ಜಮಖಂಡಿ | ದಲಿತ ಯುವಕನ ಹತ್ಯೆ ಪ್ರಕರಣ: ಪೊಲೀಸರ ನಿರ್ಲಕ್ಷ್ಯದ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

Date:

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ದಲಿತ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯದ ಬಗ್ಗೆ ತನಿಖೆ ಕೈಗೊಂಡು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ(ಡಿ ಜೆ ಸಾಗರ ಬಣ) ಬಾಗಲಕೋಟೆ ಜಿಲ್ಲಾ ಸಮಿತಿಯಿಂದ ಜಮಖಂಡಿ ವಲಯದ ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

“ಸಾವಳಗಿ ಗ್ರಾಮದಲ್ಲಿ ಮಾರ್ಚ್‌ 11ರಂದು ದಲಿತ ಯುವಕ(ಸುದೀಪ ಬಸಪ್ಪ ಪಾಂಗೆ)ನ ಹತ್ಯೆಯಾಗಿರುವುದು ಖಂಡನೀಯ. ಅಂದು ಗ್ರಾಮದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಅದರಂತೆ ಗ್ರಾಮದ ಸಾರ್ವಜನಿಕರು ಮತ್ತು ವಿದ್ಯಾರ್ಥಿನಿಯರ ಬೋಧಕರು ಭಾಗವಹಿಸುವುದು ಸಹಜ. ಆದರೆ ಈ ಕಾರ್ಯಕ್ರಮಕ್ಕೆ ಬಂದೋಬಸ್ತ್ ಅಥವಾ ಪರವಾನಿಗೆ ಪಡೆದುಕೊಂಡಿ‌ದ್ದರ ಬಗ್ಗೆ ತನಿಖೆ ಮಾಡಬೇಕಿತ್ತು. ಆದರೆ ಯಾವುದೇ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿರಲಿಲ್ಲ” ಎಂದು ದೂರಿದರು.

“ಸಾರ್ವಜನಿಕರು ಸಾಕಷ್ಟು ಜನರಿದ್ದರೂ ಕೂಡ ಸಾಯುವ ಮಟ್ಟಕ್ಕೆ ಹಲ್ಲೆ ಮಾಡಿರುವುದನ್ನು ನೋಡಿದರೆ, ಸ್ಥಳೀಯ ಪೊಲೀಸರ ಕರ್ತವ್ಯದ ಬಗ್ಗೆ ಅನುಮಾನ ಬರುವುದು ಸಹಜ. ಸ್ಥಳೀಯವಾಗಿಯೇ ಠಾಣೆ ಇದ್ದು, ಸುಮಾರು 30 ಮಂದಿಗೂ ಅಧಿಕ ಸಿಬ್ಬಂದಿಗಳಿದ್ದರೂ, ಕಾರ್ಯಕ್ರಮದ ಬಗ್ಗೆ ಮಾಹಿತಿ ತಿಳಿದುಕೊಂಡು ಬಂದೋಬಸ್ತ್ ಕಾರ್ಯ ನಿರ್ವಹಿಸಬಹುದಾಗಿತ್ತು. ಆದರೆ ಇಲ್ಲಿ ಸರ್ಕಾರಿ ಶಾಲೆಯ ಶಿಕ್ಷಕರು ಹಾಗೂ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ದಲಿತ ಯುವಕನ ಹತ್ಯೆಯಾಗಿದೆ”‌ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಿಸಿಟಿವಿ ವಿಡಿಯೊ ನೋಡಿದರೆ ಆರೋಪಿಗಳಿಗೆ ಯಾವುದೇ ರೀತಿಯ ಕಾನೂನಿನ ಭಯ ಇಲ್ಲದಿರುವುದು ಸಾಬೀತಾಗುತ್ತದೆ. ವಿಡಿಯೊದಲ್ಲಿ ಕಾಣುವಂತಹ ಮತ್ತು ಈ ಘಟನೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಾಗಿಯಾದಂತಹ ಎಲ್ಲರನ್ನೂ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಕರ್ತವ್ಯ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳ ಮೇಲೆಯೂ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪ್ರೀತಿ-ಸ್ನೇಹವೇ ನಿಜವಾದ ದೇವರು: ಸಾಹಿತಿ ಪ್ರೊ. ತುಕಾರಾಂ

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಪರಶುರಾಮ ಕಾಂಬಳೆ, ಜಮಖಂಡಿ ತಾಲೂಕು ಸಂಚಾಲಕರಾದ ದೀಪಕ ಕಂಕಣವಾಡಿ, ರಬಕವಿ ಬನಹಟ್ಟಿ, ತಾಲೂಕು ಸಂಚಾಲಕರು ಬಸವರಾಜ ದೊಡಮನಿ, ಸಾವಳಗಿ ವಲಯ ಸಂಚಾಲಕರು ಅಮಿತ್‌ ಸೂರಗೊಂಡ್, ಸದಾಶಿವ ಐನಾಪುರ, ಅಶೋಕ ಸಿಂಗೆ, ಶಾಮ್ ಹಿಪ್ಪರಗಿ, ಶಂಕರ ಹೊಸಮನಿ, ಶಹಜಾನಂದ ದೊಡ್ಡಮನಿ, ಸೋಮು ಶಿಂಗೆ, ವಿಠ್ಠಲ ಕಾಂಬ್ಳೆ, ವಿದ್ಯಾಸಾಗರ್ ಹೊಸಮನಿ, ಬಸವರಾಜ ಶ್ರೀನಾಥ, ಹಣಮಂತ ಶಿಂಗೆ ಇನ್ನೂ ಅನೇಕ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...

ಹುನಗುಂದ | ಮಹಿಳೆಯರ ಜೀವನದ ಗುಣಮಟ್ಟದ ಮೇಲೆ ವಲಸೆ ವ್ಯತಿರಿಕ್ತ ಪರಿಣಾಮ: ಡಾ. ಭುವನೇಶ್ವರಿ

ವಲಸೆ ಎಂಬುದು ಉತ್ತರ ಕರ್ನಾಟಕದ ಪ್ರಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಅದು ಮಹಿಳೆಯರ...