ಬಾಗಲಕೋಟೆ | ಕಾಂಗ್ರೆಸ್ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ‌

Date:

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕಾಂಗ್ರೆಸ್ ಪಕ್ಷದ ತತ್ವಗಳನ್ನು ಮನೆಮನೆಗೆ ತಲುಪಿಸಬೇ‌ಕು ಎಂದು ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಾಗರಾಜ ಷ ಹದ್ಲಿ‌ ಕರೆ ನೀಡಿದರು.

ಬಾಗಲಕೋಟೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ನವನಗರದ ಮಹಾತ್ಮ ಗಾಂಧಿ ಭವನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ದಿನವಿಡೀ ನಡೆದ ಈ ಕಾರ್ಯಾಗಾರದಲ್ಲಿ ಪಕ್ಷದ ಸಂಘಟನೆ, ಸಿದ್ಧಾಂತ, ಸಂವಿಧಾನ ಮತ್ತು ಸಮಕಾಲೀನ ರಾಜಕೀಯ ವಿಚಾರಗಳ ಕುರಿತು ವಿವರವಾದ ಚರ್ಚೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಾಗಾರದಲ್ಲಿ ರಾಜ್ಯಾಧ್ಯಕ್ಷ ವಿನಯಕುಮಾರ ಸೊರಕೆ ಅವರು ಮನರೇಗಾ ಯೋಜನೆ ರದ್ದತಿ ಹಾಗೂ ಅದರ ಪರಿಣಾಮಗಳು ಕುರಿತು ಮಾತನಾಡಿ, “ಮನರೇಗಾ ಗ್ರಾಮೀಣ ಜನರ ಜೀವನಾಧಾರವಾಗಿದ್ದು, ಅದನ್ನು ದುರ್ಬಲಗೊಳಿಸುವ ಕ್ರಮಗಳನ್ನು ಕಾಂಗ್ರೆಸ್ ಪಕ್ಷ ವಿರೋಧಿಸಲಿದೆ” ಎಂದು ಹೇಳಿದರು.

ಸಹ ಅಧ್ಯಕ್ಷ ಡಾ. ಎಲ್ ಹನುಮಂತಯ್ಯ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಭಾರತೀಯ ಸಂವಿಧಾನ ಕುರಿತು ಮಾತನಾಡಿ, “ಸಂವಿಧಾನಾತ್ಮಕ ಮೌಲ್ಯಗಳನ್ನು ರಕ್ಷಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ” ಎಂದು ತಿಳಿಸಿದರು.

ಮುಖ್ಯ ಸಂಯೋಜಕ ಸುಧೀರಕುಮಾರ ಮುರೊಳ್ಳಿ ಅವರು ರಾಜಕೀಯ ಕೋಮುವಾದ ಹಾಗೂ ಭಾರತದ ಸಾಮರಸ್ಯ ಕುರಿತು ಮಾತನಾಡಿ, “ಕೋಮುವಾದಿ ರಾಜಕಾರಣದಿಂದ ದೇಶದ ಏಕತೆ ಮತ್ತು ಸಹಬಾಳ್ವೆಗೆ ಅಪಾಯ ಉಂಟಾಗುತ್ತದೆ” ಎಂದು ಎಚ್ಚರಿಸಿದರು.

ಉಪಾಧ್ಯಕ್ಷ ಅಬ್ದುಲ್ ಮುನೀರ್ ಅವರು ಎಸ್ ಐ ಆರ್ ಮತ್ತು ಬಿ ಎಲ್ ಎಗಳ ಪಾತ್ರ ಕುರಿತು ವಿವರಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ವತಂತ್ರ ಸಂಸ್ಥೆಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಕಾರ್ಯಕರ್ತರಿಗೆ ಅರಿವು ಮೂಡಿಸಿದರು.

ಕಾರ್ಯಾಗಾರದಲ್ಲಿ ಮುಖ್ಯ ಸಂಯೋಜಕ ಶರಣಪ್ಪ ಕೊಟಗಿ, ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಯಾನಂದ ಪಾಟೀಲ ಹಾಗೂ ಮುಖಂಡ ಮಲ್ಲಿಕಾರ್ಜುನ ಹುಲ್ಲಪ್ಪ ಮೇಟಿ ಅವರು ಮಾತನಾಡಿ, “ಪಕ್ಷದ ಸಂಘಟನೆ ಮತ್ತಷ್ಟು ಬಲಪಡಿಸುವ ಅಗತ್ಯವಿದೆ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿದ್ದೀರಾ? ಮನರೇಗಾ ಮರು ಜಾರಿಗೆ ಸ್ಟಾಲಿನ್ ಸರ್ಕಾರ ಆಗ್ರಹ: ವಿಬಿ ಜಿ ರಾಮ್‌ ಜಿ ವಿರುದ್ದ ಅಂಗೀಕರಿಸಿದ ಗೊತ್ತುವಳಿಗಳೇನು?

ಜಿಲ್ಲೆಯ ವಿವಿಧ ಬ್ಲಾಕ್‌ಗಳಿಂದ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಾಗಾರವನ್ನು ಯಶಸ್ವಿಗೊಳಿಸಿದರು. ಇಂತಹ ತರಬೇತಿ ಕಾರ್ಯಾಗಾರಗಳು ಪಕ್ಷದ ಸಂಘಟನೆ ಮತ್ತು ಮುಂದಿನ ರಾಜಕೀಯ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡಲಿವೆ ಎಂದು ನಾಯಕರು ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಉಮೇಶ ಮೇಟಿ ಸಂಯೋಜಕ ಪಿ ಕೆ ನೀರಲಕಟ್ಟಿ ಅವರು ಉಪಸ್ಥಿತರಿದ್ದರು. ಸುನೀಲ ಬಾಲಗಾವಿ ಅವರು ಸ್ವಾಗತ ಭಾಷಣ ಮಾಡಿದರು. ಶ್ರೀದರ ನೀಲನಾಯಕ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...