ಅದಾನಿ, ಅಂಬಾನಿಗಳನ್ನು ಗ್ರಾಮ ಪಂಚಾಯಿತಿಗೂ ತರುವ ಹುನ್ನಾರ ನಡೆದಿದೆ: ಸಚಿವ ಆರ್ ಬಿ ತಿಮ್ಮಾಪುರ್

Date:

ಯುಪಿಎ ಸರ್ಕಾರ ಆಡಳಿತದಲ್ಲಿದ್ದಾಗ ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಮನರೇಗಾ ಕಾಯ್ದೆಯನ್ನು ಜಾರಿಗೆ ತಂದು, ದೆಹಲಿಯಿಂದ ಆಡಳಿತ ಆಗಬಾದೆಂದು ಗ್ರಾಮ ಪಂಚಾಯಿತಿಗೆ ಇದರ ಅಧಿಕಾರ ನೀಡಿದ್ದರು. ಆದರೆ ಕಾರ್ಪೊರೇಟ್‌ಗಳ ಜತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಇಂದಿನ ಕೇಂದ್ರ ಸರ್ಕಾರವು ಅದಾನಿ, ಅಂಬಾನಿ ಅವರನ್ನು ಗ್ರಾಮ ಪಂಚಾಯಿತಿಗೂ ತರುವ ಹುನ್ನಾರ ಮಾಡುತ್ತಿದೆ ಎಂದು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ್ ಆರೋಪಿಸಿದರು.

ಬಾಗಲಕೋಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಉದ್ಯೋಗ ಖಾತ್ರಿ ಮೂಲಕ ತಮ್ಮ ಗ್ರಾಮಕ್ಕೆ ಬೇಕಾದ ಕೆಲಸವನ್ನು ಗ್ರಾಮದವರೇ ನಿರ್ಧಾರ ಮಾಡಿಕೊಳ್ಳುತ್ತಿದ್ದರು.ಈಗ ಅಧಿಕಾರವನ್ನು ಸಂಸತ್ತಿಗೆ ವರ್ಗಾಯಿಸಲಾಗಿದೆ” ಎಂದು ದೂರಿದರು.

“ಉದ್ಯೋಗ ಖಾತ್ರಿ ಯೋಜನೆಯಲ್ಲಿ ಬದಲಾವಣೆ ಮಾಡುವ ಮೂಲಕ ಗ್ರಾಮ ಪಂಚಾಯಿತಿಗಿದ್ದ ಅಧಿಕಾರವನ್ನು ಕಿತ್ತುಕೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಜನರ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರವೇ ಎಲ್ಲ ಅನುದಾನ ನೀಡುತ್ತಿತ್ತು. ಈಗ ಅದನ್ನು ಕೇಂದ್ರದ್ದು ಶೇ.60, ರಾಜ್ಯದ್ದು ಶೇ.40ರಷ್ಟು ಎಂದು ಬದಲಾಯಿಸಲಾಗಿದೆ. ಆ ಮೂಲಕ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಉಸ್ತುವಾರಿ ನೀಡಲಾಗಿದೆಯೇ ಎಂಬ ಪ್ರಶ್ನೆಗೆ, ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಲಿದ್ದೇವೆ. ಉಸ್ತುವಾರಿ ಯಾರದ್ದು ಎನ್ನುವುದಕ್ಕಿಂತ ಚುನಾವಣೆ ಗೆಲ್ಲುವುದು ಮುಖ್ಯವಾಗಿದೆ. ಗ್ಯಾರಂಟಿಗಳು ಕಾಂಗ್ರೆಸ್ ಕೈ ಹಿಡಿಯಲಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ಗ್ರಾಮೀಣ ಪ್ರದೇಶಗಳಲ್ಲಿ ನರೇಗಾ ಮೂಲಕ ಆಸ್ತಿ ಸೃಷ್ಟಿ: ಸಚಿವ ಎಚ್ ಕೆ ಪಾಟೀಲ್

“ಅನುದಾನ ಕಡಿತ ಮಾಡಲಾಗುತ್ತಿದೆ. ರಾಜ್ಯದ ತೆರಿಗೆಯಲ್ಲಿಯೂ ಕಡಿಮೆ ಪಾಲು ನೀಡಲಾಗುತ್ತಿದೆ. ಈ ಮೂಲಕ ಬಡಜನರ ಉದ್ಯೋಗ ಕಿತ್ತುಕೊಳ್ಳಲಾಗುತ್ತಿದೆ. ಕೇಂದ್ರದ ದೋರಣೆ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ರಾಮನ ಹೆಸರನ್ನು ರಾಜಕೀಯಕ್ಕಾಗಿ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯವನ್ನೂ ಹತ್ತಿಕ್ಕಲಾಗುತ್ತಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಯುಕೆಪಿ-3ರ ಭೂಸ್ವಾಧೀನ ಜಮೀನುದಾರರಿಗೆ ಪರಿಹಾರ ವಿತರಣೆ

ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ 14 ಸ್ಥಾನಗಳ ಪೈಕಿ 10 ಸ್ಥಾನಗಳಲ್ಲಿ...

ಬಾಗಲಕೋಟೆ | ಹಲ್ಲೆಗೋಳಗಾಗಿದ್ದ ದಲಿತ ಯುವಕ ಸಾವು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಾಲೆಯ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ...

ಇಳಕಲ್ | ಗೊರಬಾಳ ಗ್ರಾಪಂನಲ್ಲಿ ಭ್ರಷ್ಟಾಚಾರ ಆರೋಪ; ತನಿಖೆಗೆ ಒತ್ತಾಯ

ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಗೊರಬಾಳ ಗ್ರಾಮ ಪಂಚಾಯತ್‌ನಲ್ಲಿ 15ನೇ ಹಣಕಾಸು...

ಇರಾನ್‌ ಯುದ್ಧ | ವಿಜಯಪುರ-ಬಾಗಲಕೋಟೆ ಹೋಟೆಲ್‌ಗಳಿಗೆ ಸ್ವಲ್ಪ ತೊಂದರೆ: ಗೃಹಬಳಕೆ ಸಿಲಿಂಡರ್‌ಗಿಲ್ಲ ಕೊರತೆ

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳ ಪೂರೈಕೆಯಲ್ಲಿ...