ಬಾಗಲಕೋಟೆ | ಉದ್ಯೋಗ ಕಾರ್ಡ್‌ ವಿತರಿಸುವಂತೆ ಕೂಲಿಕಾರ್ಮಿಕರ ಆಗ್ರಹ

Date:

ಉದ್ಯೋಗ ಖಾತರಿ ಚೀಟಿ (ಜಾಬ್‌ ಕಾರ್ಡ್) ವಿತರಿಸುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅವರು ಹಾರಿಕೆ ಮಾತುಗಳನ್ನಾಡುತ್ತಾರೆ. ಕೂಡಲೇ ಉದ್ಯೋಗ ಕಾರ್ಡ್‌ ವಿತರಣೆ ಮಾಡಬೇಕು ಎಂದು ಮನರೇಗಾ ಕಾರ್ಮಿಕ ಲಕ್ಕವ್ ತೆಗ್ಗಿ ಆರೋಪಿಸಿದರು.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕು ಅನಗವಾಡಿಯ ಗ್ರಾಮ ಪಂಚಾಯತ್ ಎದುರು ಮನರೇಗಾ ಅಡಿಯಲ್ಲಿ ಕೆಲಸ ಮಾಡಲು ಗ್ರಾಮೀಣ ಕೂಲಿ ಕಾರ್ಮಿಕರಿಗೆ ಜಾಬ್ ಕಾರ್ಡ್‌ ನೀಡಬೇಕು ಎಂದು ಒತ್ತಾಯಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಲಕ್ಕವ್ ತೆಗ್ಗಿ, “ಕಳೆದ ಎರಡು ತಿಂಗಳ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ಹಾಗೂ ಜಾಬ್ ಕಾರ್ಡ್ ಸಲುವಾಗಿ ಅನಗವಾಡಿ ಗ್ರಾಮ ಪಂಚಾಯಿತಿಗೆ ಹೋಗಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಬ್ಯಾಂಕ್ ಅಕೌಂಟ್‌ಗಳ ಜೆರಾಕ್ಸ್ ಪ್ರತಿಗಳನ್ನು ಒದಗಿಸಿದರೂ ಕೂಡ ನಮಗೆ ಕೆಲಸ ನೀಡುತ್ತಿಲ್ಲ. ಗ್ರಾಮ ಪಂಚಾಯತಿಯವರನ್ನು ಕೇಳಿದರೆ, ಬೇಜವಾಬ್ದಾರಿ ಮಾತುಗಳನ್ನಾಡುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಳಿಗ್ಗೆಯಿಂದ ಸುರಿಯುತ್ತಿರುವ ಮಳೆಯಲ್ಲಿಯೇ ಚಿಕ್ಕ ಮಕ್ಕಳನ್ನು ಕರೆದುಕೊಂಡು ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದೇವೆ. ಗ್ರಾಮ ಪಂಚಾಯತಿಯವರು ಸೌಜನ್ಯಕ್ಕಾದರೂ ಬಂದು ಮಾತನಾಡಿಸಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಕಾಲುವೆ ಸ್ವಚ್ಛಗೊಳಿಸುವಂತೆ ರೈತ ಸಂಘ ಆಗ್ರಹ

ತಾಲೂಕು ಪಂಚಾಯಿತಿ ಇಒ ಸಿದ್ದು ನಕ್ಕರಗುಂದಿಯವರು ಪ್ರತಿಭಟನಾ ಸ್ಥಳಕ್ಕೆ ಬಂದು ಪ್ರತಿಭಟನಾಕಾರರೊಂದಿಗೆ ಮಾತನಾಡಿ, “ಒಂದು ವಾರದೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತೇವೆ” ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘದ ತಾಲೂಕು ಸಂಚಾಲಕಿ ಸವಿತಾ, ಸಂಘಟಕರು ಮಸ್ತಾನ ನದಾಫ್, ಕಸ್ತೂರಿ ತೆಗ್ಗಿ, ಶಾಂತಾಭಾಯಿ ಹಿರೇಮಠ, ಮುಡಿಯವ್ವ ತೆಗ್ಗಿ, ರೇಷ್ಮಾ ನದಾಫ್, ರಾಜು ತೆಗ್ಗಿ, ಮಲ್ಲಪ್ಪ ಕಿರುಸೂರ್ ಹಾಗೂ ಸಂಘಟನೆಯ ಕಾರ್ಯಕರ್ತರು ಇದ್ದರು.

ಬಾಗಲಕೋಟೆ ಜಿಲ್ಲಾ ವಾಲೆಂಟಿಯರ್‌ ಖಾಜಾಮೈನುದ್ದಿಣ ತಹಶೀಲ್ದಾರ್ ಬೀಳಗಿ ಮಾಹಿತಿ ಆಧರಿಸಿದ ವರದಿ 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...