ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

Date:

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು ನಿಧಿಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗಂಭೀರ ಅವ್ಯವಹಾರ ನಡೆದಿರುವ ಬಗ್ಗೆ ಆರೋಪ ಕೇಳಿಬಂದಿದೆ. 2023-24, 2024-25 ಹಾಗೂ 2025-26ನೇ ಆರ್ಥಿಕ ವರ್ಷಗಳಲ್ಲಿ ನಡೆದ ಕಾಮಗಾರಿಗಳ ಹೆಸರಿನಲ್ಲಿ ನಕಲಿ GPS ಫೋಟೋಗಳನ್ನು ಅಪ್ಲೋಡ್ ಮಾಡಿ ಸರ್ಕಾರಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದೇವರಾಜ ವನಗೇರಿ ಪಂಚಾಯತ್ ರಾಜ್ಯ ಆಯುಕ್ತರಿಗೆ ದೂರು ನೀಡಿದ್ದಾರೆ.

ಸರ್ಕಾರದ ಅನುದಾನ ಬಿಡುಗಡೆಗಾಗಿ ಸಲ್ಲಿಸಲಾದ GPS ಫೋಟೋಗಳನ್ನು ಪರಿಶೀಲಿಸಿದಾಗ, ಅವು ನಿಜವಾದ ಕಾಮಗಾರಿಗಳ ಚಿತ್ರಗಳಲ್ಲದೇ ಖಾಲಿ ಬಿಳಿ ಹಾಳೆಗಳ ಫೋಟೋಗಳನ್ನು GPS ಫೋಟೋ ಅಪ್ಲೋಡ್ ಮಾಡಿರುವುದು ಬೆಳಕಿಗೆ ಬಂದಿದೆ. ಇದು ಸರ್ಕಾರವನ್ನು ತಪ್ಪು ದಾರಿಗೆಳೆದು ಅನುದಾನ ಪಡೆಯಲು ಉದ್ದೇಶಪೂರ್ವಕವಾಗಿ ಮಾಡಿರುವ ಗಂಭೀರ ಅಕ್ರಮವಾಗಿದೆ.
ಸರ್ಕಾರದ ಹಣವನ್ನು ಅಭಿವೃದ್ಧಿ ಕೆಲಸಗಳಿಗೆ ಬಳಸಬೇಕಾದಲ್ಲಿ, ಕೆಲ ಅಧಿಕಾರಿಗಳು ಕೇವಲ ಕಾಗದದ ಮೇಲೆಯೇ ಕೆಲಸಗಳನ್ನು ತೋರಿಸಿ ಹಣ ದುರ್ಬಳಕೆ ಮಾಡುತ್ತಿರುವುದು ಗ್ರಾಮೀಣಾಭಿವೃದ್ಧಿ ವ್ಯವಸ್ಥೆಗೆ ಕಳಂಕ ತರುವಂತಹ ಸಂಗತಿಯಾಗಿದೆ.

ಈ ಸಂಬಂಧ ಈಗಾಗಲೇ ಪಂಚಾಯತ್ ರಾಜ್ ಇಲಾಖೆಯ ಆಯುಕ್ತರಿಗೆ ದೂರು ಸಲ್ಲಿಸಲಾಗಿದ್ದು, ತಕ್ಷಣವೇ ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ನಕಲಿ GPS ಫೋಟೋಗಳನ್ನು ಸಲ್ಲಿಸಿ ಅನುದಾನ ಪಡೆದಿರುವ ಸಂಬಂಧಿತ PDO ಹಾಗೂ ಇತರ ಜವಾಬ್ದಾರಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಸರ್ಕಾರದ ಹಣ ಜನರ ಅಭಿವೃದ್ಧಿಗೆ ಬಳಕೆಯಾಗಬೇಕೇ ಹೊರತು, ನಕಲಿ ದಾಖಲೆಗಳ ಮೂಲಕ ದುರ್ಬಳಕೆ ಮಾಡಲು ಅವಕಾಶ ನೀಡಬಾರದು ಎಂದು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...