ಬಾಗಲಕೋಟೆ | ಮುಧೋಳ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ರೈತರ ಮನವಿ

Date:

ದನಕರುಗಳಿಗೆ ಮೇವು ಇಲ್ಲದೆ ಸಂಕಷ್ಟ ಎದುರಾಗಿ ರೈತ ಕಾರ್ಮಿಕರ ಬದುಕು ದುಸ್ತರವಾಗಿದೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂತ್ರಸ್ರರಿಗೆ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದರು.

ಮುಧೋಳ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಆಗ್ರಹಿಸಿ ಗುರುವಾರ ಸಂಸದ ಪಿ.ಸಿ.ಗದ್ದಿಗೌಡರ ಅವರಿಗೆ ರೈತರು ಮತ್ತು ಸಂತ್ರಸ್ಥರು ಮನವಿ ಪತ್ರ ಸಲ್ಲಿಸಿದರು.

2024ರಲ್ಲಿ ಉಂಟಾದ ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಭಾಗದ ರೈತರ ಬೆಳೆಗಳು ಸಂಪೂರ್ಣ ಹಾಳಾಗಿದೆ. ಕೃಷಿ ಪಂಪ್‌ ಸೆಟ್‌ಗಳು ನಾಶವಾಗಿವೆ. ದನಕರುಗಳಿಗೆ ಮೇವು ಇಲ್ಲದೆ ಸಂಕಷ್ಟ ಎದುರಾಗಿದೆ. ಆದರೆ ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ಇದುವರೆಗೆ ಯಾವುದೇ ಪರಿಹಾರ ನೀಡಲಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶೀಘ್ರವೇ ಜಂಟಿಯಾಗಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಮುಖಂಡ ಸುಭಾಷ ಮಾತನಾಡಿ, ʼಮುಧೋಳ ತಾಲೂಕಿನ 37 ಹಳ್ಳಿಯ ರೈತರ ಬೆಳೆ ಘಟಪ್ರಭಾ ನದಿ ಪ್ರವಾಹದಿಂದ ಸಂಪೂರ್ಣ ನಾಶವಾಗಿದೆ. 2019 ರಿಂದ ಪದೇ ಪದೇ ಪ್ರವಾಹಕ್ಕೆ ತುತ್ತಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕೊಡಬೇಕುʼ ಎಂದು ಒತ್ತಾಯಿಸಿದರು.

ʼಪ್ರವಾಹದಿಂದ ಬೆಳೆ ಕಳೆದುಕೊಂಡು ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ರೈತರಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಪರಿಹಾರ ಅಲ್ಲದೇ ಅದಕ್ಕಿಂತ ಹೆಚ್ಚಿನ ಪರಿಹಾರ ನೀಡಬೇಕುʼ ಎಂದು ಉತ್ತರ ಕರ್ನಾಟಕ ಮುಳುಗಡೆ ಮತ್ತು ಪ್ರವಾಹ ಸಂತ್ರಸ್ತರ ರಕ್ಷಣಾ ಸಮಿತಿ ಅಧ್ಯಕ್ಷ ನಾಗೇಶ ಗೋಲಶೆಟ್ಟಿʼ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಅಂಗನವಾಡಿ ಅವ್ಯವಸ್ಥೆ | ಸಿಂಧಗಿ ; ಬಾಡಿಗೆ ಕಟ್ಟಡದಿಂದ ಮುಕ್ತಿ ಪಡೆಯಬಹುದೇ ತಾಲೂಕಿನ 66 ಅಂಗನವಾಡಿ ಕೇಂದ್ರಗಳು?

ಈ ಸಂದರ್ಭದಲ್ಲಿ ಪ್ರಮುಖರಾದ ವೈ.ಜಿ. ಪಾಟೀಲ್, ಯಲ್ಲಪ್ಪ ಮಸಗುಪ್ಪಿ, ಗಂಗಪ್ಪ ತಳವಾರ್, ಡಿ.ಎಸ್.ಪಾಟೀಲ್, ತಮ್ಮಣ್ಣ ಕೊರಡ್ಡಿ, ಅಹ್ಮದ್ ಮುಲ್ಲಾ, ಕರಿಯಪ್ಪ ಕಾಂಬಳೆ, ಕಾಮಣ್ಣ ಕುರುಬರ, ರಾಜೇಶ್ವರಿ ಮಠಪತಿ, ಕೃಷ್ಣ ಜೋಶಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...