ಬಾಗಲಕೋಟೆ | ಸಿಲ್ಕಾ ಸ್ಯಾಂಡ್ ಧೂಳು; ಅನಾರೋಗ್ಯದ ಆತಂಕದಲ್ಲಿ ಗ್ರಾಮಸ್ಥರು

Date:

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕೋಟೆಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುರುಡಿ ಗ್ರಾಮದ ಗುಡ್ಡ ಪ್ರದೇಶದಲ್ಲಿ ನಡೆದಿರುವ ಕಲ್ಲು ಗಣಿಗಾರಿಕೆಯ ಭಾಗವಾದ ಸಿಲ್ಕಾ ಸ್ಯಾಂಡ್ ಫ್ಯಾಕ್ಟರಿಯಿಂದ ಹೊರಸೂಸುವ ಧೂಳು ಸಮೀಪದ ಗ್ರಾಮಗಳಿಗೆ ತಲೆ ನೋವಾಗಿ ಪರಿಣಮಿಸಿದೆ.

ಫ್ಯಾಕ್ಟರಿಯ ಹತ್ತಿರದ ಮುರುಡಿ, ಖಾನಾಪೂರ ಮುಂತಾದ ಗ್ರಾಮಗಳಲ್ಲಿ ಧೂಳು ಆವರಿಸುವುದರಿಂದ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಫ್ಯಾಕ್ಟರಿ ಗುಡ್ಡದ ಮೇಲೆ 2019ರಲ್ಲಿ ಸ್ಥಾಪನೆಯಾಗಿದೆ. ಎತ್ತರವಾದ ಸ್ಥಳದಲ್ಲಿ ಇರುವುದರಿಂದ ಗಾಳಿಯ ಜೊತೆ ಧೂಳು ಹರಡುತ್ತಿದೆ.

ಕಲ್ಲನ್ನು ಗುಡ್ಡದಿಂದ ಹೊರತೆಗೆದು ಅದನ್ನು ಮಶಿನ್ ಮೂಲಕ ಪುಡಿ ಮಾಡುವುದರಿಂದ ಧೂಳು ಹರಡುತ್ತಿದೆ. ಇಲ್ಲಿ ತಯಾರಿಸುವ ಕಲ್ಲಿನ ಪುಡಿಯನ್ನು ಧಾರವಾಡ, ಸಾಂಗ್ಲಿ, ಬೆಳಗಾವಿ, ಚಿಕ್ಕೋಡಿ, ಕೊಲ್ಲಾಪುರ, ಸೊಲ್ಲಾಪುರ ಮುಂತಾದ ನಗರಗಳಿಗೆ ಗ್ಲಾಸ್ ಪ್ಯಾಕ್ಟರಿಗಳಿಗೆ ಮತ್ತು ಅಚ್ಚು ತಯಾರಿಕಾ ಕಂಪನಿಗಳಿಗೆ ಸರಬರಾಜು ಮಾಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುರುಡಿ ಮತ್ತು ಖಾನಾಪೂರ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಇತ್ತೀಚಿಗೆ ಗುಳೇದಗುಡ್ಡ ತಾಲೂಕು ತಹಸೀಲ್ದಾರ್‌ ಮಂಗಳಾ ಎಂ. ಅವರಿಗೆ, ಖಾಸಗಿಯಾಗಿರುವ ಎಂ.ಸ್ಯಾಂಡ್ ಕ್ರಶರ್‌ನಿಂದ ಹಾರುತ್ತಿರುವ ಧೂಳಿನ ಕಣಗಳಿಂದ ಅಕ್ಕ ಪಕ್ಕದ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಅಲ್ಲದೇ ಕುಡಿಯುವ ನೀರು ಮಲೀನವಾಗುತ್ತಿದೆ. ಬೆಳೆ ಹಾಳಾಗುತ್ತಿವೆ ಎಂದು ದೂರು ನೀಡಿದ್ದಾರೆ.

ಆದರೆ, ಫ್ಯಾಕ್ಟರಿ ಈ ಧೂಳಿಗಾಗಿ ಯಾವುದೇ ಮುಂಜಾಗ್ರತಾ ಕ್ರಮ ವಹಿಸದೆ ಇರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಯಂತ್ರದ ಮೂಲಕ ಕಲ್ಲು ತೆಗೆಯುವಾಗ ಮತ್ತು ಆ ಕಲ್ಲನ್ನು ಪುಡಿ ಮಾಡುವಾಗ ಅದರಿಂದ ಹಾರುವ ಧೂಳು ಗಾಳಿಯ ಮೂಲಕ ಹರಡುತ್ತದೆ. ಅದಕ್ಕೆ ಮಾಲೀಕರು ಮುಂಜಾಗ್ರತಾ ಕ್ರಮ ವಹಿಸಿಲ್ಲ. ಕೂಡಲೇ ಅದನ್ನು ಬಂದ್‌ ಮಾಡಬೇಕು ಎಂದು ಜನರು ಒತ್ತಾಯಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...