ಬಾಗಲಕೋಟೆ | ಮನರೇಗಾ ಕೂಲಿ ಕೆಲಸಕ್ಕಾಗಿ ಕಾರ್ಮಿಕರ ಆಗ್ರಹ

Date:

ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ)ಯಡಿ ಕೂಲಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ತಾಲೂಕಿನ ಮೆಳ್ಳಿಗೇರಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಮಿಕರು, “ಹಲವಾರು ದಿನಗಳಿಂದ ಕೂಲಿ ಕೆಲಸಕ್ಕಾಗಿ ಗ್ರಾಮ ಪಂಚಾಯಿತಿಗೆ ಎಡತಾಕುತ್ತಿದ್ದರೂ ಅಧಿಕಾರಿಗಳು ಕೆಲಸ ನೀಡುತ್ತಿಲ್ಲ. ಸರಿಯಾದ ರೀತಿಯಲ್ಲಿ ಜಾಬ್ ಕಾರ್ಡ್ ನೀಡುತ್ತಿಲ್ಲ. ಕೂಡಲೇ ನಮಗೆ ಕೂಲಿ ಕೆಲಸ ನೀಡಬೇಕು” ಎಂದು ಒತ್ತಾಯಿಸಿದರು.

“ದಿನಗೂಲಿ ಸಿಗದೆ ಬೇರೆ ಊರಿಗೆ ಕೆಲಸ ಹರಸಿ ಹೋಗಬೇಕಾದ ಪರಿಸ್ಥಿತಿಯಿದೆ. ಇದ್ದ ಊರಿನಲ್ಲಿಯೇ ಕೆಲ‌ಸ ಮಾಡಬೇಕೆಂದರೆ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದವರು ಮನರೇಗಾ ಕೆಲಸ ನೀಡುತ್ತಿಲ್ಲ. ಇನ್ನುಮುಂದೆ ಕೂಲಿ ಕೆಲಸ ನೀಡದೆ ಹೋದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥರು ಕೆಲಸ ಕೇಳಿಕೊಂಡು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆಗೆ ಕುಳಿತ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಒ ಪ್ರತಿಭಟನೆ ನೇತೃತ್ವ ಹೊತ್ತಿದ್ದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕ ಶಂಕರ ಅವರೊಂದಿಗೆ ಏಕವಚನದಲ್ಲಿ ಏರುಧ್ವನಿಯಲ್ಲಿ ಮಾತು ಬೆಳೆಸಿದರು. ಇದೇ ವೇಳೆ ಘಟನೆಯನ್ನು ವಿಡಿಯೋ ಮಾಡುತ್ತಿದ್ದ ಮಹಿಳೆಯೋರ್ವಳಿಗೆ ವಿಡಿಯೋ ಮಾಡದಂತೆ ತಾಕೀತು ಮಾಡಿರುವುದು ಕಂಡುಬಂದಿದೆ.

ಇಒ ಉಮೇಶ ಸಿದ್ನಾಳ ನಡೆಗೆ ಕೋಪಗೊಂಡ ಗ್ರಾಮಸ್ಥರು, “ನೀವು ಬಡವರಿಗೆ ಕೆಲಸ ಕೊಡಿಸಲು ಬಂದಿದ್ದೀರೋ? ಅಥವಾ ನಮ್ಮನ್ನು ಹೆದರಿಸಲು ಬಂದಿದ್ದೀರೋ?” ಎಂದು ಆಕ್ರೋಶಗೊಂಡ ಕಾರ್ಮಿಕರು, ಮೊದಲು ಕೆಲಸ ನೀಡುವಂತೆ ಪಟ್ಟುಹಿಡಿದರು. ಆಗ ಗ್ರಾಮಸ್ಥರೊಂದಿಗೆ ಮಾತನಾಡಿದ ಇಒ ಶೀಘ್ರದಲ್ಲಿಯೇ ಗ್ರಾಮಸ್ಥರಿಗೆ ಕೂಲಿ ಕೆಲಸ‌ ನೀಡುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನ: ಪೋಸ್ಟರ್ ಬಿಡುಗಡೆ

ಗ್ರಾಮದ ಜನತೆ ಕೆಲಸಕ್ಕಾಗಿ ಒತ್ತಾಯಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸುತ್ತಿದ್ದರೆ ಅಲ್ಲಿನ ಪಿಡಿಒ 12 ಗಂಟೆಯಾದರೂ ಕಚೇರಿಗೆ ಆಗಮಿಸಿರಲಿಲ್ಲ. ಈ ಬಗ್ಗೆ ಅಸಮಾಧಾನ ಹೊರಹಾಕಿದ ಪ್ರತಿಭಟನಾಕಾರರು ಅಭಿವೃದ್ಧಿ ಅಧಿಕಾರಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಆಗಮಿಸುವುದಿಲ್ಲವೆಂದು ದೂರಿದರು.

ಮೆಳ್ಳಿಗೇರಿ ಗ್ರಾಮದಲ್ಲಿ ಸದ್ಯ ಜಾಬ್ ಕಾರ್ಡ್ ಇರುವ ಜನರಿಗೆ ಶೀಘ್ರವೇ ಉದ್ಯೋಗ ನೀಡಲಾಗುವುದು. ಜಾಬ್ ಕಾರ್ಡ್ ಇಲ್ಲದಿರುವ ಜನರನ್ನು ಗುರುತಿಸಿ ಅವರಿಗೆ ಜಾಬ್ ಕಾರ್ಡ್ ವ್ಯವಸ್ಥೆ ಮಾಡಿ ಆ ನಂತರದಲ್ಲಿ ಕೆಲಸ ನೀಡಲಾಗುವುದು.

ಈರಮ್ಮ, ಶ್ರೀದೇವಿ, ಸಿದ್ದವ್ವ, ಗೀತಾ, ರಾಧಿಕಾ, ಸಿದ್ದಪ್ಪ, ಶಿವು, ಸವಿತಾ, ಶಿಲ್ಪಾ, ರವಿ, ಬಸವರಾಜು ಗ್ರಾಕೂಸ ಜಿಲ್ಲಾ ಸಂಚಾಲಕ ಶಂಕರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...