ಸರ್ಕಾರ ಬಾದಾಮಿ ಪ್ರವಾಸೋದ್ಯಮವನ್ನು ಬಲಪಡಿಸಬೇಕು: ಪ್ರೊ. ಜಿ ಬಿ ಶೀಲವಂತರ

Date:

ಐತಿಹಾಸಿಕ ಚಾಲುಕ್ಯರ ನಾಡು ಬಾದಾಮಿ, ಐಹೊಳೆ ಪಟ್ಟದಕಲ್ಲು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿವೆ. ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ಜಾರಿ ಮಾಡಿ ಪ್ರವಾಸೋದ್ಯಮಕ್ಕೆ ಬಲ ಸಿಗುವಂತಾಗಿಸಬೇಕು ಎಂದು ಸಮ್ಮೇಳನದ ಅಧ್ಯಕ್ಷ ಪ್ರೊ. ಜಿ ಬಿ ಶೀಲವಂತರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಗರದ ಎಸ್‌ವಿಪಿ ಸಂಸ್ಥೆಯ ಬಸವಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ 10ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಚಾಲುಕ್ಯರ ಇತಿಹಾಸ ಸಾಧನೆ, ಪ್ರವಾಸಿಗರಿಗೆ ಮಾಹಿತಿ ಸಿಗುವ ಉದ್ದೇಶದಿಂದ ಬೇರೆ ಬೇರೆ ಭಾಷೆಯಲ್ಲಿ ಫಲಕ ಅಳವಡಿಸಬೇಕು. ಪ್ರವಾಸಿಗರಿಗೆ ಶಿಲೆಗಳನ್ನು ಕೆತ್ತುವ ಕಲಾವಿದರಿಂದ ಪ್ರಾತ್ಯಕ್ಷಿಕೆ ಆಯೋಜನೆ ಮಾಡಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ಆಹಾರ ಪದ್ಧತಿ ಪ್ರವಾಸಿಗರಿಗೆ ಪರಿಚಯವಾಗಬೇಕು. ಇಲಕಲ್ ಸೀರೆ, ಗುಳೇದಗುಡ್ಡ ಖಣ ವಸ್ತ್ರ ಬಂಡಾರ ನಿರ್ಮಾಣ ಮಾಡಬೇಕಾಗಿದೆ. ಪ್ರವಾಸಿಗರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ರೊಟ್ಟಿ ಉದ್ಯಮವನ್ನು ಸಹಕಾರಿ ಸಂಘಗಳ ಮೂಲಕ ಬೆಳವಣಿಗೆಗೆ ಸಹಕರಿಸಬೇಕು. ಕನ್ನಡ ನಾಡಿನ ನೆಲ ಜಲ, ಭಾಷೆಗೆ ಒತ್ತು ಕೊಡಬೇಕು. ಆಂಗ್ಲ ವ್ಯಾಮೋಹದಿಂದ ನಮ್ಮ ಕನ್ನಡ ಭಾಷೆಯನ್ನು ಮರೆಯಬಾರದು. ಮಾತೃಭಾಷೆ ಕಲಿತರೆ ಉಳಿದ ಭಾಷೆ ಕಲಿಯಲು ಸರಳ. ಇದನ್ನು ಪಾಲಕರು ಅರ್ಥ ಮಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರೊ.ಜಿ ಬಿ ಶೀಲವಂತರ ದಂಪತಿಯನ್ನು ಸಮ್ಮೇಳನದ ವತಿಯಿಂದ ಸನ್ಮಾನಿಸಲಾಯಿತು.

ವೇದಿಕೆಯ ಮೇಲೆ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷಶಿವಾನಂದ ಶೆಲ್ಲಿಕೇರಿ, ತಾಲೂಕಾ ಕಸಾಪ ಅಧ್ಯಕ್ಷ ಬಿ ಎಫ್ ಹೊರಕೇರಿ, ಪದಾಧಿಕಾರಿಗಳಾದ ಮಹಾಂತೇಶ ಈಳಗೇರ, ಆರ್ ಎಂ ಸಾರವಾಡ, ವಿ ಎಸ್ ಶೆಟ್ಟರ, ಬಿ ಎಸ್ ಅಬ್ಬಿಗೇರಿ, ರವಿ ಕಂಗಳ, ಎಸ್. ಎಚ್ ಪರಸನ್ನವರ, ಆರ್ ಎಂ ದಾದಿ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.

ಈ ಸುದ್ದಿ ಓದಿದ್ದೀರಾ? ತುರುವೇಕೆರೆ | ಸಹಜ ಕೃಷಿಯ ಅಚ್ಚರಿ ನಡಿಗೆ ವಿಷಮುಕ್ತ ಆಹಾರದ ಕಡೆಗೆ

ಬಸಮ್ಮಾ ನರಸಾಪೂರ, ಡಿ ಬಿ ಹಡಗಲಿ ನಿರೂಪಿಸಿದರು. ನಂತರ ನಡೆದ ಗೋಷ್ಠಿಯಲ್ಲಿ ಬಾದಾಮಿ ತಾಲೂಕಿನ ಸಾಹಿತ್ಯಾವಲೋಕನ ಕುರಿತು ಸೃಜನಶೀಲ ಸಾಹಿತ್ಯ ಕುರಿತು ಪ್ರೊ.ಚಂದ್ರಶೇಖರ ಹೆಗಡೆ ಮತ್ತು ಜನಪದ ಸಾಹಿತ್ಯ ಕುರಿತು ನಾಗರಾಜ ಹೊಟ್ಟಿ, ಮಹಿಳಾ ಸಾಹಿತ್ಯ ಕುರಿತು ಶಾರದಾ ಮೇಟಿ ಉಪನ್ಯಾಸ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...