ತೇರದಾಳ | ರಾಯಲ್ ಬಾರ್‌ನಲ್ಲಿ ಬೆಂಕಿ ಅವಘಡ; ಇಬ್ಬರಿಗೆ ಗಾಯ

Date:

ತೇರದಾಳ ಪಟ್ಟಣದ ಕುಡಚಿ ರಸ್ತೆಯಲ್ಲಿರುವ ರಾಯಲ್ ಬಾರ್ ಹಾಗೂ ರೆಸ್ಟೋರೆಂಟ್‌ನಲ್ಲಿ ತಂಗಿದ್ದ ಇಬ್ಬರಿಗೆ ಬೆಂಕಿ ತಗುಲಿ ಗಾಯಗಳಾಗಿರುವ ಘಟನೆ ಜರುಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗುರುಪಾದಯ್ಯ ಕಲ್ಯಾಣಯ್ಯ ಮಠಪತಿ ಹಾಗೂ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಹಿಡಕಲ್‌ ಗ್ರಾಮದ ಅಕ್ಷತಾ, ಶ್ರೀಶೈಲ್ ಸತ್ತಿ ಗಾಯಗೊಂಡಿದ್ದಾರೆ. ಜಮಖಂಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣ ದಾಖಲಿಸಿಕೊಂಡ ತೇರದಾಳ ಠಾಣಾಧಿಕಾರಿ ಶಿವಾನಂದ ಸಿಂಗನ್ನವರ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆ ಕಾರ್ಯ ಕೈಗೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...