ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ; ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

Date:

  • ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ
  • ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ, ಅಪಾರ ನಷ್ಟವಾಗಿದೆ.

ರೈತ ಈಶ್ವರಪ್ಪ ಬಡಿಗೇರ ಅವರ ಆರು ಎಕರೆ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಸ್ವತಃ ಬೆಂಕಿ ನಂದಿಸಲು ಪ್ರಯತ್ನಿಸಿದರು. ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದರು. ಅಗ್ನಿ ಶಾಮಕ ದಳದ ಸಿಬ್ಬಂದಿ ಬರುವವರೆಗೆ ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿಯಾಗಿದೆ.

ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಹೊಲದ ಬದುವಿಗೆ ಇರುವ ಟಿಸಿಯಿಂದ ಹೊಲದ ಮಧ್ಯ ಭಾಗದಲ್ಲೇ ತಂತಿಗಳು ಹಾದು ಹೋಗಿವೆ. ಕಬ್ಬಿನ ಪಡದ ಪ್ರತಿ ದಂಟು ಸುಮಾರು 40 ಗಣಿಕೆಯಷ್ಟು ಎತ್ತರಕ್ಕೆ ಬೆಳೆದಿದ್ದು, ವಿದ್ಯುತ್‌ ತಂತಿಗಳು ಜೋತು ಬಿದ್ದ ಪರಿಣಾಮ ಬೆಂಕಿ ಅವಘಡ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುತ್ತ ಮುತ್ತಲಿನ ಊರಿನಲ್ಲೇ ಈ ಪರಿ ಪ್ರಮಾಣದಲ್ಲಿ ಕಬ್ಬು ಬೆಳೆದಿಲ್ಲ. ದಾರಿ ಹೋಕರೆಲ್ಲ ಕಬ್ಬು ಬೆಳೆದಿದ್ದನ್ನು ನೋಡಿ ಬೆಳೆದರೆ ಹೀಗೆ ಬೇಳಿಬೇಕು ಎನ್ನುವ ಪ್ರಶಂಸೆಯ ಮಾತುಗಳನ್ನು ಹೇಳುತ್ತಿದ್ದರು. ಈಗ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಎಕರೆ ಒಂದಕ್ಕೆ ಕಬ್ಬಿಗೆ ₹3 ಲಕ್ಷ ನಷ್ಟ ಆಗುತ್ತದೆ. ಮೂರು ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸೋಮವಾರ ತಹಶೀಲ್ದಾರ್‌ ಸಾಹೇಬರು ಹೊಲ ಬಂದು ನೋಡುತ್ತೇನೆ ಎಂದಿದ್ದಾರೆ” ಎನ್ನುತ್ತಾರೆ ರೈತನ ಮಗ ಈರಣ್ಣ ಬಡಿಗೇರ.

“ಇದೇ ಮೊದಲ ಬಾರಿಗೆ ನಾವು ಕಬ್ಬು ಬೆಳೆದಿದ್ದು. ವಾರದ ಹಿಂದೆ ಎಲ್ಲ ಸಂಬಂಧಿಕರು ಸೇರಿ ಸಂಭ್ರಮದಿಂದ ಕಬ್ಬಿನ ಪಡಕ್ಕೆ ಪೂಜೆ ಮಾಡಿದ್ದೆವು. ಸುತ್ತಲಿನ ರೈತರು ಕಬ್ಬು ಬೆಳೆದ ಪರಿ ನೋಡಿ ಬಹಳ ಹರ್ಷ ವ್ಯಕ್ತಪಡಿಸಿದ್ದರು. ಮುಂದಿನ ತಿಂಗಳು ಕಟಾವು ಮಾಡಬೇಕಿತ್ತು. ಇಷ್ಟರಲ್ಲಿ ಬೆಂಕಿ ಬಿದ್ದು ಕಬ್ಬಿನ ಪಡ ಸುಟ್ಟು ಹೋಗಿದೆ. ಗಂಗಾ ಕಲ್ಯಾಣ ಕೊಳವೆಬಾಯಿಯಲ್ಲಿ ನೀರು ಬರದೇ ಇದ್ದಿದ್ದರಿಂದ 3 ಲಕ್ಷ ರೂ. ಸಾಲ ಮಾಡಿ ಮತ್ತೆ ಎರಡು ಕೊಳವೆಬಾವಿ ಕೊರಿಸಿದ್ದೆ. 2 ಲಕ್ಷ ರೂ. ಸಾಲ ಮಾಡಿ ಆರು ಎಕರೆ ಕಬ್ಬು ಹಾಕಿದ್ದೆ. ಈಗ ಮೂರು ಎಕರೆ ಪಡ ಪೂರ್ತಿ ಸುಟ್ಟು ಹೋಗಿದೆ. ಸರ್ಕಾರ ನಮ್ಮ ಪಾಲಿಗೆ ನೆರವಾಗಬೇಕು. ಹೊಲದ ನಷ್ಟ ನೋಡಿ ಪರಿಹಾರ ಕಲ್ಪಿಸಿದರೆ ಸಾಲದ ಹೊರೆ ಕಡಿಮೆ ಆಗುತ್ತದೆ” ಎಂದು ಕಬ್ಬು ಬೆಳೆದ ರೈತ ಈಶ್ವರಪ್ಪ ಬಡಿಗೇರ ಕಣ್ಣೀರಿಟ್ಟು ಹೇಳಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...