ಬಾಗಲಕೋಟೆ | ಪಡಿತರ ಚೀಟಿ ತಿದ್ದುಪಡಿ; ಇನ್ನೂ ಬಗೆಹರಿಯದ ಸರ್ವರ್‌ ಸಮಸ್ಯೆ

Date:

ಪಡಿತರ ಚೀಟಿಯಲ್ಲಿ ತಿದ್ದುಪಡಿಗಳನ್ನು ಮಾಡಿಸಲು ಹಲವಾರು ಫಲಾನುಭವಿಗಳು ಕಾಯುತ್ತಿದ್ದಾರೆ. ಆದರೆ, ಸರ್ವರ್ ಸಮಸ್ಯೆ ಇನ್ನೂ ಬಗೆಹರಿದಿಲ್ಲ. ಈ ಸಮಸ್ಯೆ ಕೇಳಲು ನಾವು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನು ಕೇಳಬೇಕಾ ಅಂತ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ಆಹಾರ ಇಲಾಖೆಯಲ್ಲಿ ಸಾರ್ವನಿಕರು ಶಿರಸ್ತೇದಾರ್ ಸಂತೋಷ್ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೆಪ್ಟೆಂಬರ್ 23ರಿಂದ ಎಲ್ಲ ಸಮಸ್ಯೆಗಳು ಸರಿಹೋಗಲಿದೆ. ಸರ್ವರ್‌ ಸಮಸ್ಯೆ ಇರುವುದಿಲ್ಲ. ಗ್ರಾಹಕರು ಪಡಿತರ ಕಾರ್ಡುಗಳಲ್ಲಿನ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದರು. ಆದರೆ, ಸಮಸ್ಯೆ ಇನ್ನೂ ಮುಂದುವರೆದಿದೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ.

ಪಡಿತರ ಕಾರ್ಡುಗಳಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ ಸೇರಿದಂತೆ ನಾನಾ ರೀತಿಯ ತಿದ್ದುಪಡಿಗೆ ಸರ್ಕಾರ ಅವಕಾಶ ನೀಡಿದೆ. ಆದರೆ, ಸರ್ವರ್‌ ಸಮಸ್ಯೆ ಬಗೆಹರಿಯದ ಕಾರಣ ಹಲವಾರು ದಿನಗಳಿಂದ ಗ್ರಾಹಕರು ಮಾತ್ರ ಸೈಬರ್‌ ಕೇಂದ್ರಗಳಿಗೆ ಅಲೆದು ಅಲೆದು ಸಾರ್ವಜನಿಕರು ಅಸಮಾಧಾನಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಎರಡು ವಾರಗಳಿಂದ ಬೀಳಗಿ ತಾಲೂಕಿನಲ್ಲಿ ಒಂದೇ ಒಂದು ಕಾರ್ಡಿನಲ್ಲಿ ತಿದ್ದುಪಡಿ ಮಾಡಿಸಲು ಸಾಧ್ಯವಾಗಿಲ್ಲ. ದಿನನಿತ್ಯ ಹಲವಾರು ಜನರು ಕಾರ್ಡ್‌ಗಳನ್ನು ಹಿಡಿದುಕೊಂಡು ಸೈಬರ್‌ ಕೇಂದ್ರ, ಗ್ರಾಮ ಒನ್‌ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಆದರೆ, ಕೆಲಸವಾಗದೆ ಇಲಾಖೆ ವಿರುದ್ದ ಅಸಮಾಧಾನಗೊಂಡು ವಾಪಸ್‌ ಹೋಗುತ್ತಿದ್ದಾರೆ.

ಸರ್ಕಾರ ಅರ್ಹರು ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಬಾರದೆಂದು ಕಾರ್ಡುಗಳಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳುತ್ತಿದೆ. ಮತ್ತೊಂದು ಕಡೆ ಸರಿಯಾದ ರೀತಿಯಲ್ಲಿ ಸರ್ವರ್‌ ಕೆಲಸ ಮಾಡದೇ ಇರುವುದರಿಂದ ಅನೇಕ ಅರ್ಹ ಫಲಾನುಭವಿಗಳು ಯೋಜನೆಯಿಂದ ದೂರ ಉಳಿಯುವಂತಾಗಿದೆ.

ವರದಿ: ಖಾಜಾಮೈನುದ್ದಿನ ತಹಶಿಲ್ದಾರ, ಸಿಟಿಜನ್ ಜರ್ನಲಿಸ್ಟ್, ಬೀಳಗಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...