ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಇಡೀ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ವಸಂತ್ ಚೌಹಾಣ್ ಎಂಬುವವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಬೆಂಕಿಗಾಹುತಿಯಾಗಿದೆ. ಟಕ್ಕಳಕಿಯಿಂದ ಸಾವಳಗಿ ಮಾರ್ಗವಾಗಿ ಬರುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ. ಬಿಸಿಲಿನ ರವಕ್ಕೆ ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾಗಿದೆ.
ಟ್ರ್ಯಾಕ್ಟರ್, ಟ್ರೇಲರ್, ಹುಲ್ಲು ಸೇರಿ ಸುಮಾರು 8-9 ಲಕ್ಷ ರೂಗಳ ನಷ್ಟವಾಗಿರಬಹುದು ಎಂದು ಅಂದಾಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಇದನ್ನೂ ಓದಿ: ಬಾಗಲಕೋಟೆ | ಭೀಮಾ ಕೋರೆಗಾಂವ್ 208ನೇ ವಿಜಯೋತ್ಸವ





