ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

Date:

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರವನ್ನು ತಂದಿದ್ದೀರಿ. ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ, ಈ ಜಿಲ್ಲೆಯ ಋಣವನ್ನು ತೀರಿಸಬೇಕೆಂದು ಸಂಕಲ್ಪ ಮಾಡಿ ಶಾಶ್ವತ ಪರಿಹಾರ ಕೊಡುವುದಕ್ಕೆ ಹಾಗೂ ಭಾಗ್ಯದ ಬಾಗಿಲು ತೆರೆಯುವುದಕ್ಕೆ ಇಲ್ಲಿ ಸೇರಿದ್ದೇವೆ. ಅಲ್ಲದೆ ಇದು ಸಮಾಜದ ಋಣ ತೀರಿಸುವ ಕಾರ್ಯಕ್ರಮವಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿದರು.

ಬಾಗಲಕೋಟೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಬೆಂಗಳೂರಿನ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ-3ರ ಭೂಸ್ವಾಧೀನಗೊಳ್ಳುವ ಜಮೀನುಗಳಿಗೆ ಒಪ್ಪಂದದ ದರದಂತೆ ಪರಿಹಾರ ವಿತರಣೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಯುಕೆಪಿ -3ನೇ ಹಂತದ ಯೋಜನೆಗೆ 15 ವರ್ಷದ ಹಿಂದೆ ಕೋರ್ಟಿನ ಆದೇಶ ಬಂತು. ಕೇಂದ್ರ ಸರ್ಕಾರ ಅದನ್ನು ಕಾರ್ಯರೂಪಕ್ಕೆ ತರಲಿಲ್ಲ. ಭೂಸಂತ್ರಸ್ತ ರೈತರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಬಾಗಲಕೋಟೆ, ವಿಜಯಪುರ ಹಾಗೂ ಕಲಬುರಗಿ ಭಾಗದವರು ಬೆಳಗಾವಿ ಅಧಿವೇಶನದಲ್ಲಿ ನನ್ನ ಮೇಲೆ, ಮುಖ್ಯಮಂತ್ರಿಗಳು, ಎಂ.ಬಿ ಪಾಟೀಲರು ಹಾಗೂ ಆರ್‌.ಬಿ ತಿಮ್ಮಾಪುರ ಅವರ ಮೇಲೆ ಒತ್ತಡ ಹಾಕಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೀಗ 1,33,000 ಎಕರೆಗಳಿಗೆ ಇಂದು ಹಣವನ್ನು ಕೊಡಲು ತೀರ್ಮಾನ ಮಾಡಿ ಚೆಕ್‌ ಕೊಡಲು ಹೊರಟಿದ್ದೇವೆ. ಈ ತೀರ್ಮಾನ ನೋಡಿ ಕೃಷ್ಣ ಅಣೆಕಟ್ಟನ್ನು 524 ಅಡಿಗೆ ಏರಿಸಬಾರದು. ರೈತರಿಗೆ ಪರಿಹಾರ ನೀಡಬಾರದು ಎಂದು ಕೇಂದ್ರ ಸರ್ಕಾರದ ಮೇಲೆ ಆಂಧ್ರ ಸರ್ಕಾರ ಒತ್ತಡ ಹಾಕುತ್ತಿದೆ” ಎಂದರು.

“ಮಹಾರಾಷ್ಟ್ರದವರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೂ ನಮ್ಮ ನೀರು… ನಮ್ಮ ಭೂಮಿ.. ನಮ್ಮ ಹಕ್ಕು ಎಂದು ನುಡಿದಂತೆ ನಡೆದಿದ್ದೇವೆ. 3 ಸಾವಿರ ಕೋಟಿ ರೂಪಾಯಿ ಈ ವರ್ಷವೇ ವಿತರಿಸಲು ನಿರ್ಧರಿಸಿದ್ದೇವೆ” ಎಂದು ಹೇಳಿದರು.

“ನಾವು ಮಾಡುವ ಪ್ರತಿ ಕೆಲಸದಲ್ಲೂ ಆದರ್ಶವಿರಬೇಕು. ಇಂದು ಮೆಡಿಕಲ್‌ ಕಾಲೇಜು ಬಡವರಿಗೋಸ್ಕರ ಉಚಿತವಾಗಿ ಕೊಡುತ್ತಿದ್ದೇವೆ. ಖಾಸಗಿ ಆಸ್ಪತ್ರೆಯವರು ಹಣ ವಸೂಲಿ ಮಾಡುತ್ತಿದ್ದಾರೆ, ಅದನ್ನು ತಪ್ಪಿಸುವ ಸಲುವಾಗಿ ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್‌ ಕಾಲೇಜು ನಿರ್ಮಿಸಲು ಕಾಂಗ್ರೆಸ್‌ ಸರ್ಕಾರ ಸಂಕಲ್ಪ ಮಾಡಿ, ಇಡೀ ದೇಶಕ್ಕೆ ಮಾದರಿಯಾದ ಕೆಲಸ ಮಾಡಿದ್ದೇವೆ. ಮೇಟಿಯವರ ಕನಸು, ಈ ಜಿಲ್ಲೆಯ ಶಾಸಕರ ಪರಿಶ್ರಮ ಹಾಗೂ ಹೋರಾಟದಿಂದ ಈ ಅಭಿವೃದ್ಧಿ ಯೋಜನೆಗಳು ಸಾಕ್ಷಿಗುಡ್ಡೆಗಳಾಗಿ ಉಳಿಯಲಿವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ನೀರಾವರಿಗಾಗಿ ಭೂಮಿ ಕಳೆದುಕೊಂಡ ರೈತರ ಕಣ್ಣೀರು ಒರೆಸಲು ಸರ್ಕಾರ ಮುಂದಾಗಿದೆ: ಸಚಿವ ಎಂ ಬಿ ಪಾಟೀಲ

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಸಚಿವರಾದ ಹೆಚ್‌.ಕೆ ಪಾಟೀಲ್‌, ಶರಣಪ್ರಕಾಶ್‌ ಪಾಟೀಲ್‌, ಉಸ್ತುವಾರಿ ಸಚಿವ ಆರ್‌.ಬಿ ತಿಮ್ಮಾಪುರ, ಎಂ ಬಿ. ಪಾಟೀಲ್, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ್; ಶಾಸಕರು ಜೆ.ಟಿ. ಪಾಟೀಲ್, ವಿಜಯಾನಂದ ಕಾಶಪ್ಪನವರ, ಭೀಮಸೇನ ಚಿಮ್ಮನಕಟ್ಟಿ, ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್; ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಸೇರಿದಂತೆ ಹಲವು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...