ತು. ಉರೂಸ್ ಆಯೋಜನೆಯಲ್ಲಿ ಕರ್ತವ್ಯ ಲೋಪವೆಸಗಿದ ತಹಸೀಲ್ದಾ‌ರ್ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಬಾಗಲಕೋಟೆ | ರನ್ನ ವೈಭವಕ್ಕೆ ಒಂದು ಕೋಟಿ ಅನುದಾನ: ಸಚಿವ ತಿಮ್ಮಾಪೂರ

ಈ ವೇಳೆ ಹಬೀಬಿ ಮೊಮೀನ್ ಹಾಗೂ ಎಸ್‌ಡಿಪಿಐ ತಾಲೂಕು ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...