ಬಾಗಲಕೋಟೆ | ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿ: ದಶಕಗಳ ಹೋರಾಟಕ್ಕೆ ದೊರೆತ ನ್ಯಾಯ

Date:

ಸರ್ಕಾರವು ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ-2025 ಜಾರಿಗೆ ತಂದಿರುವುದರಿಂದ ಕುರಿಗಾಹಿ ಸಮುದಾಯದ ದಶಕಗಳ ಹೋರಾಟಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಸಾಂಪ್ರದಾಯಿಕ ಕುರಿಗಾಹಿಗಳ ಹಿತರಕ್ಷಣಾ ಹೋರಾಟ ಸಮಿತಿ ಮುಖಂಡ ಯಲ್ಲಪ್ಪ ಹೆಗಡೆ ಹೇಳಿದರು.

ಬಾಗಲಕೋಟೆಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, “ಸಾಂಪ್ರದಾಯಿಕ ಅಲೆಮಾರಿ ಕುರಿಗಾಯಿಗಳ ಅಧಿನಿಯಮ-2025ರ ಈ ಕಾಯಿದೆಯ ಜಾರಿಯಿಂದ ಕುರಿಗಾಹಿಗಳಿಗೆ ಕಾನೂನುಬದ್ಧ ಭದ್ರತೆ ದೊರೆಯಲಿದೆ. ಸಾಂಪ್ರದಾಯಿಕ ಸಂಚಾರಿ ಜೀವನ ಶೈಲಿ, ವ್ಯಕ್ತಿ ಮತ್ತು ಹಕ್ಕುಗಳಿಗೆ ಸರ್ಕಾರ ಮಾನ್ಯತೆ ನೀಡಿರುವುದು ಕುರಿಗಾಹಿ ವೃತ್ತಿ ಸಮುದಾಯದ ಭವಿಷ್ಯವನ್ನು ಬಲಪಡಿಸುತ್ತದೆ” ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಕಾನೂನು ಮಾರ್ಗದರ್ಶನ ಹೋರಾಟಕ್ಕೆ ಮಾಡಿದ ತಿಂಥಣಿ ಬ್ರಿಡ್ಜ್ ಕನಕ ಗುರುಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಹಾಗೂ ಅಧಿವೇಶನದಲ್ಲಿ ಈ ವಿಧೇಯಕವನ್ನು ಮಂಡಿಸಿ ಯಶಸ್ವಿಗೆ ತೋರಿದ ಶ್ರಮ, ದೃಢನಿಲುವು ಮತ್ತು ಬದ್ಧತೆಗೆ, ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರಿಗೆ ಧನ್ಯವಾದ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸಭೆಯೊಳಗೆ ಕುರಿಗಾಹಿಗಳ ಪರವಾಗಿ ಧ್ವನಿ ಎತ್ತಿ, ಮೀಸಲು ಅರಣ್ಯ ಪ್ರದೇಶಗಳಲ್ಲಿಯೂ ಕುರಿಗಳನ್ನು ಮೇಯಿಸುವ ಹಕ್ಕು ದೊರಕಬೇಕು ಎಂಬ ಮಹತ್ವದ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದ ಶಾಸಕ ಬಿ ಬಿ ಚಿಮ್ಮನಕಟ್ಟಿ, ಜೆ ಟಿ ಪಾಟೀಲ ಅವರಿಗೂ ಧನ್ಯವಾದ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಕೋಟೆಗಂಗೂರು ಗ್ರಾಮಕ್ಕೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಮನವಿ

“ಕುರಿಗಾಹಿಗಳ ಸಂಘಟಿತ ಹೋರಾಟ 2022ರಿಂದ ಪ್ರಾರಂಭವಾಗಿ, ನಂತರ 2025 ಬಾದಾಮಿ ತಾಲೂಕಿನ ಉಗಲವಾಡಿ ಗ್ರಾಮದ ಶರಣಪ್ಪ ಜಮ್ಮನಕಟ್ಟಿ ಕುರಿಗಾಹಿಯ ಹತ್ಯೆಯನ್ನು ಖಂಡಿಸಿ ಮತ್ತು ಕಾಯ್ದೆ ಜಾರಿಗೆ ರಾಜ್ಯಾದ್ಯಂತ ಹೋರಾಟ ಮಾಡಲಾಯಿತು. ಎಲ್ಲ ಕಡೆ ಕುರಿಗಾಹಿಗಳ ಸಂಘಟಿತ ಹೋರಾಟದ ಫಲವಾಗಿ ಈ ಕಾಯ್ದೆ ಜಾರಿಯಾಗಲು ಸಾಧ್ಯವಾಗಿದೆ. ಈ ಕಾಯ್ದೆಯಲ್ಲಿ ಕೆಲ ತಿದ್ದುಪಡಿಗಳು ಮತ್ತು ಕೆಲ ಅಂಶಗಳ ಸೇರ್ಪಡೆಯಾಗಬೇಕಿದೆ. ಮುಂದಿನ ಚಳಿಗಾಲ ಅಧಿವೇಶನದಲ್ಲಿ ತಿದ್ದುಪಡಿ ಕಾಯಿದೆ ಜಾರಿ ಮಾಡಬೇಕು” ಎಂದು ಸಿದ್ದರಾಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಮುಖಂಡರಾದ ಬಸವರಾಜ ಧರ್ಮತಿ, ಸಿದ್ದಪ್ಪ ಬಳಗಾನೂರ, ಪರಶುರಾಮ ಮಂಟೂರ, ಸುವರ್ಣಾ ನಾಗರಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...