ಬಾಗಲಕೋಟೆ | ಕಳ್ಳರ ಹಾವಳಿ: ದೊಣ್ಣೆ ಹಿಡಿದು ರಾತ್ರಿ ಗಸ್ತು ತಿರುಗುತ್ತಿರುವ ಮಹಿಳೆಯರು

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಮನೆಗಳಲ್ಲಿ ದರೋಡೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕಳ್ಳರ ಹಾವಳಿಯನ್ನು ತಡೆಯಲು, ಕಳ್ಳರನ್ನು ಹಿಡಿಯಲು ಮಹಿಳೆಯರೇ ಮುಂದಾಗಿದ್ದಾರೆ. ಮುಧೋಳದ ಜಯನಗರ ಬಡಾವಣೆಯ ಮಹಿಳೆಯರು ದೊಣ್ಣೆ ಹಿಡಿದು, ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾರೆ.

ಮಹಿಳೆಯರ ಜೊತೆಗೆ ಪುರುಷರೂ ಕೈಜೋಡಿಸಿದ್ದಾರೆ. ದಿನನಿತ್ಯ ಮಧ್ಯರಾತ್ರಿ 12.30ರಿಂದ ಬೆಳಗಿನ ಜಾವ 4 ಗಂಟೆವರೆಗೆ ಗುಂಪುಗಳಾಗಿ ಗಸ್ತು ತಿರುಗುತ್ತಿದ್ದಾರೆ. ಪಟ್ಟಣದ ಜಯನಗರ, ಕೊಡಗ ಪ್ಲಾಟ್, ಸದಾಶಿವ ಕಾಲೊನಿ, ಯಡಹಳ್ಳಿ ಹಳೇ ಬೈ ಪಾಸ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಹಿಳೆಯರು ಮತ್ತು ಪುರಷರು ಗಸ್ತು ತಿರುಗುತ್ತಿದ್ದಾರೆ. ಕಳ್ಳರನ್ನು ಹಿಡಿಯಲು ಪೊಲೀಸರಿಗೆ ನೆರವು ನೀಡುತ್ತಿದ್ದಾರೆ.

ಗಸ್ತು ನಡೆಸುವುದಾಗಿಯೇ ಮುಧೋಳ ನಿವಾಸಿಗಳು ವಾಟ್ಸ್‌ಆ್ಯಪ್ ಗುಂಪನ್ನು ರಚಿಸಿದ್ದಾರೆ. ಆ ಗುಂಪಿನಲ್ಲಿ ಯಾರು ಯಾವ ಭಾಗದಲ್ಲಿ ಗಸ್ತಿಗೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಚರ್ಚಿಸಿಕೊಂಡು, ಒಗ್ಗಟ್ಟಾಗಿ ರಸ್ತೆಗೆ ಇಳಿಯುತ್ತಿದ್ದಾರೆ. ಸಾರ್ವಜನಿಕರೇ ಗಸ್ತು ನಡೆಸುತ್ತಿದ್ದು, ಪಟ್ಟಣದ ನಿವಾಸಿಗಳು ಆತಂಕವಿಲ್ಲದೆ ಜೀವಿಸುವ ವಾತಾವರಣ ಸೃಷ್ಟಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರು ಕೂಡ ‘ರಾತ್ರಿ ಗಸ್ತು’ ತಿರುವುದನ್ನು ಹೆಚ್ಚಿಸಿದ್ದಾರೆ. ಪೊಲೀಸರು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಕಳ್ಳರ ಹಾವಳಿಗೆ ಬ್ರೇಕ್‌ ಹಾಕಲು ಮುಧೋಳ ಮಾದರಿಯಾಗುತ್ತಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...