ಬಾಗಲಕೋಟೆ | ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಅಂಚೆ ಇಲಾಖೆ ಆವರಣದಲ್ಲಿರುವ ಮತ್ತು ನಗರದ ಸುತ್ತಮುತ್ತಲಿರುವ ಎಲ್ಲ ಬೃಹತ್ ಮರಗಳ ರಕ್ಷಣೆಗೆ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಹೋರಾಟ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮುಧೋಳ್‌ ನಗರದಲ್ಲಿ ಹಸಿರು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಪರಿಸರ ರಕ್ಷಣಾ ಹೋರಾಟ, ಬನ್ನಿ ಕೈಜೋಡಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಗಿಡ ಮರ ಉಳಿದರೆ ಅಂತರ್ಜಲ ಉಳಿಯುವುದು, ಮರಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ, ಮುಧೋಳ ತಾಲೂಕು ನಿವಾಸಿಗಳಾಗಿದ್ದು, ನಾವು ಪಟ್ಟಣದಲ್ಲಿರುವ ಮುಖ್ಯ ಅಂಚೆ ಕಚೇರಿ ಆವರಣದಲ್ಲಿ ಹಾಗೂ ಮರಾಠ ಶಾಲೆಯ ಆವರಣದಲ್ಲಿರುವ ಮರಗಳನ್ನು ಕಟಾವು ಮಾಡುತ್ತಿರುವ ಬಗ್ಗೆ ಮಾಹಿತಿ ಇದ್ದು, ದಯವಿಟ್ಟು ಈ ಮರಗಳನ್ನು ಕಡಿದು ನಾಶಮಾಡದಂತೆ ನಿಗಾವಹಿಸಿ ಉಳಿಸಿ ಕೊಡಬೇಕು” ಎಂದು ಸಂಘಟನೆಗಳಿಂದ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಹಾಗೂ ಪ್ರಸ್ತುತ ದಿನಗಳಲ್ಲಿ ನಮ್ಮ ಸುತ್ತಮುತ್ತಲೂ ಇರುವ ಮರಗಿಡಗಳನ್ನು ಕಡಿದು ಪರಿಸರ ನಾಶ ಮಾಡುತ್ತಿರುವುದು ಶೋಚನಿಯವಾಗಿದೆ. ಪ್ರಸ್ತುತ ತಾವುಗಳು ಈಗ ಕಡಿಯಲು ಹೊರಟಿರುವ ಮರಗಳಿಂದ ಸಾರ್ವಜನಿಕವಾಗಿ ಸಾಕಷ್ಟು ಹಾನಿಯಾಗುತ್ತದೆ. ಅಲ್ಲದೆ ಈ ಮರಗಳಿಗೆ ನೂರಾರು ವರ್ಷಗಳ ಇತಿಹಾಸವಿದೆ. ಈ ಮರಗಳನ್ನು ನಮ್ಮ ಮುಧೋಳದ ಘೋರ್ಪಡೆ ಮಹಾರಾಜರು ಮುಂದಿನ ಪೀಳಿಗಾಗಿ ನಟ್ಟಿರುವ ಮರಗಳಾಗಿದ್ದು, ಈ ಮರಗಳು ಸಾವಿರಾರು ಪಕ್ಷಗಳಿಗೆ ಆಶ್ರಯ ತಾಣವಾಗಿವೆ” ಎಂದರು.

“ಉತ್ತಮ ಗಾಳಿ, ನೆರಳು, ತಂಪಾದ ವಾತಾವರಣ ನೀಡುತ್ತೀರುವ ಇಂತಹ ಮರಗಳನ್ನು ಕಡಿಯುವುದರಿಂದ ಸಾರ್ವಜನಿಕರಿಗೆ ತುಂಬಲಾರದ ನಷ್ಟವಾಗುತ್ತದೆ. ಹಾಗಾಗಿ ದಯವಿಟ್ಟು ನಮ್ಮ ಮರಗಳನ್ನು ಕಡಿಯದೆ ಹಾಗೇ ಉಳಿಸಿ. ನಮ್ಮ ಪರಿಸರ ಸಂಕ್ಷಣೆ ಮಾಡಲು ತಾವುಗಳು ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಹಿಂದು ರಾಷ್ಟ್ರವಾಗಿಸುವುದನ್ನು ತಡೆಯದಿದ್ದರೆ ಭಾರತ ನಾಶ: ಚಿಂತಕ ರಾಮಚಂದ್ರ ಗುಹಾ 

ಈ ಸಂದರ್ಭದಲ್ಲಿ ರೈತ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ, ದಲಿತ ಸಂಘರ್ಷ ಸಮಿತಿ(ಭೀಮವಾದ) ಉಪಾಧ್ಯಕ್ಷ, ಹಸಿರು ಗ್ರಾಮೀಣ ಸಂಸ್ಥೆ ಪ್ರಕಾಶ್ ಚಕ್ರವರ್ತಿ, ಭೀಮ್ ಆರ್ಮಿ ಸಂಘಟನೆಯ ಮುಖಂಡ, ಭೀಮರಾವ್ ಕಾಳವ್ವಗೋಳ ಭಾರತೀಯ ಬೌದ್ಧ ಮಹಾಸಭಾ ಸದಸ್ಯ ಸಂಜು ಕರನ್ನವರ, ಸಂಜೀವಿನಿ ಸಮಗ್ರ ಶಿಕ್ಷಣ ಗ್ರಾಮೀಣ ಸಂಸ್ಥೆ ಕಾರ್ಯದರ್ಶಿ ಶ್ರೀಕಾಂತ ಪೂಜಾರ, ಅಂಜುಮನ್ ಆಡಳಿತ ಮಂಡಳಿ ಅಧ್ಯಕ್ಷ ಆರಿಫ್ ಮೂವಿನ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...