ಇಳಕಲ್ | ಸಂತ ಸೇವಾಲಾಲರು ಶ್ರೇಷ್ಠ ಸಮಾಜ ಸುಧಾರಕರಾಗಿದ್ದರು: ವಿಜಯಾನಂದ ಕಾಶಪ್ಪನವರ

Date:

ಸಂತ ಸೇವಾಲಾಲರು ಧಾರ್ಮಿಕ ನಾಯಕರು ಮಾತ್ರವಲ್ಲ ಸಮಾಜ ಸುಧಾರಕರೂ ಆಗಿದ್ದರು. ಅಂಧಶ್ರದ್ದೆ, ಮೂಢನಂಬಿಕೆ ಹೋಗಲಾಡಿಸಿ, ನೈತಿಕ ಮಾರ್ಗದಲ್ಲಿ ಸತ್ಪ್ರಜೆಗಳಾಗಿ ಬದುಕಲು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ಕಂಠಿ ವೃತ್ತದಲ್ಲಿ ತಾಲ್ಲೂಕಾಡಳಿತ, ತಾಲ್ಲೂಕು ಬಂಜಾರ ಸಮಾಜ, ಸೇವಾಲಾಲ ಜಯಂತ್ಯುತ್ಸವ ಸಮಿತಿ ಆಯೋಜಿಸಿದ ಸಂತ ಸೇವಾಲಾಲರ 287ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

“ಪರಿಶ್ರಮ ಹಾಗೂ ಸ್ವಾಭಿಮಾನದಿಂದ ಜೀವನ ಕಟ್ಟಿಕೊಂಡಿರುವ ಸಮುದಾಯ ಬಂಜಾರ. ಈ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಬಂಜಾರ ಸಮಾಜದ ಬೇಡಿಕೆಗಳಿಗೆ ನಮ್ಮ ಸರ್ಕಾರ ಸ್ಪಂದಿಸಿದ್ದು ಬಂಜಾರ ಸಮುದಾಯ ಭವನ ನಿರ್ಮಾಣಕ್ಕೂ ಅನುದಾನ ನೀಡುವೆ” ಎಂದು ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಬಕವಿ ಬನಹಟ್ಟಿ | ಚಿನ್ನ ಕಳುವು ಪ್ರಕರಣ ಭೇದಿಸಿದ ಪೊಲೀಸರು; ₹2.50 ಲಕ್ಷ ಮೌಲ್ಯದ ಆಭರಣ ವಶಕ್ಕೆ

ಸಮಾರಂಭಕ್ಕೂ ಮುನ್ನ ನಡೆದ ಬೈಕ್ ರ್ಯಾಲಿಯಲ್ಲಿ ಅವರು ಪಾಲ್ಗೊಂಡರು. ಸಂತ ಸೇವಾಲಾಲ ದೇವಸ್ಥಾನ, ವೃತ್ತ, ಸಮುದಾಯ ಭವನದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಸಮಾರಂಭದಲ್ಲಿ ಕುಮಾರ ಮಹಾರಾಜ್ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹನುಮಂತಪ್ಪ ರಾಠೋಡ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪರಶುರಾಮ ಪಮ್ಮಾರ, ದೀಪಕ ರಾಠೋಡ ಭಾಗವಹಿಸಿದ್ದರು.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...