ಬಾಗಲಕೋಟೆ | ವೇತನ ಪಾವತಿಸದ ಟೋಲ್ ನಾಕಾ; ಗುತ್ತಿಗೆದಾರ ಆತ್ಮಹತ್ಯೆ

Date:

ಟೋಲ್ ಬಳಿ ಕೆಲಸ ಮಾಡುತ್ತಿದ್ದ ನೌಕರರಿಗೆ ಸಂಬಳ ನೀಡಲು ಟೋಲ್‌ ನಾಕಾದವರು ಪೇಮೆಂಟ್ ಕೊಟ್ಟಿಲ್ಲವೆಂಬ ಕಾರಣದಿಂದ ಲೇಬರ್ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆಯ ಹೊಸೂರು ಬಳಿ ಇರುವ ಬೆಂಗಳೂರು-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟೋಲ್‌ ಬಳಿ ಗುತ್ತಿಗೆದಾರ ವಾರೆಪ್ಪ ಪೂಜಾರ ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಆರು ತಿಂಗಳಿಂದ ಅವರಿಗೆ ಪೇಮೆಂಟ್ ನೀಡಿರಲಿಲ್ಲ. ಅಲ್ಲದೆ, ಅವರನ್ನು ಗುತ್ತಿಗೆ ಕೆಲಸದಿಂದ ಏಕಾಏಕಿ ತೆಗೆದುಹಾಕಲಾಗಿತ್ತು. ಮನನೊಂದು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆದ್ದಾರಿಯಲ್ಲಿ ನಿಡಗುಂದಿಯಿಂದ ಹುನಗುಂದವರೆಗೆ ಗಾರ್ಡನಿಂಗ್ ನಿರ್ವಹಣೆ, ಸ್ವಚ್ಛತಾ ಕೆಲಸ ಮತ್ತು ಗಿಡಗಳಿಗೆ ನೀರು ಹಾಕುವ ಕೆಲಸವನ್ನು ಕೂಲಿ ಕಾರ್ಮಿಕರ ಮೂಲಕ ವಾರೆಪ್ಪ ಪೂಜಾರ ಮಾಡಿಸುತ್ತಿದ್ದರು. ಆದರೆ, ಟೋಲ್‌ನವರು ಕಳೆದ ಆರು ತಿಂಗಳಿಂದ ಅವರಿಗೆ ಪೇಮೆಂಟ್ ನೀಡಿರಲಿಲ್ಲ ಎಂದು ತಿಳಿದುಬಂದಿದೆ.

ಪೂಜಾರ ಅವರ ಆತ್ಮಹತ್ಯೆಯಿಂದ ಆಕ್ರೋಶಗೊಂಡಿರುವ ಸ್ಥಳೀಯರು ಟೋಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಹೆದ್ದಾರಿಯನ್ನು ಬಂದ್ ಮಾಡಿದ್ದಾರೆ ಎಂದು ವರದಿಯಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...