ಬಾಗಲಕೋಟೆ | ನಿಲ್ದಾಣದಲ್ಲಿ ನಿಲ್ಲಿಸದ ಬಸ್‌ಗೆ ಕಲ್ಲೆಸೆದು ದಂಡ ತೆತ್ತ ಮಹಿಳೆ

Date:

ಶಕ್ತಿ ಯೋಜನೆಯ ವಿರುದ್ಧ ವಿರೋಧಿಗಳು ಅಪಹಾಸ್ಯ ಮಾಡುತ್ತಲೇ ಇದ್ದಾರೆ. ಸರ್ಕಾರಿ ಸಾರಿಗೆ ಬಸ್‌ಗಳ ಕೆಲವು ಚಾಲಕ-ನಿರ್ವಾಹಕರೂ ಇಂತಹ ಅಪಹಾಸ್ಯ ಮಾಡುತ್ತಿರುವುದು ವರದಿಯಾಗಿದೆ. ಅಂತಹ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸಾರಿಗೆ ನಿಗಮಗಳು ಹೇಳಿವೆ.

ಈ ನಡುವೆ, ನಿಲ್ದಾಣದಲ್ಲಿ ಬಸ್‌ ನಿಲ್ಲಿಸುವಂತೆ ಕೈ ಬೀಸಿದರೂ, ನಿಲ್ಲಿಸದೆ ಮುಂದೆ ಹೋದ ಬಸ್‌ಗೆ ಮಹಿಳೆಯೊಬ್ಬರು ಕಲ್ಲೆಸೆದು, ದಂಡ ತೆತ್ತು, ಅದೇ ಬಸ್‌ನಲ್ಲಿ ಪ್ರಯಾಣಿಸಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ಮರಳುತ್ತಿದ್ದರು. ಬಾದಾಮಿ ತಾಲೂಕಿನ ಲಿಂಗಾಪುರ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತಿದ್ದರು. ಯಾವುದೇ ಬಸ್‌ ಬಾರದ ಕಾರಣ ಭ್ರಮನಿರಸನಗೊಂಡಿದ್ದರು. ಈ ವೇಳೆ, ಬಂದ ಕೊಪ್ಪಳ-ಹೊಸಪೇಟೆ ನಾನ್‌ಸ್ಟಾಪ್ ಬಸ್‌ಗೆ ನಿಲ್ಲಿಸುವಂತೆ ಕೈ ಬೀಸಿದ್ದಾರೆ. ಬಸ್‌ ನಿಲ್ಲಿಸದಿದ್ದಾಗ ಕಲ್ಲು ಎಸೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಲು ಬಿದ್ದ ಬಸ್‌ನ ಕಿಟಕಿಗೆ ಹಾನಿಯಾಗಿದೆ. ಬಳಿಕ ಬಸ್‌ ಚಾಲಕ ಬಸ್‌ ನಿಲ್ಲಿಸಿ, ಆಕೆಯನ್ನು ಹತ್ತಿಕೊಂಡು ಮುನಿರಾಬಾದ್‌ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ. ಬಟ್‌ ಕಿಟಕಿ ರಿಪೇರಿಗಾಗಿ 2,000 ರೂ. ದಂಡ ಪಾವತಿಸಿದ ಮಹಿಳೆ, ಅದೇ ಬಸ್‌ನಲ್ಲಿ ತನ್ನೂರಿಗೆ ತೆರಳಿದ್ದಾರೆ.

“ಲಿಂಗಾಪುರ ನಿಲ್ದಾಣದಲ್ಲಿ ಯಾವು ಬಸ್‌ ಕೂಡ ನಿಲ್ಲಿಸುತ್ತಿರಲಿಲ್ಲ. ಬಸ್‌ ನಿಲ್ಲಿಸದಿದ್ದರೆ ನಾವು ಪ್ರಯಾಣಿಸುವುದು ಹೇಗೆ. ಕಾದು ಕಾದು ಬಸವಳಿದು, ಕಲ್ಲು ಎಸೆದೆ ಎಂದು ಆಕೆ ತನ್ನ ಅಸಹಾಯಕತೆ ತೋಡಿಕೊಂಡಿದ್ದಾರೆ” ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...