ಕರ್ನಾಟಕ ರಕ್ಷಣಾ ವೇದಿಕೆ(ಹೆಚ್ ಶಿವರಾಮೇಗೌಡ ಬಣ) ಬಾಗಲಕೋಟೆ ಜಿಲ್ಲಾ ಘಟಕದಿಂದ ಪ್ರತಿ ವರ್ಷ ವಿಶ್ವಮಾನವ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಈ ಕುರಿತು ಕರವೇ ರಾಜ್ಯ ವಕ್ತಾರ ಬಿ ಎಂ ಪಾಟೀಲ್ ಹಾಗೂ ಕರವೇ ಜಿಲ್ಲಾ ಅಧ್ಯಕ್ಷ ಬಸವರಾಜ ಧರ್ಮಂತಿ ಜಂಟಿಯಾಗಿ ಪತ್ರಿಕಾ ಪ್ರಕಟಣೆ ಹೊಡಿಸಿದ್ದು, “ಬಾಗಲಕೋಟೆ ನಗರದ ದಡ್ಡೇನವರ ಆಸ್ಪತ್ರೆ ಹಿಂದೆ ಇರುವ ಪ್ರಾರ್ಥನಾ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಡಿಸೆಂಬರ್ 29ರ ಸೋಮವಾರ ಬೆಳಿಗ್ಗೆ 9-30ಕ್ಕೆ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಾರ್ಥನಾ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಎಸ್ ಬಿ ಗೌಡರ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ವಕ್ತಾರ ಬಿ ಎಂ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದರು.
ಈ ಸುದ್ದಿ ಓದಿದ್ದೀರಾ? ಮುದ್ದೇಬಿಹಾಳ | ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಡಿ ಬಿ ಮುದೂರ ನುಡಿ ನಮನ
”ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಸಹಾಯಕ ಪ್ರಾಧ್ಯಾಪಕ ಜಿ ಜಿ ಹಿರೇಮಠ ಉಪನ್ಯಾಸ ನೀಡಲಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಪ್ರಾಸ್ತಾವಿಕ ನುಡಿ ಮತ್ತು ಕಾರ್ಯಕ್ರಮದ ನಿರೂಪಣೆಯನ್ನು ನಡೆಸಿ ಕೊಡಲಿದ್ದಾರೆ. ಕಾರ್ಯಕ್ರಮಕ್ಕೆ ವಿಶೇಷ ಸನ್ಮಾನಿತರಾಗಿ ನಿವೃತ್ತ ಸೈನಿಕರು ಮಲ್ಲಿಕಾರ್ಜುನ ಪತ್ತಾರ, ರೈತ ಮುಖಂಡರು ಹಾಗೂ ಮುತ್ತು ವಡ್ಡರ ರಾಜ್ಯೋತ್ಸವ ಪುರಸ್ಕೃತ ಸಿದ್ದಪ್ಪ ಬಳಗಾನೂರ ಆಗಮಿಸಲಿದ್ದಾರೆ. ಜಿಲ್ಲಾ ಕರವೇ ಮುಖಂಡರು ಸ್ವಾಗತ ಮತ್ತು ವಂದನಾರ್ಪಣೆ ನೆರವೇರಿಸಲಿದ್ದಾರೆ” ಎಂದು ಹೇಳಿದರು.





