ಬಾಗೇಪಲ್ಲಿ | ನನ್ನ ವಿರುದ್ಧ ಸೋತ ಅಭ್ಯರ್ಥಿಯ ದೂರಿನನ್ವಯ ಇಡಿ ದಾಳಿ: ಶಾಸಕ ಸುಬ್ಬಾರೆಡ್ಡಿ

Date:

ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸಿ ಸೋತಂತ ವ್ಯಕ್ತಿ, ʼಸುಬ್ಬಾರೆಡ್ಡಿಯವರ ವಿದೇಶದಲ್ಲಿ ಆಸ್ತಿ ಇದೆ. ಇವರ ಚುನಾವಣೆ ಅಫಿಡವಿಟ್ ಸರಿಯಿಲ್ಲʼ ಅಂತ ಕೇಸ್ ಹಾಕಿರುವ ಹಿನ್ನೆಲೆಯಲ್ಲಿ ನನ್ನ ಮೇಲೆ ಇ.ಡಿ ದಾಳಿ ನಡೆದಿದ್ದು, ಅಧಿಕಾರಿಗಳು ತನಿಖೆ ಮಾಡುತ್ತಾರೆ ಎಂದು ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ತಿಳಿಸಿದರು.

“ಇ.ಡಿ ಅಧಿಕಾರಿಗಳು ನನಗೆ ಮಲೇಷ್ಯಾದಲ್ಲಿ ನಿಮ್ಮ ಪ್ರಾಪರ್ಟಿ ಇದೆಯಾ ಅಂತ ಕೇಳ್ತಾರೆ, ಒಂದು ತಿಂಗಳ ಹಿಂದೆ ನನ್ನ ಸ್ನೇಹಿತರ ಮುಖಾಂತರ ನನಗೆ ವಾಟ್ಸ್ಯಾಪ್‌ ಮೆಸೇಜ್ ಬಂದಿದ್ದು, ವೀರಸ್ವಾಮಿ ರಂಗಸ್ವಾಮಿ ಯಾರು? ಅವರು ನನ್ನ ಆಸ್ತಿ ಇರುವಂತೆ ಒಂದು ಫೇಕ್ ಡ್ಯಾಕುಮೆಂಟ್ ಕ್ರೀಯೇಟ್ ಮಾಡಿದ್ದಾರೆ. ನಾನು ಆವತ್ತೆ ಬೆಂಗಳೂರು ಉತ್ತರ ಸೈಬರ್ ಕ್ರೈಂಗೆ ಹೋಗಿ ಕಂಪ್ಲೇಂಟ್ ಮಾಡಿದ್ದೆ. ಆದರೆ ಅವರು ನಿರ್ದಿಷ್ಟವಾಗಿ ವ್ಯಕ್ತಿ ಇಲ್ಲದೆ FIR ಮಾಡುವುಕ್ಕೆ ಆಗುವುದಿಲ್ಲವೆಂದು ಹೇಳಿದರು” ಎಂದರು.

“ವಿನಾಕಾರಣ, ಸತ್ಯಾಸತ್ಯತೆ ತಿಳಿಯದೆ ಅಧಿಕಾರಿಗಳು ನನ್ನ ಮೇಲೆ ದಾಳಿ ಮಾಡಿ ಹಲವಾರು ಪ್ರಶ್ನೆಗಳನ್ನು ಕೇಳಿದರು. ನಾನು ಇದನ್ನು ರಾಜಕೀಯ ಪ್ರೇರಿತ ಅಂತ ಹೇಳುವುದಿಲ್ಲ, ನನಗೆ ನಂಬಿಕೆ ಇದೆ. ನಾನಂತೂ ರಾಜಕೀಯದಲ್ಲಿ, ನನ್ನ ಜೀವನದಲ್ಲಿ ಯಾವುದೇ ಆಸೆ ಆಕಾಂಕ್ಷೆಗಳಿಗೆ ಆಸೆ ಪಡದೆ ಜೀವನ ನಡೆಸುತ್ತಿದ್ದೇನೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅನುದಾನದ ನಿರೀಕ್ಷೆಯಲ್ಲಿ ಬಿದರೆ ಸರ್ಕಾರಿ ಶಾಲೆ; ಹಳೆ ವಿದ್ಯಾರ್ಥಿಗಳಿಂದ ಮರುಜೀವ

“ಯಾವತ್ತೂ ಸರ್ಕಾರಕ್ಕೆ ಮೋಸ ಮಾಡುವ ಸುಳ್ಳು ಪ್ರಮಾಣ ಪತ್ರ ಕೊಡುವ ಕೆಲಸ ಮಾಡಿಲ್ಲ, ಕೆಲವರು ನಮ್ಮ ರಾಜಕೀಯ ವಿರೋಧಿಗಳ ಕುತಂತ್ರ ಬಿಟ್ಟರೆ, ಇದರಲ್ಲಿ ಯಾವುದೇ ಸತ್ಯ ಇಲ್ಲ. ನನಗೆ ವಿದೇಶದಲ್ಲಿ ಏನಾದ್ರೂ ಆಸ್ತಿ ಇದ್ದರೆ, ಇಡೀ ನನ್ನ ಆಸ್ತಿಯನ್ನು ನಿಮ್ಮ ಸರ್ಕಾರಕ್ಕೆ ಬರೆದು ಕೊಡುತ್ತೇನೆಂದು ನಾನು ಇ.ಡಿ ಅಧಿಕಾರಿಗಳಿಗೆ ಹೇಳಿದ್ದೇನೆ. ಇ.ಡಿ ಅಧಿಕಾರಿಗಳು 14ನೇ ತಾರೀಖು ವಿಚಾರಣೆಗೆ ಕರೆದಿದ್ದಾರೆ. ನಾನು ವಿಚಾರಣೆಗೆ ಹಾಜರಾಗುತ್ತೇನೆ” ಎಂದು ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...